ಚಿಕ್ಕಬಳ್ಳಾಪುರ [ಡಿ.27]:  ಹೊಸಕೋಟೆ ಕ್ಷೇತ್ರದ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ಶರತ್‌ ಬಚ್ಚೇಗೌಡ, ಕ್ಷೇತ್ರದಲ್ಲಿ ತನ್ನ ಅಸ್ತಿತ್ವ ಉಳಿಸಿಕೊಳ್ಳುವ ಉದ್ದೇಶದಿಂದ ಉಪಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿ ಗೆದ್ದಿದ್ದಾನೆ. 

ನಾನು ಆತನ ಪರ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಒಂದು ಕ್ಷಣವೂ ಪ್ರಚಾರ ಮಾಡಿಲ್ಲ ಎಂದು ಸಂಸದ ಬಿ.ಎನ್‌. ಬಚ್ಚೇಗೌಡ ಸ್ಪಷ್ಟಪಡಿಸಿದರು. ನಗರದಲ್ಲಿ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ಜಿಲ್ಲಾ ಯುವ ಮೋರ್ಚಾದಿಂದ ಆಯೋಜಿಸಿದ್ದ ರಾಜ್ಯ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯಲ್ಲಿ ವಿಜೇತ ತಂಡಕ್ಕೆ ಬಹುಮಾನ ವಿತರಿಸಿದ ಅವರು ಮಾತನಾಡಿದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಪ್ರತಿಭಟನೆ ಅಗತ್ಯವಿಲ್ಲ: ಪೌರತ್ವ ತಿದ್ದುಪಡಿ ಹಾಗೂ ಎನ್‌ಆರ್‌ಸಿ ಕಾಯ್ದೆಗಳಿಂದ ಯಾವುದೇ ಧರ್ಮದವರಿಗೂ ತೊಂದರೆ ಆಗುವುದಿಲ್ಲ. ಈ ಬಗ್ಗೆ ತಿಳುವಳಿಕೆ ಇಲ್ಲದೇ ಇರುವವರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದರು.

ಮಂಗಳೂರಿನಲ್ಲಿ ನಡೆದ ಗಲಭೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಈಗಾಗಲೇ ನ್ಯಾಯಾಂಗ ಹಾಗೂ ಸಿಐಡಿಗೆ ವಹಿಸಿದೆ. ತನಿಖೆ ಪಾರದರ್ಶಕವಾಗಿ ನಡೆಯಲಿದ್ದು, ಶೀಘ್ರದಲ್ಲೇ ಗಲಭೆಯ ಕಾರಣ ಬಹಿರಂಗವಾಗಲಿದೆ ಎಂದರು.