ವಿಜಯಪುರ(ಸೆ.02): ಪೊಲೀಸರಿಂದ ದಂಡ ತಪ್ಪಿಸಿಕೊಳ್ಳಲು ಹೋಗಿ ಸರ್ಕಾರಿ ಬಸ್ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದೆ.

ವಿಜಯಪುರ ಜಿಲ್ಲೆ ಕೊಲ್ಹಾರ ಪಟ್ಟಣದ ಬಳಿ ಸರ್ಕಾರಿ ಬಸ್ಸಿಗೆ ಆಟೋ ಡಿಕ್ಕಿ ಹೊಡೆದು, ಇಬ್ಬರು ಸಾವಿಗೀಡಾಗಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಹೆಚ್ಚು ಜನರನ್ನು ತುಂಬಿಕೊಂಡು ಬರುತ್ತಿದ್ದ ಆಟೋವನ್ನು ಟ್ರಾಫಿಕ್ ಪೊಲೀಸರು ಪರಿಶೀಲಿಸಲು ಮುಂದಾಗಿದ್ದು ಈ ವೇಳೆ ತಪ್ಪಿಸಿಕೊಳ್ಳುವ ಭರದಲ್ಲಿ ಎದುರಿಗೆ ಬರುತ್ತಿದ್ದ ಬಸ್ ಗೆ ಆಟೋ ಡಿಕ್ಕಿಯಾಗಿದೆ. 

ಅಪಘಾತದ ಸ್ಥಳಕ್ಕೆ ಕೊಲ್ಹಾರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.