ಶಿವಮೊಗ್ಗ [ಡಿ.30]: ಭದ್ರಾವತಿ ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಇದರಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ. 

ಭದ್ರಾವತಿ ತಾಲೂಕಿನ ಕಂಬದಾಳು ಹೊಸೂರು ಗ್ರಾಮದಲ್ಲಿ ಶಾಂತಕುಮಾರ್ [50] ಎಂಬುವವರ ಮೇಲೆ ಗಂಭೀರವಾಗಿ ಹಲ್ಲೆ ಮಾಡಲಾಗಿದೆ. 

ಶನಿವಾರ ರಾತ್ರಿ ಶಾಂತಕುಮಾರ್ ಅವರು ಮನೆಯಲ್ಲಿ ಊಟ ಮಾಡುತ್ತಿದ್ದ ವೇಳೆ ಆಗಮಿಸಿದ ದುಷ್ಕರ್ಮಿಗಳು ಮನೆಯಿಂದ ಹೊರಗೆ ಕರೆಸಿಕೊಂಡು ಏಕಾ ಏಕಿ ಹಲ್ಲೆ ನಡೆಸಿದ್ದಾರೆ. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. 

ಈ ವೇಳೆ ಗಂಭೀರವಾಗಿ ಗಾಯಗೊಂಡ ಶಾಂತಕುಮಾರ್ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಶಾಂತಕುಮಾರ್ ಮೇಲೆ ನಡೆದ ಹಲ್ಲೆ ಕಾರಣವೇನು ಎನ್ನುವುದು ತಿಳಿದು ಬಂದಿಲ್ಲ. ಈ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.