Asianet Suvarna News Asianet Suvarna News

ಮತ ಎಣಿಕೆ: ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿ​ಸಿ ಜಿಲ್ಲಾ​ಧಿ​ಕಾರಿ ಆದೇಶ

ವಿಧಾನಸಭೆ ಚುನಾವಣೆಯ ಮತ ಎಣಿಕೆಯು ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ನಡೆಯಲಿದ್ದು, ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮೇ 13ರಂದು ಬೆಳಗ್ಗೆ 6, ಮೇ 14ರಂದು ಬೆಳಗ್ಗೆ 6ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಆರ್‌.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.

Assembly Elections: Prohibitory Ordered in District on Counting Day shivamogga DC Dr Selvamani R IAS rav
Author
First Published May 7, 2023, 9:34 AM IST

ಶಿವಮೊಗ್ಗ (ಮೇ.7) : ವಿಧಾನಸಭೆ ಚುನಾವಣೆಯ ಮತ ಎಣಿಕೆಯು ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ನಡೆಯಲಿದ್ದು, ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮೇ 13ರಂದು ಬೆಳಗ್ಗೆ 6, ಮೇ 14ರಂದು ಬೆಳಗ್ಗೆ 6ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಆರ್‌.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.

ನಿಷೇಧಾಜ್ಞೆ ಜಾರಿ ಮಾಡಿದ ಅವಧಿಯಲ್ಲಿ 5 ಜನ ಮೇಲ್ಪಟ್ಟು ಗುಂಪುಗಾರಿಕೆ ಮಾಡುವುದಾಗಲಿ, ಇತರ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಲು ಅವಕಾಶವಿರುವುದಿಲ್ಲ ಎಂದವರು ತಿಳಿಸಿದ್ದಾರೆ. ಯಾವುದೇ ಮೆರವಣಿಗೆ, ಸಭೆ, ಸಮಾರಂಭಗಳು, ವಿಜಯೋತ್ಸವ ಹಾಗೂ ಇತರೆ ಸಾರ್ವಜನಿಕ ಸಮಾವೇಶ ನಡೆಸುವಂತಿಲ್ಲ. ಶಸ್ತ್ರ, ಕುಡುಗೋಲು, ಖಡ್ಗ, ಚೂರಿ, ಬಂದೂಕು, ಕೋಲು ಅಥವಾ ದೇಹಕ್ಕೆ ಅಪಾಯ ಉಂಟು ಮಾಡಬಹುದಾದ ಮಾರಕಾಸ್ತ್ರಗಳನ್ನು ಒಯ್ಯುವಂತಿಲ್ಲ. ಯಾವುದೇ ವಿನಾಶಕಾರಿ ವಸ್ತು ಇಲ್ಲವೇ ಸ್ಪೋಟಕವಸ್ತು ಒಯ್ಯತಕ್ಕುದ್ದಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಶಿವಮೊಗ್ಗದ ಶಾಂತಿಗಾಗಿ ನನ್ನ ಸ್ಪರ್ಧೆ: ಆಯನೂರು ಮಂಜುನಾಥ್‌

ಯಾವುದೇ ವ್ಯಕ್ತಿ ನಿಷೇಧಿಸಿರುವ ಮಾರಕಾಸ್ತ್ರ, ಸ್ಫೋಟಕ ವಸ್ತುಗಳನ್ನು, ಬಂದೂಕುಗಳನ್ನು ಹೊಂದಿದ್ದಲ್ಲಿ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್‌ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂತಹ ವ್ಯಕ್ತಿಯ ಬಳಿಯಲ್ಲಿರುವ ಮಾರಕಾಸ್ತ್ರಗಳನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾಗುವುದು. ಅಣುಕು ಶವಗಳ ಪ್ರದರ್ಶನ, ಪ್ರತಿಮೆಗಳನ್ನು ಪ್ರದರ್ಶನ ಮಾಡುವುದು ಪಟಾಕಿ ಸಿಡಿಸಿ ಸಂಭ್ರಮಿಸುವುದನ್ನು ನಿಷೇಧಿಸಲಾಗಿದೆ. ಬಹಿರಂಗವಾಗಿ ಘೋಷಣೆ ಕೂಗುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಅತಿಕ್ರಮಿಸಬಹುದಾದ ಕೃತ್ಯಗಳನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದಾತ್ಮಕವಾಗಿ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ. ಪ್ರಜಾಪ್ರಾತಿನಿಧ್ಯ ಕಾಯ್ದೆ 1951ರಲ್ಲಿನ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ.

ಆದೇಶ ಉಲ್ಲಂಘನೆ ವಿರುದ್ಧ ಭಾರತ ದಂಡಸಂಹಿ​ತೆ ಕಲಂ 188ರ ಅನ್ವಯ ಕ್ರಮ ಜರುಗಿಸಲಾಗುವುದು. ನಿಷೇಧಾಜ್ಞೆಯು ಸದುದ್ದೇಶದ ಕಾರ್ಯಗಳಾದ ಶವಸಂಸ್ಕಾರ, ಮದುವೆ, ಧಾರ್ಮಿಕ ಆಚರಣೆ ನಡೆಸಲು ಹಾಗೂ ದೇವಸ್ಥಾನ, ಚಚ್‌ರ್‍ ಹಾಗೂ ಮಸೀದಿಗಳಿಗೆ ಪ್ರಾರ್ಥನೆಗೆ ತೆರುಳುವವರಿಗೆ ಹಾಗೂ ಇನ್ನಿತರ ಸಮಾರಂಭಗಳನ್ನು ನಡೆಸಲು ಸಂಬಂಧಪಟ್ಟಪೊಲೀಸ್‌ ಅಧಿಕಾರಿಗಳಿಂದ ಅನುಮತಿ ಪಡೆಯಬೇಕು ಎಂದು ಡಿಸಿ ತಿಳಿಸಿದ್ದಾರೆ.

ರಾತ್ರೋರಾತ್ರಿ ಮನೆಗೆ ನುಗ್ಗಿದ ಚಿರತೆ: ಕಕ್ಕಾಬಿಕ್ಕಿಯಾದ ಮನೆಯ ನಿವಾಸಿಗಳು!

ಸಂತೆ, ಜಾತ್ರೆ ನಿಷೇಧ

ಶಿವಮೊಗ್ಗ ಜಿಲ್ಲೆಯಾದ್ಯಂತ ವಿಧಾನಸಭೆ ಚುನಾವಣೆ-2023ರ ಮತದಾನ ಕಾರ್ಯವು ಮೇ.10 ರಂದು ಹಾಗೂ ಮತ ಎಣಿಕೆ ಕಾರ್ಯವು ಮೇ 13 ರಂದು ನಡೆಯಲಿದ್ದು, ಈ ಎರಡು ದಿನಗಳಂದು ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಸಂತೆ ಮತ್ತು ಜಾತ್ರೆಗಳನ್ನು ನಡೆಸದಂತೆ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಆರ್‌.ಸೆಲ್ವಮಣಿ ಆದೇಶಿಸಿದ್ದಾರೆ.

Follow Us:
Download App:
  • android
  • ios