ಶಹಾಪುರ -  ಕೋವಿಡ್‌ ಸೆಂಟರ್‌ ತೆರೆಯಲು ಮುಂದಾಗಿದ್ದಕ್ಕೆ ಜನರ ವಿರೋಧ ಕೋವಿಡ್ ಕೇರ್‌ ಸೆಂಟರ್‌ಗೆ ಸ್ಥಳೀಯರಿಂದ ತೀವ್ರ ವಿರೋಧ   ವೈದ್ಯರು ಹಾಗೂ ಸಿಬ್ಬಂದಿಯ ಮೇಲೆ ಹಲ್ಲೆ 

ಬೆಳಗಾವಿ (ಮೇ.11): ಕಲಬುರಗಿಯ ಸೇಡಂ ಬಳಿಕ ಇದೀಗ ಬೆಳಗಾವಿ ಜಿಲ್ಲೆಯ ಶಹಾಪುರಲ್ಲೂ ಕೋವಿಡ್‌ ಸೆಂಟರ್‌ ತೆರೆಯಲು ಮುಂದಾಗಿದ್ದ ವೈದ್ಯರ ಮೇಲೆ ಕೆಲವು ಕಿಡಿಗೇಡಿಗಳು ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. 

ಶಹಾಪುರದಲ್ಲಿರುವ ಮಾಯಿ ಆಸ್ಪತ್ರೆಯಲ್ಲಿ ಕೋವಿಡ್‌ ಕೇಂದ್ರ ಆರಂಭಿಸಲಾಗಿದ್ದು ಇದಕ್ಕೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ಜತೆಗೆ 50ಕ್ಕೂ ಅಧಿಕ ಜನರು ಇಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯರು ಹಾಗೂ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ್ದಾರೆ. 

18 ಮೇಲ್ಪಟ್ಟವರಿಗೆ ಲಸಿಕೆ: ನೋಂದಣಿ ಮಾಡಿಕೊಂಡವರಿಗೆ ಮಾತ್ರ ಲಭ್ಯ! ..

ನಂತರ ಈ ವಿಚಾರ ತಿಳಿಯುತ್ತಿದ್ದಂತೆ ಶಹಾಪುರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ನಂತರ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.

ಘಟನೆಗೆ ಐಎಂಎನ ಬೆಳಗಾವಿ ಘಟಕ ತೀವ್ರ ವಿರೋಧ ವ್ಯಕ್ತಪಡಿಸಿದ್ದು ಒಂದು ವೇಳೆ ಆರೋಪಿಗಳ ಬಂಧನವಾಗದಿದ್ದದರೆ ಕ್ಲಿನಿಕ್‌ಗಳನ್ನು ಬಂದ್‌ ಮಾಡುವುದಾಗಿ ಐಎಂಎ ಎಚ್ಚರಿಕೆಯನ್ನೂ ನೀಡಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona