ಹಾಸನ(ಆ.13): ಜಿಲ್ಲೆಯ ಆರು ತಾಲೂಕುಗಳಲ್ಲಿ ಅತಿವೃಷ್ಟಿಯಿಂದ ಮನೆಗಳು, ನಾನಾ ಬೆಳೆಗಳು ಹಾನಿ, ರಸ್ತೆ, ಸೇತುವೆ, ಕಟ್ಟಡಗಳು ಮತ್ತಿತರ ಸಾರ್ವಜನಿಕ ಸ್ವತ್ತುಗಳು ಸೇರಿ ಅಂದಾಜು 150 ಕೋಟಿ ರು. ನಷ್ಟಸಂಭವಿಸಿದೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ತಿಳಿಸಿದ್ದಾರೆ.

ಈಗಾಗಲೇ ಮಳೆ ಹಾನಿ ಸಮೀಕ್ಷಾ ಕಾರ್ಯ ಪ್ರಾರಂಭ ವಾಗುದ್ದು, 2-3ದಿನಗಳಲ್ಲಿ ನಿಖರ ಅಂದಾಜು ತಿಳಿಯಲಿದೆ. ನಂತರ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಒಂದು ಸಾವು ಸಂಭವಿಸಿದೆ. ಜಿಲ್ಲಾಡಳಿತ ಪ್ರವಾಹ ನಿರ್ವಹಣೆಗಾಗಿ ಎಲ್ಲ ಅಗತ್ಯ ಮಂಜಾಗ್ರತಾ ಕ್ರಮ ವಹಿಸಿದೆ. ಮುನ್ನೆಚ್ಚರಿಕೆಯಿಂದ ಜಿಲ್ಲಾದ್ಯಂತ 2 ಸಾವಿರ ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ. ನಿರಾಶ್ರಿತರಿಗೆ ಪೂರಕವಾದ ಎಲ್ಲ ಊಟೋಪಚಾರ, ವಸತಿ, ಆಹಾರದ ಕಿಟ್‌, ತಾತ್ಕಾಲಿಕ ಪರಿಹಾರ ವಿತರಣೆಗೆ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ನೆರೆ ಸಂತ್ರಸ್ತರಿಗೆ 6 ಎಕರೆ ಪ್ರದೇಶದಲ್ಲಿ ಮನೆ ನಿರ್ಮಾಣ: ಪ್ರಜ್ವಲ್ ರೇವಣ್ಣ

ಜಿಲ್ಲೆಯಲ್ಲಿ 500 ಮನೆಗೆ ಸಂಪೂರ್ಣ ಅಥವಾ ಭಾಗಶಃ ಹಾನಿಯಾಗಿದೆ. ಎಲ್ಲ ನಷ್ಟಗಳನ್ನು ಪರಿಶೀಲಿಸಿ ದಾಖಲಿಸಿಕೋಳ್ಳಲಾಗುತ್ತಿದ್ದು, ಶೀಘ್ರವೇ ಪರಿಹಾರ ವಿತರಿಸಲಾಗುವುದು ಎಂದಿದ್ದಾರೆ.