ಶಿವಮೊಗ್ಗ[ಸೆ.27]: ಬಾಬ್ರಿ ಮಸೀದಿ ವಿವಾದದ ಕುರಿತು ಸವೋಚ್ಛ ನ್ಯಾಯಾಲಯವು ತೀರ್ಪು ನೀಡಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಎರಡು ದಿನಗಳ ಮಟ್ಟಿಗೆ ಸಾರ್ವಜನಿಕ ಸಭೆ, ಮೆರವಣಿಗೆಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ದಯಾನಂದ ಆದೇಶ ಹೊರಡಿಸಿದ್ದಾರೆ 

ಇದನ್ನು ಓದಿ:  ಮಸೀದಿ ಇಸ್ಲಾಂನ ಅವಿಭಾಜ್ಯ ಅಂಗ ಅಲ್ಲ : 1994ರ ತೀರ್ಪನ್ನು ಎತ್ತಿಹಿಡಿದ ಸುಪ್ರೀಂ

ಕೋಮು ಸೂಕ್ಷ್ಮ ಜಿಲ್ಲೆಗಳಲ್ಲಿ ಒಂದೆನಿಸಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಮುಂಜಾಗೃತ ಕ್ರಮವಾಗಿ ಕಾನೂನು, ಶಾಂತಿ -ಸುವ್ಯವಸ್ಥೆ, ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಸಾರ್ವಜನಿಕ ಸಭೆ, ಮೆರವಣಿಗೆ ನಿಷೇಧಿಸಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ. ಗಣೇಶ ವಿಸರ್ಜನಾ ಮೆರವಣಿಗೆ ಹೊರತುಪಡಿಸಿ ಉಳಿದೆಲ್ಲಾ ಮೆರವಣಿಗಳ ಮೇಲೆ ನಿಷೇಧ ಹೇರಲಾಗಿದೆ. ಇನ್ನು ಶವಸಂಸ್ಕಾರ, ಮದುವೆ, ಧಾರ್ಮಿಕ ಆಚರಣೆ ನಡೆಸಲು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಂದ ಅನುಮತಿ ಪಡೆಯಬೇಕು ಎಂದು ಡಿಸಿ ಆದೇಶಿಸಿದ್ದಾರೆ. 

ಇದನ್ನು ಓದಿ:  ಹಂಗಾರೆ ಅಯೋಧ್ಯೆಯಲ್ಲಿ ಮಂದಿರವೇ ಪಕ್ಕಾನಾ?

ದಿನಾಂಕ:27-9-2018 ರ ಬೆಳಿಗ್ಗೆ 11 ಗಂಟೆಯಿಂದ ದಿನಾಂಕ: 28-9-2018 ರ ಸಂಜೆ 6 ಗಂಟೆಯವರೆಗೆ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆ, ಮೆರವಣಿಗೆ ನಿಷೇಧಿಸಿ ಆದೇಶ ಹೊರಬಿದ್ದಿದೆ.