ಚಾಮರಾಜನಗರ: ಮಾದಪ್ಪನ ಬೆಟ್ಟಕ್ಕೆ ಮದುವೆಗೆ ಹೆಣ್ಣು ಸಿಗಲಿ ಎಂದು ಬ್ರಹ್ಮಚಾರಿಗಳ ಪಾದಯಾತ್ರೆ!
ನಾಡಿನ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಮಲೆ ಮಹದೇಶ್ವರ ಬೆಟ್ಟಕ್ಕೆ ಕೊಳ್ಳೇಗಾಲ ತಾಲೂಕಿನ ಹೊಸಮಾಲಂಗಿ ಗ್ರಾಮದ 62 ಯುವಕರು ವಧು ಸಿಗಲೆಂದು ಬರಿಗಾಲಿನಲ್ಲಿ ಮಾದಪ್ಪನ ಬೆಟ್ಟಕ್ಕೆ ಪಾದಯಾತ್ರೆ ನಡೆಸಿದ್ದಾರೆ.
ಹನೂರು(ಅ.31): ಪ್ರಸಿದ್ಧ ಧಾರ್ಮಿಕ ಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಸಂಭ್ರಮ ಜೋರಾಗಿದ್ದು, ಯುವಕರ ಹಾಗೂ ಮಾದಪ್ಪನ ಭಕ್ತರ ದಂಡೇ ಬೆಟ್ಟಕ್ಕೆ ಸಾಗರೋಪಾದಿಯಲ್ಲಿ ಹರಿದು ಬರುತ್ತಿದೆ. ನಾಡಿನ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಮಲೆ ಮಹದೇಶ್ವರ ಬೆಟ್ಟಕ್ಕೆ ಕೊಳ್ಳೇಗಾಲ ತಾಲೂಕಿನ ಹೊಸಮಾಲಂಗಿ ಗ್ರಾಮದ 62 ಯುವಕರು ವಧು ಸಿಗಲೆಂದು ಬರಿಗಾಲಿನಲ್ಲಿ ಮಾದಪ್ಪನ ಬೆಟ್ಟಕ್ಕೆ ಪಾದಯಾತ್ರೆ ನಡೆಸಿದ್ದಾರೆ.
ಹೊಸಮಾಲಂಗಿಯಲ್ಲಿ 62 ಮಂದಿ ಯುವಕರಿಗೆ ಮದುವೆಯಾಗಿಲ್ಲ, ಎಷ್ಟು ಹುಡುಕಿದರೂ ವಧು ಸಿಗುತ್ತಿಲ್ಲ, ಮಾದಪ್ಪ ಕರುಣೆ ತೋರಿಸಿ ನಮಗೆ ಮದುವೆ ಮಾಡಿಸಲೆಂದು ಯಾತ್ರೆ ಹೊರಟ್ಟಿದ್ದೇವೆ ಎಂದು ಮನು ಎಂಬ ಯಾತ್ರಿ ಕನ್ನಡಪ್ರಭ ಪತ್ರಿಕೆಗೆ ತಿಳಿಸಿದ್ದಾರೆ.
ಚಾಮರಾಜನಗರ: ಗ್ರಾಮದ ಹತ್ತಿರ ಕ್ರಷರ್ ನಿರ್ಮಾಣ ಮಾಡುವುದಕ್ಕೆ ಮುಂದಾದ ಪಟ್ಟಭದ್ರ ಹಿತಾಸಕ್ತಿಗಳು!
ದೀಪಾವಳಿ ಜಾತ್ರೆ ಜೋರು:
ಅ.29 ರಿಂದ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ ಆರಂಭಗೊಂಡಿದ್ದು ವಿದ್ಯುತ್ ದೀಪಾಲಂಕಾರದಿಂದ ಕ್ಷೇತ್ರ ಕಂಗೊಳಿಸುತ್ತಿದೆ. ದೇವರಿಗೆ ವಿಶೇಷ ಪೂಜೆ, ಅಭಿಷೇಕಗಳು ಸಾಂಪ್ರದಾಯಿಕವಾಗಿ ಜರುಗುತ್ತಿದೆ. ರಾಜ್ಯ ಅಷ್ಟೇ ಅಲ್ಲದೇ ತಮಿಳುನಾಡಿನಿಂದಲೂ ಲಕ್ಷಾಂತರ ಮಂದಿ ಭಕ್ತರು ಆಗಮಿಸುತ್ತಿದ್ದು ಶೌಚಾಲಯ ವ್ಯವಸ್ಥೆ, ಕುಡಿಯುವ ನೀರು, ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಲೆ ಮಹದೇಶ್ವರ ಬೆಟ್ಟದ ಆಯಕಟ್ಟಿನ ಸ್ಥಳಗಳಲ್ಲಿ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲಾಗಿದೆ.
ವಿಶೇಷ ದಾಸೋಹ ವ್ಯವಸ್ಥೆ:
ಭಕ್ತರಿಗೆ ತೊಂದರೆಯಾಗದಂತೆ ನಿರಂತರ ವಿಶೇಷ ಪ್ರಸಾದದ ವ್ಯವಸ್ಥೆ ಮಾಡಲಾಗಿದ್ದು ಎತ್ತ ನೋಡಿದರತ್ತ ಭಕ್ತ ಸಮೂಹವೇ ಕಂಡು ಬರುತ್ತಿದೆ. ಜತೆಗೆ ವಿಶೇಷ ವಿದ್ಯುತ್ ದೀಪಾಲಂಕರವನ್ನು ದೀಪಾವಳಿ ಹಬ್ಬದ ಜಾತ್ರಾ ಮಹೋತ್ಸವ ಅಂಗವಾಗಿ ವಿವಿಧ ಬಗೆಯ ರಂಗುರಂಗಿನ ವಿದ್ಯುತ್ ದೀಪಾಲಂಕಾರಗಳ ತೋರಣ ಮಲೆಮಹದೇಶ್ವರ ಬೆಟ್ಟದ ರಾಜಗೋಪುರ ಸೇರಿದಂತೆ ಮುಖ್ಯದ್ವಾರ, ಇನ್ನಿತರ ಕಡೆ ಹಾಗೂ ಆಲಂಬಾಡಿ ಬಸವ ಸೇರಿದಂತೆ ದಾಸೋಹ ಭವನಕ್ಕೆ ತೆರಳುವ ರಸ್ತೆ ಮಾರ್ಗ ಮಧ್ಯದಲ್ಲಿ ಮತ್ತು ಪ್ರಾಧಿಕಾರ ಕಚೇರಿ ಮುಂಭಾಗದ ಪ್ರಧಾನ ರಸ್ತೆಯಲ್ಲಿಯೂ ವಿಶೇಷ ವಿದ್ಯುತ್ ದೀಪದ ಅಲಂಕಾರ ಜಗಮಗಿಸುವಂತೆ ನೋಡುಗರ ಕಣ್ಣಣ ಸೆಳೆಯುವಂತೆ ದೀಪಾಲಂಕರವನ್ನು ಮಾಡಲಾಗಿದೆ.
ಕಾಂಗ್ರೆಸ್ ಸರ್ಕಾರ ಕಳ್ಳರ ಸರ್ಕಾರ: ಛಲವಾದಿ ನಾರಾಯಣಸ್ವಾಮಿ
ವಿವಿಧ ಉತ್ಸವಗಳ ಸಂಭ್ರಮ:
ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ದೀಪಾವಳಿ ಜಾತ್ರಾ ಮಹೋತ್ಸವದ ಪ್ರಯುಕ್ತ ಚಿನ್ನದ ರಥೋತ್ಸವ, ಬೆಳ್ಳಿ ರಥೋತ್ಸವ ಹಾಗೂ ಮಾದಪ್ಪನ ಮೂರ್ತಿಯ ಉತ್ಸವ ಸೇರಿದಂತೆ ಹುಲಿವಾಹನ ಉತ್ಸವ, ರುದ್ರಾಕ್ಷಿ ಮಂಟಪೋತ್ಸವ, ಬಸವನ ಉತ್ಸವ, ದೂಪದ ಸೇವೆ ಪಂಜಿನ ಸೇವೆ ಹಾಗೂ ಹರಕೆ ಹೊತ್ತು ಭಕ್ತರಿಂದ ಮುಡಿಸೇವೆ ಮತ್ತು ಉರುಳು ಸೇವೆ ಮಾಡುವ ಮೂಲಕ ಭಕ್ತರು ತಮ್ಮ ಇಷ್ಟಾರ್ಥ ಸಿದ್ಧಿಸುವಂತೆ ಮಾದೇಶ್ವರನಿಗೆ ಹರಕೆ ಹೊತ್ತು ವಿವಿಧ ಉತ್ಸವಗಳಲ್ಲಿ ಭಾಗವಹಿಸುತ್ತಾರೆ. ಮಾದಪ್ಪನ ಭಕ್ತರು ಈ ವೇಳೆಯಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟುವಂತೆ ಉಘ ಮಾದಪ್ಪ, ಉಫ್ ಮಾದಪ್ಪ ಎಂದು ಘೋಷಣೆಗಳು ಕೂಗುತ್ತಾರೆ.
ವಿಶೇಷ ತರಕಾರಿಗಳಿಂದ ದಾಸೋಹ ವ್ಯವಸ್ಥೆ:
ದೀಪಾವಳಿ ಜಾತ್ರಾ ಮಹೋತ್ಸವದ ಪ್ರಯುಕ್ತ ದಾಸ್ತಾನು ಮಾಡಲಾಗಿ ವಿವಿಧ ಬಗೆಯ ತರಕಾರಿಗಳಿಂದ ಬರುವ ಭಕ್ತಾದಿಗಳಿಗೆ ವಿಶೇಷ ದಾಸೋಹ ವ್ಯವಸ್ಥೆಯನ್ನು ಕಲ್ಪಿಸುವಂತೆ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ದಾಸೋಹ ಅಧಿಕಾರಿ ಸ್ವಾಮಿಯವರಿಗೆ ಮತ್ತು ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ.