ಅಥಣಿ(ಡಿ.05): ನೀನು ಚುನಾವಣೆಯಲ್ಲಿ ಗೆಲ್ಲಬೇಕು, ಮಂತ್ರಿಯಾಗಬೇಕು, ಕ್ಷೇತ್ರದ ಅಭಿವೃದ್ಧಿ ಮಾಡಬೇಕು ಆಲ್ ದಿ ಬೆಸ್ಟ್ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಅಥಣಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಅವರಿಗೆ ಹೇಳಿದ್ದಾರೆ. 

ಗುರುವಾರ ಪಟ್ಟಣದ ಡಿಸಿಎಂ ಲಕ್ಷ್ಮಣ ಸವದಿ ಮನೆಗೆ ಆಗಮಿಸಿದ ಮಹೇಶ್ ಕುಮಟಳ್ಳಿಗೆ ಆಲ್ ದಿ ಬೆಸ್ಟ್ ಹೇಳಿದ್ದಾರೆ. ಈ ವೇಳೆ ಪ್ರತಿಕ್ರಿಯೆ ನೀಡಿದ ಕುಮಟಳ್ಳಿ ಸೇಮ್ ಟು ಯೂ ಅಣ್ಣಾ, ನಿನ್ನ ಆಶೀರ್ವಾದ ನಮ್ಮ ಮೇಲೆ ಇರಲಿ ಅಣ್ಣಾ ಎಂದು ಹೇಳಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಮಹೇಶ್ ಕುಮಟಳ್ಳಿ, ಬಿಜೆಪಿಯಿಂದ ಲಕ್ಷ್ಮಣ ಸವದಿ ಸ್ಪರ್ಧಿಸಿ ಬದ್ಧ ವೈರಿಗಳಂತೆ ಕಾದಾಡಿದ್ದರು. ಇದೀಗ ಇಬ್ಬರೂ ಭಾಯ್ ಭಾಯ್ ಎಂದು ಹೇಳಿಕೊಳ್ಳುತ್ತಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಗೆಲುವು ನನ್ನದೆ. ಪ್ರವಾಹ ಪೀಡಿತ ಪ್ರದೇಶಗಳಲ್ಲೂ ಸಂತ್ರಸ್ತರು ಆಶೀರ್ವಾದ ಮಾಡಲಿದ್ದಾರೆ. ಸವದಿ ಬೆಂಬಲಿಗರಲ್ಲಿ ಅಸಮಾಧಾನ ಇದ್ದದ್ದು ನಿಜ, ನಾವು ಡಿಸಿಎಂ ಸವದಿ ಅಸಮಧಾನಿತರನ್ನ ವಿಶ್ವಾಸಕ್ಕೆ ತೆಗೆದುಕೊಂಡಿದ್ದೇವೆ. ಚುನಾವಣೆಯನ್ನ ಧೈರ್ಯದಿಂದ ಎದುರಿಸುತ್ತಿದ್ದೇನೆ. ಡಿಸಿಎಂ ಲಕ್ಷ್ಮಣ ಅಥಣಿಯಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನ ಪರಿಗಣಿಸಿ ಜನರು ಮತ ನೀಡಲಿದ್ದಾರೆ ಎಂದು ಹೇಳಿದ್ದಾರೆ. 

ಇಂದು ರಾಜ್ಯದಲ್ಲಿ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದ್ದು, 9ರಂದು ಫಲಿತಾಂಶ ಪ್ರಕಟವಾಗಲಿದೆ.