Davanagere : ಕಾಂಗ್ರೆಸ್‌ ಮುಖಂಡ ಎಸ್.ಎಸ್. ಮಲ್ಲಿಕಾರ್ಜುನರನ್ನು ಬಂಧಿಸಿ-ಅಮಾಯಕರನ್ನು ಬಿಡಿ: ಬಿಜೆಪಿ ಆಗ್ರಹ

ರೈಸ್ ಮಿಲ್ಲಿನ ಆವರಣದಲ್ಲಿ ವನ್ಯಜೀವಿಗಳನ್ನು ಅಕ್ರಮವಾಗಿ ಸಾಕಾಣಿಕೆ ಮಾಡಿದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ನಾಯಕ ಎಸ್.ಎಸ್. ಮಲ್ಲಿಕಾರ್ಜುನ ಅವರನ್ನು ಈ ಕೂಡಲೇ ಬಂಧಿಸಬೇಕು. ಜತೆಗೆ ಅಮಾಯಕರನ್ನು ಕೈ ಬಿಡುವಂತೆ ಬಿಜೆಪಿ ಮುಖಂಡ ಯಶವಂತ ರಾವ್ ಜಾಧವ್ ಆಗ್ರಹಿಸಿದ್ದಾರೆ.

Arrest Congress leader SS Mallikarjuna release the innocent BJP demands sat

ವರದಿ : ವರದರಾಜ್ ಏಷ್ಯಾನೆಟ್‌ ಸುವರ್ಣ ನ್ಯೂಸ್ 

ದಾವಣಗೆರೆ (ಡಿ.27):  ರೈಸ್ ಮಿಲ್ಲಿನ ಆವರಣದಲ್ಲಿ ವನ್ಯಜೀವಿಗಳನ್ನು ಅಕ್ರಮವಾಗಿ ಸಾಕಾಣಿಕೆ ಮಾಡಿದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ನಾಯಕ ಎಸ್.ಎಸ್. ಮಲ್ಲಿಕಾರ್ಜುನ ಅವರನ್ನು ಈ ಕೂಡಲೇ ಬಂಧಿಸಬೇಕು. ಜತೆಗೆ ಅಮಾಯಕರನ್ನು ಕೈ ಬಿಡುವಂತೆ ಬಿಜೆಪಿ ಮುಖಂಡ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಯಶವಂತ ರಾವ್ ಜಾಧವ್ ತಿಳಿಸಿದರು.

ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವನ್ಯಜೀವಿಯನ್ನು ಕೊಂದು ತಿಂದ ಪ್ರಕರಣ ಮಾತ್ರವಲ್ಲದೆ  ತಮ್ಮ ಪಾರಂ ಹೌಸ್ ನಲ್ಲಿ ವನ್ಯಜೀವಿಗಳನ್ನು ಅಕ್ರಮವಾಗಿ ಇರಿಸಿಕೊಂಡಿದ್ದ ದಾವಣಗೆರೆಯ ಕಾಂಗ್ರೆಸ್ ಮುಖಂಡ ‌ಎಸ್. ಎಸ್‌. ಮಲ್ಲಿಕಾರ್ಜುನ್ ಅವರನ್ನು‌ ವನ್ಯಜೀವಿ ಕಾನೂನು ಪ್ರಕಾರ ಬಂಧಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ದಾವಣಗೆರೆ ಜಿಲ್ಲೆಯ ಬಿಜೆಪಿ ಮುಖಂಡರು ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಗೃಹ ಸಚಿವರಿಗೆ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ಕೊಡಿ: ಈ ಕುರಿತಂತೆ ವಿಧಾನ ಮಂಡಲದ ಉಭಯ ಸದನಗಳಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಚರ್ಚೆ ಮಾಡಲು ನಮ್ಮ ನಾಯಕರು ಸಿದ್ದರಿದ್ದಾರೆ. ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹಾಗೂ ದಾವಣಗೆರೆಯ ವಲಯ ಅರಣ್ಯ ಅಧಿಕಾರಿ ಮತ್ತು ಬೆಂಗಳೂರಿನ ಸಿಸಿಬಿ ಪೊಲೀಸ್ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಬೇಕೆಂದು ಒತ್ತಾಯಿಸಲಾಗಿದೆ ಎಂದು ಹೇಳಿದರು.

Davanagere: ಅನಧಿಕೃತವಾಗಿ ವನ್ಯಜೀವಿಗಳ ಸಾಕಾಣಿಕೆ: ಮಾಜಿ ಸಚಿವ ಮಲ್ಲಿಕಾರ್ಜುನ್ ಫಾರ್ಮ್‌ ಹೌಸ್‌ ಮೇಲೆ ಸಿಸಿಬಿ ಪೊಲೀಸರ ದಾಳಿ

ರೈಸ್‌ ಮಿಲ್‌ ಯಾರ ಹೆಸರಲ್ಲಿವೆ ದಾಖಲೆ ತೋರಿಸಿ: ನೀವು ಭ್ರಷ್ಟಾಚಾರ ರಹಿತರಾಗಿದ್ದರೆ ನಿಮ್ಮ ದಾಖಲೆ ನೀವು ತನ್ನಿ, ನಾನು ತರುತ್ತೇನೆ. ನಾನು ಭ್ರಷ್ಟಾಚಾರ ಮಾಡಿದ್ದರೆ ಅದರಿಂದ ಆಗುವ ನಷ್ಟವನ್ನು ತುಂಬಿಕೊಡಲು ನಾನು ಸಿದ್ದ. ಹಾಗೆಯೇ ನಿಮ್ಮ ವಿರುದ್ಧ ಭ್ರಷ್ಟಾಚಾರ ಸಾಬೀತಾದರೆ ನೀವು ನಷ್ಟ ತುಂಬಿಕೊಡಲು ಸಿದ್ದರಿದ್ದೀರಾ ಎಂದು ಬಹಿರಂಗವಾಗಿ ಹೇಳಿಕೆ ನೀಡಿದರು. ಜತೆಗೆ ವನ್ಯಜೀವಿಗಳು ಸಿಕ್ಕಿರುವ ರೈಸ್ ಮಿಲ್ಲು ನಿಮ್ಮ ಒಡೆತನದಲ್ಲಿ ಇವೆಯೋ ಅಥವಾ ಇಲ್ಲವೋ ಮೊದಲು ದಾಖಲೆಗಳನ್ನು ಬಿಡುಗಡೆ ಮಾಡಿ ಎಂದು ಆಗ್ರಹಿಸಿದರು.

ಕೆಂಪಣ್ಣಗೂ ಕಾಂಗ್ರೆಸ್‌ಗೂ ಏನು ಸಂಬಂಧ: ಇದಲ್ಲದೇ ದಾವಣಗೆರೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಸೋಮವಾರ ಪ್ರತಿಭಟನೆ ನಡೆಸಿದ್ದು, ಕೆಂಪಣ್ಣಗೂ ಕಾಂಗ್ರೆಸ್ ಪಕ್ಷಕ್ಕೂ ಏನು ಸಂಬಂಧ, ಯಾವುದೇ ಅರೋಪ ಮಾಡುವ ಬದಲಿಗೆ ಸೂಕ್ತ ದಾಖಲೆ ಇಟ್ಟುಕೊಂಡು ಆರೋಪ ಮಾಡಬೇಕು. ಕೆಂಪಣ್ಣ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ದಾಖಲೆ ಇಲ್ಲದ ಪರಿಣಾಮವಾಗಿ ಕೋರ್ಟಿನ ಆದೇಶದ ಮೇರೆಗೆ ಬಂಧನ ಮಾಡಲಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಕೋರ್ಟಿನ ಬಗ್ಗೆ ಕಾಳಜಿ ಇಲ್ಲ. ಪ್ರಕರಣದ ತನಿಖೆಯ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Davanagere crime: ಪ್ರೀತಿ ನಿರಾಕರಿಸಿದ ಯವತಿಯನ್ನು ನಡುರಸ್ತೆಯಲ್ಲೇ ಕತ್ತು ಸೀಳಿ ಕೊಂದು, ವಿಷ ಸೇವಿಸಿದ ಪಾಗಲ್ ಪ್ರೇಮಿ

ಇಂದು ನಡೆದ ಸುದ್ದಿಗೋಷ್ಟಿಯಲ್ಲಿ ದೂಡಾ ಅಧ್ಯಕ್ಷ ಎ.ವೈ.ಪ್ರಕಾಶ್, ಮೇಯರ್ ಜಯಮ್ಮ, ರಾಜನಹಳ್ಳಿ ಶಿವಕುಮಾರ್, ಲೋಕಿಕೆರೆ ನಾಗರಾಜ್, ಎಲ್.ಡಿ.ಗೋಣೆಪ್ಪ, ಸೋಗಿ ಶಾಂತಕುಮಾರ್, ಎಸ್.ಟಿ.ವೀರೇಶ್, ರಾಕೇಶ್ ಜಾಧವ್, ಚೇತನ್ ಇತರರು ಇದ್ದರು.

Latest Videos
Follow Us:
Download App:
  • android
  • ios