Haveri: ಮಾರ್ಚ್‌ನಲ್ಲಿ ಹಿಂದುಳಿದ ವರ್ಗಗಳ ಕಾಂಗ್ರೆಸ್‌ ಸಮಾವೇಶ: ಮಧು ಬಂಗಾರಪ್ಪ

ಹಿಂದುಳಿದ ವರ್ಗಗಳ ಸಮಾಜವನ್ನು ಒಗ್ಗೂಡಿಸುವ ಸಲುವಾಗಿ ಮಾರ್ಚ್‌ ತಿಂಗಳಲ್ಲಿ ಹಿಂದುಳಿದ ವರ್ಗಗಳ ರಾಜ್ಯಮಟ್ಟದ ಸಮಾವೇಶ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಕಾಂಗ್ರೆಸ್‌ ಹಿಂದುಳಿದ ವರ್ಗಗಳ ರಾಜ್ಯ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ಹೇಳಿದರು.

Backward Classes Congress Convention in March Says Madhu Bangarappa gvd

ಹಾವೇರಿ (ಡಿ.17): ಹಿಂದುಳಿದ ವರ್ಗಗಳ ಸಮಾಜವನ್ನು ಒಗ್ಗೂಡಿಸುವ ಸಲುವಾಗಿ ಮಾರ್ಚ್‌ ತಿಂಗಳಲ್ಲಿ ಹಿಂದುಳಿದ ವರ್ಗಗಳ ರಾಜ್ಯಮಟ್ಟದ ಸಮಾವೇಶ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಕಾಂಗ್ರೆಸ್‌ ಹಿಂದುಳಿದ ವರ್ಗಗಳ ರಾಜ್ಯ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಹಿಂದುಳಿದ ಸಮಾಜದವರ ಶೇ. 55ರಷ್ಟುಮತಗಳು ಕಾಂಗ್ರೆಸ್‌ ಪರವಾಗಿದ್ದು, ಇತ್ತೀಚೆಗೆ ಕೆಲವು ಮತಗಳು ವಿಭಜನೆಗೊಂಡಿವೆ. ಅವುಗಳನ್ನು ಒಗ್ಗೂಡಿಸಬೇಕಾಗಿದ್ದು, ಪ್ರತಿ ಜಿಲ್ಲೆಗೂ ಭೇಟಿ ನೀಡಿ ಹಿಂದುಳಿದ ವರ್ಗಗಳ ಘಟಕಗಳಿಗೆ ಪದಾಧಿಕಾರಿಗಳ ನೇಮಿಸಲು ಸಭೆಗಳನ್ನು ಮಾಡಲಾಗುತ್ತಿದೆ. 

ಈಗಾಗಲೇ ರಾಜ್ಯದ 20 ಜಿಲ್ಲೆಗಳಿಗೆ ಭೇಟಿ ನೀಡಿದ್ದೇನೆ. ಫೆಬ್ರವರಿ ಅಂತ್ಯದೊಳಗೆ ಎಲ್ಲ ಜಿಲ್ಲೆಗಳಲ್ಲಿ ಹಿಂದುಳಿದ ವರ್ಗಗಳ ಸಮಾವೇಶ ನಡೆಸಲಾಗುವುದು. ಮಾಚ್‌ರ್‍ ಮೊದಲ ವಾರದಲ್ಲಿ ಹುಬ್ಬಳ್ಳಿ, ಹಾವೇರಿ ಅಥವಾ ದಾವಣಗೆರೆಯಲ್ಲಿ ಹಿಂದುಳಿದ ವರ್ಗಗಳ ರಾಜ್ಯಮಟ್ಟದ ಸಮಾವೇಶ ಆಯೋಜಿಸಲಾಗುವುದು ಎಂದು ಹೇಳಿದರು. ಹಿಂದುಳಿದ ವರ್ಗಗಳಲ್ಲಿನ ಸಣ್ಣಸಣ್ಣ ಸಮುದಾಯಗಳನ್ನು ಒಗ್ಗೂಡಿಸುವ ಮೂಲಕ ಈ ಸಮುದಾಯಗಳ ನಾಯಕರಿಗೆ ಪಕ್ಷದಲ್ಲಿ ಅಧಿಕಾರ ನೀಡಿ ಮುಂಚೂಣಿಗೆ ತರುವ ಉದ್ದೇಶ ಹೊಂದಲಾಗಿದೆ. ಕಾಂಗ್ರೆಸ್‌ ಸರ್ಕಾರ ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್‌ ಕಲ್ಪಿಸಿತ್ತು. 

ಚಿತ್ರದುರ್ಗ ಜಿಲ್ಲೆಯ ರೈತರಿಗೆ 223 ಕೋಟಿ ಬೆಳೆ ಪರಿಹಾರ: ಸಚಿವ ಬಿ.ಸಿ.ಪಾಟೀಲ್‌

ಆದರೆ ಬಿಜೆಪಿ ಸರ್ಕಾರ ಈಗ ಮೀಟರ್‌ ಅಳವಡಿಸಲು ಮುಂದಾಗಿದೆ. ಮುಂದಿನ ದಿನಗಳಲ್ಲಿ ಬಿಲ್‌ ಪಾವತಿಸುವಂತೆ ರೈತರ ಮೇಲೆ ಒತ್ತಡ ಹಾಕುವ ಹುನ್ನಾರ ನಡೆಸಿದೆ ಎಂದು ದೂರಿದರು. ಅಡ್ಡದಾರಿ ಮೂಲಕ ಅಧಿಕಾರ ಹಿಡಿದ ಬಿಜೆಪಿ ಸರ್ಕಾರ ಕೇವಲ ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟುಕೊಂಡು ಅಧಿಕಾರ ಹಿಡಿಯುವ ಕನಸು ಕಾಣುತ್ತಿದೆ. ಆದರೆ ಅದು ಕರ್ನಾಟಕದಲ್ಲಿ ಸಾಧ್ಯವಿಲ್ಲ. ರಾಜ್ಯ ಸರ್ಕಾರ ಕೇವಲ 3 ಜಿಲ್ಲೆಗಳ ರೈತರ ಭತ್ತ ಖರೀದಿಗೆ ಪ್ರೋತ್ಸಾಹ ಧನ ನೀಡುತ್ತಿದ್ದು, ಈ ಮೂಲಕ ರೈತರನ್ನು ಒಡೆದಾಳುವ ನೀತಿ ಅನುಸರಿಸುತ್ತಿದೆ. ಇದನ್ನು ಬಿಟ್ಟು ಎಲ್ಲ ಜಿಲ್ಲೆಗಳ ರೈತರಿಗೂ ಪ್ರೋತ್ಸಾಹ ಧನ ನೀಡಬೇಕು ಎಂದು ಆಗ್ರಹಿಸಿದರು.

ಅನುಕಂಪದ ರಾಜಕಾರಣ ನನಗೆ ಅಗತ್ಯವಿಲ್ಲ: ಶಾಸಕ ರೇಣುಕಾಚಾರ್ಯ

ಪ್ರಧಾನಿ ನರೇಂದ್ರ ಮೋದಿ ಹೆಣ್ಣುಮಕ್ಕಳ ಕಣ್ಣೀರು ಒರೆಸುತ್ತೇವೆ ಎಂದು ಹೇಳಿ ಒಂದು ಬಾರಿ ಉಚಿತ ಸಿಲೆಂಡರ್‌ ಕೊಟ್ಟು ಈಗ ದರ ಹೆಚ್ಚಿಸಿ ಪ್ರತಿದಿನ ಹೆಣ್ಣುಮಕ್ಕಳು ಕಣ್ಣೀರು ಹಾಕುವಂತೆ ಮಾಡಿದ್ದಾರೆ. ವಿವಿಧ ವಸತಿ ಯೋಜನೆಗಳಡಿ ಸರ್ಕಾರ ಬಡವರಿಗೆ ಮನೆಗಳನ್ನು ನೀಡುತ್ತಿಲ್ಲ. ಹೀಗಾಗಿ ಗ್ರಾಪಂ ಸದಸ್ಯರು ಮನೆಯಿಂದ ಹೊರಗೆ ಬರಲು ಸಾಧ್ಯವಾಗುತ್ತಿಲ್ಲ. ಜೊತೆಗೆ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದರಿಂದ ಜನರು ಬೇಸತ್ತಿದ್ದಾರೆ ಎಂದು ದೂರಿದರು. ಮಾಜಿ ಸಚಿವ ಬಸವರಾಜ ಶಿವಣ್ಣವರ, ಜಿಲ್ಲಾಧ್ಯಕ್ಷ ಎಂ.ಎಂ. ಹಿರೇಮಠ, ಮಾಜಿ ಶಾಸಕರಾದ ಅಜ್ಜಂಪೀರ್‌ ಖಾದ್ರಿ, ಯು.ಬಿ. ಬಣಕಾರ, ಐ.ಜಿ. ಸನದಿ, ಸೋಮಣ್ಣ ಬೇವಿನಮರದ, ಸಂಜೀವಕುಮಾರ ನೀರಲಗಿ, ಈರಪ್ಪ ಲಮಾಣಿ ಇತರರು ಇದ್ದರು.

Latest Videos
Follow Us:
Download App:
  • android
  • ios