ಬಿಜೆಪಿಯಲ್ಲಿ ನನಗೆ ರಾಜ್ಯ ಉಪಾಧ್ಯಕ್ಷ ಸ್ಥಾನ ನೀಡಿ ಮಹತ್ವದ ಜವಾಬ್ದಾರಿ ನೀಡಿದೆ| ಪಕ್ಷ ಕೊಟ್ಟಿರುವ ಹುದ್ದೆಯನ್ನು ಕಾರ್ಯಕರ್ತರ ಮಧ್ಯೆ ಇದ್ದು, ಶ್ರದ್ಧೆಯಿಂದ ಪಕ್ಷ ಕಟ್ಟುವ ಕಾರ್ಯವನ್ನು ಮಾಡುತ್ತಿದ್ದೇನೆ|ನಾನು ಮಾಡುತ್ತಿರುವ ಕೆಲಸದಲ್ಲಿ ನನಗೆ ಹೆಮ್ಮೆ ಇದೆ: ಬಿ.ವೈ.ವಿಜಯೇಂದ್ರ|
ಬೆಳಗಾವಿ(ಡಿ.05): ಬಸವ ಕಲ್ಯಾಣ, ಮಸ್ಕಿ, ಬೆಳಗಾವಿ ಲೋಕಸಭಾ ಉಪಚುನಾವಣೆಯ ಕಾರ್ಯತಂತ್ರವನ್ನು ಹೇಳಿದರೆ ವಿರೋಧ ಪಕ್ಷದವರು ಎಚ್ಚೆತ್ತುಕೊಳ್ಳುತ್ತಾರೆ. ಕಾರ್ಯತಂತ್ರ ತಿಳಿಯುವುದು ಫಲಿತಾಂಶ ಬಂದ ಬಳಿಕ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ್ ನೇತೃತ್ವದಲ್ಲಿ ಬರುವ ಮೂರು ಉಪಚುನಾವಣೆಯನ್ನು ಗೆಲವು ಸಾಧಿಸಲು ರಾಜ್ಯದ ಮುಖಂಡರು ಸೇರಿ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಬಿಜೆಪಿಯಲ್ಲಿ ನನಗೆ ರಾಜ್ಯ ಉಪಾಧ್ಯಕ್ಷ ಸ್ಥಾನ ನೀಡಿ ಮಹತ್ವದ ಜವಾಬ್ದಾರಿ ನೀಡಿದೆ. ಪಕ್ಷ ಕೊಟ್ಟಿರುವ ಹುದ್ದೆಯನ್ನು ಕಾರ್ಯಕರ್ತರ ಮಧ್ಯೆ ಇದ್ದು, ಶ್ರದ್ಧೆಯಿಂದ ಪಕ್ಷ ಕಟ್ಟುವ ಕಾರ್ಯವನ್ನು ಮಾಡುತ್ತಿದ್ದೇನೆ. ನಾನು ಮಾಡುತ್ತಿರುವ ಕೆಲಸದಲ್ಲಿ ನನಗೆ ಹೆಮ್ಮೆ ಇದೆ ಎಂದರು.
ಹೈಕಮಾಂಡ್ನಿಂದ ಸಂದೇಶ ತಂದಿರುವೆ ಎಂದ ಉಸ್ತುವಾರಿ: ಸಂಪುಟ ವಿಸ್ತರಣೆಯೋ? ಪುನಾರಚನೆಯೋ?
ಪಕ್ಷ ಏನೇ ಜವಾಬ್ದಾರಿ ಕೊಟ್ಟರೂ ನಾನು ಶ್ರದ್ಧೆಯಿಂದ ಮಾಡುತ್ತೇನೆ. ಸದ್ಯ ಬಿ.ಎಸ್.ಯಡಿಯೂರಪ್ಪನವರು ಸಂಪೂರ್ಣ ಆಡಳಿತವನ್ನು ಪೂರ್ಣಗೊಳಿಸುತ್ತಾರೆ ಎಂದು ರಾಜ್ಯಾಧ್ಯಕ್ಷರು, ಉಸ್ತುವಾರಿ ಅರುಣ ಸಿಂಗ್ ಹೇಳಿದ್ದಾರೆ. ಅದರ ಬಗ್ಗೆ ನಾನು ಏನು ಹೇಳುವುದಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯನವರು ಜನರ ಸಂಕಷ್ಟಕ್ಕೆ ಸ್ಪಂದನೆ ಮಾಡಿದ್ದರೆ ಇಂತಹ ಹೇಳಿಕೆ ನೀಡಲು ಸಾಧ್ಯವಾಗುತ್ತಿರಲಿಲ್ಲ. ತಮ್ಮ ಸೋಲನ್ನು ಮರೆ ಮಾಚಿಕೊಳ್ಳಲು ಇಂಥ ಹೇಳಿಕೆ ನೀಡುತ್ತಿದ್ದಾರೆ ಎಂದ ಅವರು, ಬಿಜೆಪಿಯಲ್ಲಿರುವ ಕಾರ್ಯಕರ್ತರನ್ನು ಗುರುತಿಸಿಕೊಂಡು ರಾಜ್ಯಾಧ್ಯಕ್ಷ ಕಟೀಲ ಹಾಗೂ ಸಿಎಂ ಯಡಿಯೂರಪ್ಪನವರು ನಿಗಮ ಮಂಡಳಿಗಳಿಗೆ ಹುದ್ದೆ ನೀಡಿದ್ದಾರೆ. ಇದರಲ್ಲಿ ಮೂಲ ಬಿಜೆಪಿ, ಕೆಜೆಪಿಯಿಂದ ಬಂದವರು ಎಂದೇನಿಲ್ಲ ಎಂದರು.
ಸಚಿವ ಸಂಪುಟ ವಿಸ್ತರಣೆ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಸಿ ಇದಕ್ಕೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಹೇಳಿದ್ದರು. ವಿರೋಧ ಪಕ್ಷದವರಿಗೆ ಬಿಜೆಪಿ ಸರ್ಕಾರ ಟೀಕೆ ಮಾಡಲು ಯಾವುದೇ ವಿಷಯ ಇಲ್ಲ. ಅದಕ್ಕೆ ಉಡಾಫೆ ವಿಷಯಗಳ ಮೇಲೆ ಬೆಳಕು ಚೆಲ್ಲುತ್ತಿದ್ದಾರೆ ಎಂದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ರಾಜಕುಮಾರ ಟೋಪಣ್ಣವರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Dec 5, 2020, 2:11 PM IST