ಬೇಲೂರು (ನ.10):  ಪಟ್ಟಣದ ನೆಹರೂ ನಗರದಲ್ಲಿರುವ ಅಯ್ಯಪ್ಪಸ್ವಾಮಿ ದೇವಸ್ಥಾನದ ಸಿಬ್ಬಂದಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ  ರಾತ್ರಿ ನಡೆದಿದೆ. 

ಬಂಗಾಳ ರಾಜ್ಯದ ಡಾರ್ಜಿಲಿಂಗ್‌ನ ಶಿವು ಕಾಂಡಿತ್‌(45) ನೇಣಿಗೆ ಶರಣಾದವರು. 

ಈ ಬಗ್ಗೆ ಮಾತನಾಡಿದ ಟ್ರಸ್ಟ್‌ನ ಕಾರ್ಯದರ್ಶಿ ಯಮಸಂ​ ಪಾಪು, ಶಿವು ಕಾಂಡಿತ್‌ 6 ವರ್ಷದಿಂದ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಕೆಲಸ ಮಾಡುತ್ತಿದ್ದರು. 

ಪಕ್ಕದ ಮನೆಯಲ್ಲಿ ಪ್ರೇಮಾಂಕುರ : 14ರ ಬಾಲಕನಿಂದ 12ರ ಬಾಲಕಿ ಗರ್ಭಿ​ಣಿ! ..

ನಮ್ಮ ಮನೆ ಮಗನಂತೆ ಇದ್ದು ಒಳ್ಳೆಯ ವ್ಯಕ್ತಿಯಾಗಿದ್ದರು. ಆದರೆ ವಿಪರೀತ ಕುಡಿತದ ಚಟ ಇತ್ತು. ಕುಡಿದು ದೇವಾಲಯದ ಒಳಗೆ ನೇಣು ಹಾಕಿಕೊಂಡಿದ್ದಾರೆ. ಘಟನೆಗೆ ಕಾರಣವೇನು ಎಂದು ತಿಳಿದು ಬಂದಿಲ್ಲ ಎಂದರು. ಪಿಎಸ್‌ಐ ಕಾವ್ಯಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.