Mandya: ವಿವಿಧ ಘಟಕಗಳ ದಳಪತಿಗಳ ನೇಮಕ
ಮುಂದಿನ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ತಾಲೂಕು, ಯುವ, ಮಹಿಳಾ ಹಾಗೂ ಪರಿಶಿಷ್ಟಜಾತಿ ಮತ್ತು ಪಂಗಡಗಳ ಘಟಕಗಳನ್ನು ಪುನಾರಚನೆ ಮಾಡಲಾಗಿದೆ.

ಮದ್ದೂರು : ಮುಂದಿನ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ತಾಲೂಕು, ಯುವ, ಮಹಿಳಾ ಹಾಗೂ ಪರಿಶಿಷ್ಟಜಾತಿ ಮತ್ತು ಪಂಗಡಗಳ ಘಟಕಗಳನ್ನು ಪುನಾರಚನೆ ಮಾಡಲಾಗಿದೆ.
ತಾಲೂಕು ಘಟಕದ ಅಧ್ಯಕ್ಷರಾಗಿ ಚಿಕ್ಕ ತಿಮ್ಮೇಗೌಡ ಪುನಾರಾಯ್ಕೆಯಾಗಿದ್ದಾರೆ. ಕಾರ್ಯಾಧ್ಯಕ್ಷರಾಗಿ ಮಾದನಾಯಕನ ಹಳ್ಳಿ ರಾಜಣ್ಣ, ಉಪಾಧ್ಯಕ್ಷರಾಗಿ ಮರಿಮಾಧು, ಹೊನ್ನೇಗೌಡ, ತಿಮ್ಮರಾಜು, ರವಿ, ಬೋರಯ್ಯ, ಹನುಮಂತ, ಶಂಕರೇಗೌಡ, ಕೆಂಚೇಗೌಡ, ಹೊನ್ನೇಗೌಡ, ಬಸವರಾಜು, ವಿರೂಪಾಕ್ಷ, ದೇವರಾಜ…, ವೆಂಕಟೇಶ್, ಶೇಖರ್, ಚಂದ್ರ ಶೇಖರ್, ಬಸವೇಗೌಡ ಆಯ್ಕೆಯಾಗಿದ್ದಾರೆ.
ಪ್ರಧಾನ ಕಾರ್ಯದರ್ಶಿಗಳಾಗಿ 23 ಮಂದಿ ಹಾಗೂ ಕಾರ್ಯದರ್ಶಿಗಳಾಗಿ 51 ಮಂದಿಯನ್ನು ಆಯ್ಕೆ ಮಾಡುವ ಮೂಲಕ ಜೆಡಿಎಸ್ ಪಕ್ಷದ ಬೂತ್ ಮಟ್ಟದ ನಾಯಕರುಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
ಜೆಡಿಎಸ್ (JDS) ಯುವ ಘಟಕದ ಪದಾಧಿಕಾರಿಗಳಾಗಿ ಎಂ.ಐ.ಪ್ರವೀಣ್, ಕಾರ್ಯಾಧ್ಯಕ್ಷರಾಗಿ ನಗರಕೆರೆ ಸಂದೀಪ್, ಉಪಾಧ್ಯಕ್ಷರಾಗಿ 9 ಮಂದಿ ಹಾಗೂ ಪ್ರಧಾನ ಕಾರ್ಯದರ್ಶಿಗಳಾಗಿ 21 ಮಂದಿ, ಕಾರ್ಯದರ್ಶಿಗಳಾಗಿ 25 ಮಂದಿಯನ್ನು ಆಯ್ಕೆ ಮಾಡಿ ಜೆಡಿಎಸ್ ಜಿಲ್ಲಾಧ್ಯಕ್ಷರು ಅನುಮೋದನೆ ನೀಡಿದ್ದಾರೆ.
ಮಹಿಳಾ (Woman) ಘಟಕದ ಅಧ್ಯಕ್ಷೆಯಾಗಿ ಪದ್ಮಾ ಹರೀಶ್, ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಚನ್ನರಾಜು, ದೇವಿರಮ್ಮ, ಪಾರ್ವತಮ್ಮ ಮರಿಸ್ವಾಮಿ, ಶೋಭಾ ಶಿವರಾಂ, ದಿವ್ಯ ರಾಮಚಂದ್ರ ಶೆಟ್ಟಿಅವರನ್ನು ನೇಮಕ ಮಾಡಲಾಗಿದೆ. ಪ್ರಧಾನ ಕಾರ್ಯದರ್ಶಿಗಳಾಗಿ 9 ಮಂದಿ ಹಾಗೂ ಕಾರ್ಯದರ್ಶಿಗಳಾಗಿ 12 ಮಂದಿ ಮಹಿಳೆಯರನ್ನು ಆಯ್ಕೆ ಮಾಡಲಾಗಿದೆ.
ಪರಿಶಿಷ್ಟಜಾತಿ ಮತ್ತು ಪಂಗಡಗಳ ಘಟಕದ ಅಧ್ಯಕ್ಷರಾಗಿ ಹೊಸಕೆರೆ ಕಾಳಯ್ಯ, ಕಾರ್ಯಾಧ್ಯಕ್ಷರಾಗಿ ಪಾಪಣ್ಣ, ಕೆಂಪರಾಜು, ತಮ್ಮಣ್ಣ, ಸಿದ್ದರಾಜು, ನಾಗರಾಜ… ಮೂರ್ತಿ ಉಪಾಧ್ಯಕ್ಷರಾಗಿ 6 ಮಂದಿ, ಪ್ರಧಾನ ಕಾರ್ಯದರ್ಶಿಗಳಾಗಿ 12 ಮಂದಿ, ಕಾರ್ಯದರ್ಶಿಗಳಾಗಿ 28 ಮಂದಿಯನ್ನು ನೇಮಕ ಮಾಡಿಲಾಗಿದೆ. ಶಾಸಕ ಡಿ.ಸಿ.ತಮ್ಮಣ್ಣ ನೀಡಿದ ಪದಾಧಿಕಾರಿಗಳ ಪಟ್ಟಿಗೆ ಜಿಲ್ಲಾಧ್ಯಕ್ಷರು ಅನುಮೋದನೆ ನೀಡಿದ್ದಾರೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಬಿಳಿಯಪ್ಪ ಸುದ್ದಿಗಾರರಿಗೆ ಮಾಹಿತಿ ನೀಡಿದರು.
ಸುದ್ದಿಗೊಷ್ಠಿಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಕೆ.ಸ್ವಾಮಿ, ಹೂತಗೆರೆ ಗ್ರಾಪಂ ಅಧ್ಯಕ್ಷ ರವಿಕುಮಾರ್, ಪುರಸಭಾ ಉಪಾಧ್ಯಕ್ಷೆ ಸುಮಿತ್ರಾ ರಮೇಶ್, ಸದಸ್ಯರಾದ ವನಿತಾ, ಬಸವರಾಜು, ತಾಲೂಕು ಉಪಾಧ್ಯಕ್ಷ ದೇವರಹಳ್ಳಿ ವೆಂಕಟೇಶ್ ಮುಖಂಡರಾದ ಕೂಳಗೆರೆ ಶೇಖರ್, ಮರಿಮಾಧು, ಮಹೇಂದ್ರ, ಅರವಿಂದ್, ಸಿ.ಎ.ಕೆರೆ ಮೂರ್ತಿ ಮತ್ತಿತ್ತರರು ಇದ್ದರು.
ಜೆಡಿಎಸ್ ಸರ್ಕಾರ ರಚನೆಗೆ ಒಂದು ಬಾರಿ ಬಹುಮತ ಕೊಡಿ
ಚಿಕ್ಕಬಳ್ಳಾಪುರ: ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಬಡತನವನ್ನ ಹೋಗಲಾಡಿಸಲಾಗಿಲ್ಲ. ಜೆಡಿಎಸ್ ಪಕ್ಷಕ್ಕೆ ರಾಜ್ಯದಲ್ಲಿ ಒಂದು ಬಾರಿ ಪೂರ್ಣ ಬಹುಮತದ ಸರ್ಕಾರ ಕೊಟ್ಟು ನೋಡಿ ನಿರುದ್ಯೋಗಿ ಯುವಕರಿಗೆ ಸರ್ಕಾರಿ ಉದ್ಯೋಗ ಕೊಡುವ ಕೆಲಸವನ್ನು ನಾವು ಪ್ರಾಮಾಣಿಕವಾಗಿ ಮಾಡುತ್ತೇವೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ಪಂಚರತ್ನ ರಥಯಾತ್ರೆಯ 10ನೇ ದಿನವಾದ ಭಾನುವಾರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಮೂಲಕ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿ ಮಂಚೇನಹಳ್ಳಿ, ಮುಸ್ಟೂರು, ಗೊಲ್ಲಹಳ್ಳಿ, ಪೆರೇಸಂದ್ರ, ಹೊನೇಗಲ್ಲು, ದಿಬ್ಬೂರು, ನಾಯನಹಳ್ಳಿ ಗ್ರಾಮಗಳಲ್ಲಿ ನಡೆದ ರಥಯಾತ್ರೆ ವೇಳೆ ಜನರನ್ನು ಉದ್ದೇಶಿಸಿ ಮಾತನಾಡಿದರು.
ಆರೋಗ್ಯ ಲೆಕ್ಕಿಸದೇ ಯಾತ್ರೆ: ಇಂದು ನನ್ನ ಆರೋಗ್ಯವನ್ನು ಲೆಕ್ಕಿಸದೆ ಪಂಚರತ್ನ ರಥಯಾತ್ರೆ ಕಾರ್ಯಕ್ರಮವನ್ನು ರಾಜ್ಯದಲ್ಲಿ ನೂರು ದಿನ ಹಮ್ಮಿಕೊಂಡಿದ್ದೇನೆ. ನಿಮಗೆ ನಮ್ಮ ಪಂಚರತ್ನ ಯೋಜನೆ ಬಗ್ಗೆ ತಿಳಿಸಲು ಓಡಾಡುತ್ತಿದ್ದೇನೆ. ಕಳೆದ 10 ದಿನಗಳಿಂದ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಉತ್ತಮ ಸ್ಪಂದನೆ ಸಿಗುತ್ತಿದೆಂದರು. ಸ್ವಾತಂತ್ರ್ಯ ಬಂದ ಬಳಿಕ ಎಷ್ಟೋ ನೇಮಕಾತಿಯಾಗಿಲ್ಲ. ಸರಿಯಾಗಿ ಕಟ್ಟಡ ಕಟ್ಟಿಲ್ಲ. ಎರಡು ವರ್ಷದಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಸೈಕಲ್ ಕೊಟ್ಟಿಲ್ಲ. ಈ ಭಾಗದಲ್ಲಿ ಬಸ್ ವ್ಯವಸ್ಥೆ ಕೂಡ ಸರಿಯಾಗಿಲ್ಲ. ಹೀಗಿರುವಾಗ ಬಡ ಮಕ್ಕಳು ಶಾಲೆಗೆ ಹೋಗಿ ಕಲಿಯೋದು ಹೇಗೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.