ಕೊಪ್ಪಳ(ಅ.5): ನವೆಂಬರ್‌ 5 ರಿಂದ 16ರ ವರೆಗೆ ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಭೂ ಸೇನಾ ನೇಮಕಾತಿಗಾಗಿ ರಾರ‍ಯಲಿ ನಡೆಸಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೊಬರ್‌ 15 ಕೊನೆಯ ದಿನವಾಗಿದ್ದು, ಅರ್ಜಿ ಸಲ್ಲಿಸಬಹುದಾಗಿದೆ. ಕೊಪ್ಪಳ ಜಿಲ್ಲೆಯ ಆಸಕ್ತ ಯುವಕರು ಸೇನಾ ನೇಮಕಾತಿ ರ‍್ಯಾಲಿಯಲ್ಲಿ ಭಾಗವಹಿಸಬಹುದು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಯುವ ಸ್ಪಂದನ ಕೇಂದ್ರ ಜಿಲ್ಲಾ ಕ್ರೀಡಾಂಗಣ, ಕೊಪ್ಪಳ ಹಾಗೂ ದೂ: 08539-220859 ಮತ್ತು ಮೊ: 9535993848, 8095936395ಕ್ಕೆ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಪಿ. ಸುನೀಲ್‌ ಕುಮಾರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.