ಆ್ಯಪ್‌ ಆಧಾರಿತ ಆಟೋ ರಿಕ್ಷಾ ಸೇವೆಗೆ ದರ ನಿಗದಿಪಡಿಸುವ ಸಂಬಂಧ ನ.25ರೊಳಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೈಕೋರ್ಟ್‌ಗೆ ಮಾಹಿತಿ ನೀಡಿದ ಸರ್ಕಾರ 

ಬೆಂಗಳೂರು(ನ.22):  ಆ್ಯಪ್‌ ಆಧಾರಿತ ಆಟೋ ರಿಕ್ಷಾ ಸೇವೆಗೆ ದರ ನಿಗದಿಪಡಿಸುವ ಸಂಬಂಧ ನ.25ರೊಳಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಆ್ಯಪ್‌ ಆಧಾರಿತ ಆಟೋರಿಕ್ಷಾ ಸೇವೆ ಸ್ಥಗಿತಗೊಳಿಸುವಂತೆ ಸೂಚಿಸಿ ಸಾರಿಗೆ ಇಲಾಖೆ ಹೊರಡಿಸಿರುವ ಆದೇಶ ಪ್ರಶ್ನಿಸಿ ಎಎನ್‌ಐ ಟೆಕ್ನಾಲಜೀಸ್‌ ಪ್ರೈವೇಟ್‌ ಲಿಮಿಟೆಡ್‌ (ಓಲಾ), ಉಬರ್‌ ಇಂಡಿಯಾ ಟೆಕ್ನಾಲಜೀಸ್‌ ಪ್ರೈವೇಟ್‌ ಲಿಮಿಟೆಡ್‌ ಹಾಗೂ ರೊಪ್ಪೆನ್‌ ಟ್ರಾನ್ಸ್‌ಪೊರ್ಟೇಷನ್‌ ಸವೀರ್‍ಸಸ್‌ (ರಾರ‍ಯಪಿಡೋ) ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದು, ದರ ಹೆಚ್ಚಳಕ್ಕೆ ಅನುಮತಿ ಕೋರಿ ಮಧ್ಯಂತರ ಅರ್ಜಿ ಸಲ್ಲಿಸಿವೆ.

ಆ ಅರ್ಜಿಗಳ ವಿಚಾರಣೆ ವೇಳೆ ಸರ್ಕಾರದ ಪರ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ಕೆ. ನಾವದಗಿ ಹಾಜರಾಗಿ, ದರ ನಿಗದಿ ವಿಚಾರ ಕುರಿತು ಸಂಬಂಧಪಟ್ಟವರಿಂದ ಅಹವಾಲು ಅಹ್ವಾನಿಸಲಾಗಿದೆ. ಈ ಬಗ್ಗೆ ನ.25 ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಹಾಗಾಗಿ, ಸರ್ಕಾರ ತೀರ್ಮಾನ ಕೈಗೊಳ್ಳುವರೆಗೂ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮಧ್ಯಂತರ ಆದೇಶ ನೀಡಬಾರದು ಎಂದು ಕೋರಿದರು. ಆ ಮನವಿ ಆಲಿಸಿದ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ಪೀಠ ಅರ್ಜಿ ವಿಚಾರಣೆಯನ್ನು ನ.28ಕ್ಕೆ ಮುಂದೂಡಿತು.

ಬೆಂಗಳೂರು: 100 ಕನಿಷ್ಠ ದರಕ್ಕೆ ಆ್ಯಪ್‌ ಆಟೋ ಬೇಡಿಕೆ..!

ಪ್ರಕರಣ ಹಿನ್ನೆಲೆ:

ಆ್ಯಪ್‌ ಆಧಾರಿತ ಓಲಾ-ಉಬರ್‌ ಆಟೋರಿಕ್ಷಾ ಸೇವೆ ಸ್ಥಗಿತಗೊಳಿಸುವ ಕುರಿತು ವಿವರಣೆ ಕೇಳಿ ಅ.6ರಂದು ನೋಟಿಸ್‌ ನೀಡಿದ್ದ ಸಾರಿಗ ಇಲಾಖೆ, ಸೇವೆ ಸ್ಥಗಿತಗೊಳಿಸಲು ಅ.11ರಂದು ಆದೇಶಿಸಿತ್ತು. ಇದರಿಂದ, ಅರ್ಜಿದಾರ ಕಂಪನಿಗಳು ಹೈಕೋರ್ಟ್‌ ಮೆಟ್ಟಿಲೇರಿವೆ. ಅಗ್ರಿಗೇಟರ್‌ ಸಂಸ್ಥೆಗಳಿಗೆ ನಿಯಮಗಳ ಪ್ರಕಾರ ಟ್ಯಾಕ್ಸಿ ಸೇವೆ ಒದಗಿಸಕು ಮಾತ್ರಪರವಾನಗಿ ನೀಡಲಾಗಿದೆ. ಆದರೆ, ಆಟೋರಿಕ್ಷಾ ಸೇವೆ ಒದಗಿಸುತ್ತಿರುವ ಕಂಪನಿಗಳು ಅದಕ್ಕಾಗಿ ಯಾವುದೇ ಪರವಾನಗಿ ಪಡೆದುಕೊಂಡಿಲ್ಲ ಎಂಬುದು ಸಾರಿಗೆ ಇಲಾಖೆಯ ಆಕ್ಷೇಪವಾಗಿದೆ.