Asianet Suvarna News Asianet Suvarna News

ಅಯೋಧ್ಯಾ ರಾಮಮಂದಿರ ಉದ್ಘಾಟನಾ : 'ಭಾರತದ ಹಬ್ಬ' ಎಂದು ಬಣ್ಣಿಸಿದ ಎಚ್‌ಡಿ ಕುಮಾರಸ್ವಾಮಿ

ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ಭಾರತದ ಹಬ್ಬವಾಗಿದೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಬಣ್ಣಿಸಿದ್ದಾರೆ.  ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಸಮೀಪದ ಹನಿ ಡ್ಯೂ ರೆಸಾರ್ಟ್‌ ನಲ್ಲಿ ಮಂಡ್ಯ ಜಿಲ್ಲೆಯ ಜೆಡಿಎಸ್ ಶಾಸಕರು ಮುಖಂಡರೊಂದಿಗೆ ವಾಸ್ತವ್ಯ ಹೂಡಿ ದಿಢೀರ್ ಬೆಂಗಳೂರಿಗೆ ತೆರಳುವ ವೇಳೆ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು.

Ayodhya Ram Mandir inauguration is a festival of India says HD Kumaraswamy at chikkamagaluru rav
Author
First Published Jan 11, 2024, 4:48 PM IST

ಚಿಕ್ಕಮಗಳೂರು (ಜ.11): ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ಭಾರತದ ಹಬ್ಬವಾಗಿದೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಬಣ್ಣಿಸಿದ್ದಾರೆ. 

ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಸಮೀಪದ ಹನಿ ಡ್ಯೂ ರೆಸಾರ್ಟ್‌ ನಲ್ಲಿ ಮಂಡ್ಯ ಜಿಲ್ಲೆಯ ಜೆಡಿಎಸ್ ಶಾಸಕರು ಮುಖಂಡರೊಂದಿಗೆ ವಾಸ್ತವ್ಯ ಹೂಡಿ ದಿಢೀರ್ ಬೆಂಗಳೂರಿಗೆ ತೆರಳುವ ವೇಳೆ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು.ನಿಜವಾದ ರಾಮರಾಜ್ಯ ಎಂಬ ಜನಾಭಿಪ್ರಾಯಕ್ಕೆ ನಾನೂ ದನಿಗೂಡಿಸುತ್ತೇನೆ ಎಂದಿರುವ ಅವರು ರಾಮಮಂದಿರ ನಿರ್ಮಾಣ ದೇಶದ ಜನರ ನಿರೀಕ್ಷೆಯಾಗಿತ್ತು ಎಂದರು.

ಕಾಂಗ್ರೆಸ್ ನವರು ರಾಮಮಂದಿರ ಉದ್ಘಾಟನೆಗೆ ಹೋಗದಿರುವ ನಿರ್ಧಾರ ಅವರ ಪಕ್ಷದ ತೀರ್ಮಾನವಾಗಿದ್ದು ಹೋಗದಿರುವುದಕ್ಕೆ ಕಾರಣ ಅವರೇ ಹೇಳಬೇಕು ಎಂದರು.

ಸಿದ್ದರಾಮಯ್ಯ ಮಸೀದಿಗೆ ಯಾಕೆ ಹೋಗ್ತಾರೆ? ಮನೇಲಿ ನಮಾಜ್ ಮಾಡ್ಲಿ; ಅಯೋಧ್ಯೆಗೆ ಯಾಕೆ ಹೋಗ್ಬೇಕು ಎಂದ ಸಿಎಂಗೆ ಆರ್ ಅಶೋಕ್ ತಿರುಗೇಟು!

ರಾಜ್ಯದಲ್ಲಿ ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಕಾಂಗ್ರೆಸ್ ಜೊತೆಗಿನ ಮೈತ್ರಿಗಿಂತ ಬಿಜೆಪಿ ಜೊತೆ ಮೈತ್ರಿಗೆ ಅಜಗಜಾಂತರ ವ್ಯತ್ಯಾಸ ಇದೆ ಎಂದು ಹೇಳಿದರು. ಬಿಜೆಪಿ ಜೊತೆಗಿನ ಮೈತ್ರಿಯಲ್ಲಿ ಕೇಸರಿ ಪಕ್ಷದ ಜೊತೆ ಯಾವುದೇ ವಿಶ್ವಾಸದ ಕೊರತೆ ಇಲ್ಲ , ಖುಷಿ ಇದೆ, ಬಿಜೆಪಿ ಜೆಡಿಎಸ್ ನದ್ದು ಒಂದು ರೀತಿ ನ್ಯಾಚುರಲ್ ಅಲಾಯನ್ಸ್ ಎನಿಸುತ್ತಿದೆ ಎಂದಿರುವ ಅವರು ಬಿಜೆಪಿ ಪಕ್ಷದ ಸ್ನೇಹಿತರ ವಿಶ್ವಾಸ ಪಡೆಯಲು ಸೂಕ್ಷ್ಮವಾಗಿ ಚರ್ಚಿಸಲು ನಮ್ಮ ಪಕ್ಷದ ಕಾರ್ಯಕರ್ತರಿಗೆ ಸಭೆ ಮಾಡುತ್ತಿದ್ದೇವೆ, ಕೆಲವೆಡೆ ಸ್ಥಳೀಯವಾಗಿ ಎರಡೂ ಪಕ್ಷಗಳ ನಾಯಕರ ಜೊತೆಗಿನ ಸಮಸ್ಯೆ ಬಗೆಹರಿಸುತ್ತೇವೆ ಎಂದರು.

ಸಂಕ್ರಾಂತಿ ನಂತರ ಮೈತ್ರಿಯ ಚಿಕ್ಕಮಗಳೂರುಷವಾಗಲಿದೆ ಎಂದು ತಿಳಿಸಿ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸಾಮಾನ್ಯ ಕಾರ್ಯಕರ್ತ ಸ್ಪರ್ಧಿಸಿದರೂ ಗೆಲ್ಲುವ ಸಾಧ್ಯತೆ ಇದೆ. ಆದರೆ ಕಳೆದ ಬಾರಿ ಕಾಂಗ್ರೆಸ್ ನಮಗೆ ಕೇವಲ 2-3 ಪರ್ಸೆಂಟ್ ಮಾತ್ರ ಸಹಕಾರ ನೀಡಿತ್ತು ಎಂದು ಆರೋಪಿಸಿದರು. 

ನಾವು ರಾಮಭಕ್ತರೇ ಆದರೆ ರಾಮಮಂದಿರ ಉದ್ಘಾಟನೆಗೆ ಯಾಕೆ ಹೋಗೊಲ್ಲಂದ್ರೆ..; ಮಾಜಿ ಸಚಿವ ಎಚ್‌ ಆಂಜನೇಯ ಹೇಳಿದ್ದೇನು

ಮಂಡ್ಯದಲ್ಲಿ ತಮ್ಮ ಸ್ಪರ್ಧೆ ಬಗ್ಗೆ ಪ್ರತಿಕ್ರಿಯಿಸಿದ ಅವರು ಮೈತ್ರಿ ನಂತರ ಪರಿಸ್ಥಿತಿ ಏನಾಗುತ್ತೋ ನೋಡೋಣ ಎಂದರು. ಸುಮಲತಾ ಸ್ಪರ್ಧೆ ಬಗ್ಗೆ ಸಹಾ ಬಿಜೆಪಿ ಜೊತೆಗಿನ ಹೊಂದಾಣಿಕೆ ಮುಗಿದ ಮೇಲೆ ಚರ್ಚೆ ತೀರ್ಮಾನ ಆಗಲಿದೆ ಎಂದರು.

Follow Us:
Download App:
  • android
  • ios