ವಿರೋಧಿ ಚಟುವಟಿಕೆ : BJPಯಲ್ಲಿ ಪಕ್ಷ ತೊರೆವ ಸ್ಥಿತಿ ನಿರ್ಮಾಣ

ತಾಲೂಕು ಬಿಜೆಪಿಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಯುತ್ತಿರುವುದರಿಂದ ಮೂಲ ಕಾರ್ಯಕರ್ತರ ಮನಸ್ಸಿಗೆ ನೋವಾಗಿ ಪಕ್ಷ ತೊರೆವ ಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ಯುವ ಮುಖಂಡ ಅಶ್ವತ್‌್ಥ ಹೇಳಿದರು.

Anti  party activities hurt the minds of the original workers snr

 ಪಿರಿಯಾಪಟ್ಟಣ :  ತಾಲೂಕು ಬಿಜೆಪಿಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಯುತ್ತಿರುವುದರಿಂದ ಮೂಲ ಕಾರ್ಯಕರ್ತರ ಮನಸ್ಸಿಗೆ ನೋವಾಗಿ ಪಕ್ಷ ತೊರೆವ ಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ಯುವ ಮುಖಂಡ ಅಶ್ವತ್‌್ಥ ಹೇಳಿದರು.

ಪಕ್ಷದ ಪದಾಧಿಕಾರಿಗಳು ಮೂಲ ಕಾರ್ಯಕರ್ತರನ್ನು ಕಡೆಗಣಿಸುತ್ತಿದ್ದಾರೆ, ಪಕ್ಷದ ಕಾರ್ಯಕ್ರಮಗಳನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೆ ತರುವುದಿಲ್ಲ, ಗುಂಪುಗಾರಿಕೆ ರಾಜಕಾರಣ ನಡೆಸುತ್ತಿದ್ದಾರೆ, ತಾಲೂಕು ಮುಖಂಡರಲ್ಲಿ ಹೊಂದಾಣಿಕೆ ಕೊರತೆಯಿದೆ, ಪಕ್ಷದ ಕಾರ್ಯಕ್ರಮಗಳ ಬಗ್ಗೆ ಕಾರ್ಯಕರ್ತರಿಗೆ ಯಾವುದೇ ಮಾಹಿತಿ ನೀಡುತ್ತಿಲ್ಲ, ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳ ನಡುವೆ ಹೊಂದಾಣಿಕೆ ಕೊರತೆಯಿದೆ ಎಂದು ಸುದ್ದಿಗೋಷ್ಠಿಯಲ್ಲಿ ಅವರು ದೂರಿದರು.

ಮಹಿಳಾ ಸಬಲೀಕರಣಕ್ಕೆ ಬಿಜೆಪಿ ಸರ್ಕಾರ ಬದ್ಧ: ಶೋಭಾ ಕರಂದ್ಲಾಜೆ

ವಿವಿಧ ಮೋರ್ಚಾಗಳ ಪದಾಧಿಕಾರಿಗಳನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ, ಜಿಲ್ಲೆ ಹಾಗೂ ರಾಜ್ಯದಿಂದ ನೀಡುವ ಮಾಹಿತಿಯಲ್ಲಿ ತಪ್ಪು ಮಾಹಿತಿ ನೀಡುತ್ತಿದ್ದಾರೆ, ತಾಲೂಕಿನಲ್ಲಿ ಬಿಜೆಪಿ ಬಲವರ್ಧನೆಗೆ ಶ್ರಮಿಸಿದ ಹಿರಿಯ ನಾಯಕರನ್ನು ಪರಿಗಣನೆಗೆ ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿ ತಾಲೂಕು ಘಟಕ ತಪ್ಪುಗಳನ್ನು ತಿದ್ದಿ ಚುನಾವಣಾ ಸಂದರ್ಭ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋದರೆ ಅಭ್ಯರ್ಥಿ ಗೆಲುವಿಗೆ ಸಹಕಾರಿ ಆಗುತ್ತದೆ, ಇಲ್ಲವಾದಲ್ಲಿ ಪಕ್ಷ ಸಂಘಟನೆಗೆ ತೊಂದರೆಯಾಗಲಿದೆ ಎಂದರು. ಬಿಜೆಪಿ ಯುವ ಮುಖಂಡ ಗಿರೀಶ… ಇದ್ದರು.

ಬಿಜೆಪಿಯತ್ತ ಮುಖ ಮಾಡಿದ ಮಂಡ್ಯ ಮುಖಂಡ

ಮಂಡ್ಯ (ಮಾ.18): ಮಾಜಿ ಸಂಸದ ಜಿ.ಮಾದೇಗೌಡ ಅವರ ಬಗ್ಗೆ ಲಘುವಾಗಿ ಮಾತನಾಡಿ ಜೆಡಿಎಸ್‌ನಿಂದ ಉಚ್ಚಾಟನೆಗೊಂಡಿದ್ದ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರು ಇದೀಗ ಬಿಜೆಪಿಯತ್ತ ಮುಖ ಮಾಡಿದ್ದಾರೆ. ಜೆಡಿಎಸ್‌ನಿಂದ ಉಚ್ಚಾಟನೆಗೊಂಡ ಒಂದು ವರ್ಷದ ಬಳಿಕ ಬಿಜೆಪಿ ಸೇರುವ ಇಂಗಿತ ವ್ಯಕ್ತಪಡಿಸಿದ್ದು, ಭಾನುವಾರ ಬೆಂಗಳೂರಿನಲ್ಲಿ ನೆಲೆಸಿರುವ ನಾಗಮಂಗಲ ವಿಧಾನಸಭಾ ಕ್ಷೇತ್ರದ ಮತದಾರರ ಸಭೆಗೆ ಬಿಜೆಪಿ ಪಕ್ಷದ ಸಚಿವರನ್ನು ಆಹ್ವಾನಿಸಿರುವುದು ಶಿವರಾಮೇಗೌಡರು ಕಮಲ ಹಿಡಿಯಲು ರೆಡಿಯಾಗಿರುವುದರ ಮುನ್ಸೂಚನೆ ಎಂಬಂತೆ ಕಂಡುಬರುತ್ತಿದೆ.

ಪಕ್ಷೇತರರಾಗಿ ಒಮ್ಮೆ ವಿಧಾನಸಭೆಗೆ ಆಯ್ಕೆಯಾಗಿದ್ದನ್ನು  ಹೊರತುಪಡಿಸಿದರೆ ರಾಜಕೀಯ ಪಕ್ಷಗಳಿಂದ ವಿಧಾನಸಭೆಗೆ ಆಯ್ಕೆಯಾಗುವ ಅದೃಷ್ಟ ಇದುವರೆಗೂ ಶಿವರಾಮೇಗೌಡರಿಗೆ ಒಲಿದು ಬಂದಿಲ್ಲ. 2018ರಲ್ಲಿ ನಡೆದ ಲೋಕಸಭಾ ಉಪಚುನಾವಣೆಯಲ್ಲಿ ಶಿವರಾಮೇಗೌಡರು ಜೆಡಿಎಸ್- ಕಾಂಗ್ರೆಸ್ ಮಿತ್ರ ಪಕ್ಷಗಳ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸುವುದರೊಂದಿಗೆ ಆರು ತಿಂಗಳ ಸಂಸದ ಎನಿಸಿಕೊಂಡರು. ಪಕ್ಷಾಂತರ ಶಿವರಾಮೇಗೌಡರಿಗೆ ಹೊಸದೇನು ಅಲ್ಲ. 1996 ರಲ್ಲಿ ಜನತಾ ದಳದಲ್ಲಿದ್ದ ಎಲ್ಲಾ ಶಿವರಾಮೇಗೌಡರು 1999ರ ವೇಳೆಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. 

ಮಹಿಳಾ ಸಬಲೀಕರಣಕ್ಕೆ ಬಿಜೆಪಿ ಸರ್ಕಾರ ಬದ್ಧ: ಶೋಭಾ ಕರಂದ್ಲಾಜೆ

ಮತ್ತೆ 2009ರ ವೇಳೆಗೆ ಬಿಜೆಪಿ ಪಕ್ಷವನ್ನು ಸೇರಿದ ಶಿವರಾಮೇಗೌಡರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ 1,60,000 ಮತಗಳನ್ನು ಪಡೆದು ಪರಾಭವಗೊಂಡಿದ್ದರು. ಇದಾದ ಒಂದೇ ವರ್ಷದಲ್ಲಿ ಮತ್ತೆ ಕಾಂಗ್ರೆಸ್ ಕೈ ಹಿಡಿದ ಶಿವರಾಮೇಗೌಡರು 2014ರಲ್ಲಿ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜೆಡಿಎಸ್ ಅಭ್ಯರ್ಥಿ ಎನ್ ಅಪ್ಪಾಜಿಗೌಡರ ವಿರುದ್ಧ ಸೋಲನುಭವಿಸಿದ್ದರು. 2018ರ ಚುನಾವಣೆ ವೇಳೆಗೆ ಜೆಡಿಎಸ್ ನಲ್ಲಿದ್ದ ಎನ್ ಚೆಲುವರಾಯಸ್ವಾಮಿ ಕಾಂಗ್ರೆಸ್ ಸೇರ್ಪಡೆಗೊಂಡ ಬೆನ್ನೆ ಹಿಂದೆಯೇ ಶಿವರಾಮೇಗೌಡರು ಮತ್ತೆ ಜೆಡಿಎಸ್ ತೆನೆ ಹೊತ್ತರು.

Latest Videos
Follow Us:
Download App:
  • android
  • ios