ಕಲಬುರಗಿ: ಸೂಕ್ತ ಚಿಕಿತ್ಸೆ ನೀಡುತ್ತಿಲ್ಲ ಎಂದು ವೈದ್ಯನ ಮೇಲೆ ಹಲ್ಲೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ..!

ಅಪಘಾತವಾಗಿ ಗಾಯಗೊಂಡ ರೋಗಿಯೊಬ್ಬನ ಕಡೆಯವರು ವೈದ್ಯರ ಮೇಲೆ ಹಲ್ಲೆ ಮಾಡಿದ್ದಾರೆ. ಆಸ್ಪತ್ರೆಯ ಸಿಬ್ಬಂದಿ ಮತ್ತು ವೈದ್ಯರ ಮೇಲೆ ಕಳೆದ ರಾತ್ರಿ ನಡೆದ ಹಲ್ಲೆಯ ದೃಷ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. 

assault on doctor for not giving proper treatment at sedam government hospital in kalaburagi grg

ಕಲಬುರಗಿ(ಜು.24):  ಸೂಕ್ತ ಚಿಕಿತ್ಸೆ ನೀಡುತ್ತಿಲ್ಲ ಎಂದು ಆರೋಪಿಸಿ ರೋಗಿ ಸಂಬಂಧಿಕರು ವೈದ್ಯನ ಮೇಲೆ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಸೇಡಂ ಸರಕಾರಿ ಆಸ್ಪತ್ರೆಯಲ್ಲಿ ಇಂದು(ಬುಧವಾರ) ನಡೆದಿದೆ. 

ಅಪಘಾತವಾಗಿ ಗಾಯಗೊಂಡ ರೋಗಿಯೊಬ್ಬನ ಕಡೆಯವರು ವೈದ್ಯರ ಮೇಲೆ ಹಲ್ಲೆ ಮಾಡಿದ್ದಾರೆ. ಆಸ್ಪತ್ರೆಯ ಸಿಬ್ಬಂದಿ ಮತ್ತು ವೈದ್ಯರ ಮೇಲೆ ಕಳೆದ ರಾತ್ರಿ ನಡೆದ ಹಲ್ಲೆಯ ದೃಷ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. 

ಪಡಿತರ ಅಕ್ಕಿ ಅಕ್ರಮದಲ್ಲಿ ಪ್ರಭಾವಿ ಸಚಿವನ ಹೆಸರು ? ಬಂಧಿತ ಮಣಿಕಂಠ ರಾಥೋಡ್ ಬರೆದಿದ್ದಾರೆನ್ನಲಾದ ಪತ್ರದಲ್ಲಿ ಏನಿದೆ?

ವೈದ್ಯರ ಮೇಲಿನ ಹಲ್ಲೆಯ ದೃಶ್ಯಗಳು ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ. ಹಲ್ಲೆ ಖಂಡಿಸಿ‌‌ ಸೇಡಂ ತಾಲೂಕಾ ಆಸ್ಪತ್ರೆ ವೈದ್ಯರು ಸಿಡಿದೆದ್ದಿದ್ದಾರೆ. ಸೇಡಂ ತಾಲೂಕಾ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿಗಳು ಪ್ರತಿಭಟನೆ ನಡೆಸಿದ್ದಾರೆ. 
ತಾಲೂಕಾ ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿ ವೈದ್ಯರ ಮತ್ತು ಆಸ್ಪತ್ರೆ ಸಿಬ್ಬಂದಿಗಳ ರಕ್ಷಣೆಗೆ ಬಿಗಿ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ. ಹಲ್ಲೆ ನಡೆಸಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. 

Latest Videos
Follow Us:
Download App:
  • android
  • ios