Asianet Suvarna News Asianet Suvarna News

ರೇಣುಕಾಚಾರ್ಯ ಅಣ್ಣನ ಮಗನ ಸಾವಿನ ಪ್ರಕರಣ: ಎಲ್ಲಾ ಆಯಾಮಗಳಲ್ಲಿ ತನಿಖೆ ಮಾಡ್ತೇವೆ, ಜ್ಞಾನೇಂದ್ರ

ಈ ಪ್ರಕರಣದಲ್ಲಿ ಎಲ್ಲಾ ಆಯಾಮಗಳಲ್ಲಿ ತನಿಖೆ ಮಾಡುತ್ತೇವೆ. COD ತನಿಖೆಗೆ ಕೊಡೋದಿಲ್ಲ, ನಮ್ಮ ಪೊಲೀಸರೇ ಸಮರ್ಥರಿದ್ದಾರೆ. ಪ್ರಕರಣವನ್ನ ನಿಭಾಯಿಸಿ, ತನಿಖೆ ನಡೆಸುತ್ತಾರೆ: ಸಚಿವ ಆರಗ ಜ್ಞಾನೇಂದ್ರ 

Araga Jnanendra React to MLA MP Renukacharya Brothers Son Death Case grg
Author
First Published Nov 4, 2022, 12:19 PM IST

ಹೊಸಪೇಟೆ(ನ.04): ಬೆಂಗಳೂರಿನಲ್ಲಿ ಕೆಂಪೇಗೌಡರ ಪ್ರತಿಮೆ ಅನಾವರಣದ ಹಿನ್ನೆಲೆಯಲ್ಲಿ ಇಂದು(ಶುಕ್ರವಾರ) ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರೂ ಆದ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ, ಕಂದಾಯ ಸಚಿವ ಆರ್. ಅಶೋಕ ಸೇರಿದಂತೆ ನಾಲ್ವರು ಸಚಿವರು ಹಂಪಿಗೆ ಬಂದು ಇಲ್ಲಿನ ಪವಿತ್ರ ಮಣ್ಣು ಕೊಂಡೊಯ್ದಿದ್ದಾರೆ.  ಗೃಹ ಸಚಿವ ಆರಗ ಜ್ಞಾನೇಂದ್ರ, ಯುವಜನ ಕ್ರೀಡಾ ಸಚಿವ ನಾರಾಯಣಗೌಡ, ಸಂಸದ ವೈ.ದೇವೇಂದ್ರಪ್ಪ ಈ ಸಂದರ್ಭದಲ್ಲಿ ಇದ್ದರು. ಹಂಪಿ ವಿರೂಪಾಕ್ಷೇಶ್ವರ, ಭುವನೇಶ್ವರಿ ದೇವಿಗೆ ವಿಶೇಷ ಪೂಜೆ ನೆರವೇರಿಸಿದ ಸಚಿವರು, ಬಳಿಕ ಮಣ್ಣು ಸಂಗ್ರಹಿಸಿದರು. ನಾಡಪ್ರಭು ಕೆಂಪೇಗೌಡ, ಶ್ರೀ ಕೃಷ್ಣದೇವರಾಯನ ಹೆಸರಲ್ಲಿ ಅರ್ಚನೆ ಮಾಡಿಸಿದ್ದಾರೆ.

ಇದಕ್ಕೂ ಮುನ್ನ ಸಚಿವರನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಬಿಜೆಪಿ ಮುಖಂಡರು ಸ್ವಾಗತಿಸಿದರು. ಅಲ್ಲಿಂದ ಹಂಪಿ ವರೆಗೆ ಬೈಕ್ ಜಾಥಾ ನಡೆಸಿದರು. ಅಲ್ಲಿ ವಿವಿಧ ಕಲಾ ತಂಡಗಳೊಂದಿಗೆ ಸಚಿವರು ವಿರೂಪಾಕ್ಷ ದೇಗುಲದ ವರೆಗೆ‌ ಹೆಜ್ಜೆ ಹಾಕಿದರು.

ರೇಣುಕಾಚಾರ್ಯ ಅಣ್ಣನ ಮಗ ಚಂದ್ರು ದೇಹ ಕೊಳೆತ ಸ್ಥಿತಿಯಲ್ಲಿ ಕಾರಿನ ಹಿಂಬದಿ ಸೀಟಿನಲ್ಲಿ ಪತ್ತೆ

ಎಲ್ಲಾ ಆಯಾಮಗಳಲ್ಲಿ ತನಿಖೆ ಮಾಡುತ್ತೇವೆ 

ಹೊನ್ನಾಳಿ ಶಾಸಕಿ ಎಂ.ಪಿ. ರೇಣುಕಾಚಾರ್ಯ ಅವರ ಅಣ್ಣನ ಮಗನ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು, ಈ ಪ್ರಕರಣದಲ್ಲಿ  ಎಲ್ಲಾ ಆಯಾಮಗಳಲ್ಲಿ ತನಿಖೆ ಮಾಡುತ್ತೇವೆ. COD ತನಿಖೆಗೆ ಕೊಡೋದಿಲ್ಲ, ನಮ್ಮ ಪೊಲೀಸರೇ ಸಮರ್ಥರಿದ್ದಾರೆ. ಪ್ರಕರಣವನ್ನ ನಿಭಾಯಿಸಿ, ತನಿಖೆ ನಡೆಸುತ್ತಾರೆ. ನಾನೊಬ್ಬ ಗೃಹ ಮಂತ್ರಿಯಾಗಿ, ತನಿಖೆ ಹಂತದಲ್ಲಿರೋದು ಮಾತನಾಡಿದ್ರೆ, ಅದು ಮತ್ತೇನೋ ಆಯಾಮ ಪಡೆಯುತ್ತದೆ. ಹಾಗಾಗಿ ತನಿಖೆ ನಡೆದ ಬಳಿಕ ನಾವು ಉತ್ತರ ನೀಡುತ್ತೇವೆ ಅಂತ ತಿಳಿಸಿದ್ದಾರೆ. 

ಶಿವಮೊಗ್ಗದಲ್ಲಿ ನಿರಂತರ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ ಅನ್ನೋ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಚಿವರು, ಈ ಹಿಂದೆಯೂ ಪ್ರಕರಣಗಳು ಹೆಚ್ಚಿದ್ವು, ಈಗ ಪ್ರಕರಣಗಳು ಕಡಿಮೆಯಾಗಿವೆ. ಕೊತ್ವಾಲ್ ರಾಮಚಂದ್ರ, ಹೆಬ್ಬೆಟ್ಟು ಮಂಜು ಅವರ ಕಾಲದಿಂದಲೂ ಸಹ, ಅಲ್ಲಿ ಕ್ರೈಂ ಇವೆ. ಈಗ ಕಡಿಮೆಯಾಗಿದೆ, ಯಾವುದೋ ಎರಡ್ಮೂರು ಘಟನೆಗಳು ಆದ ತಕ್ಷಣ ಹೆಚ್ಚಿವೆ ಅಂತ ಹೇಳಬೇಡಿ ಅಂತ ಆರಗ ಜ್ಞಾನೇಂದ್ರ ಹೇಳಿದ್ದಾರೆ. 
 

Follow Us:
Download App:
  • android
  • ios