Asianet Suvarna News Asianet Suvarna News

ಬಾದಾಮಿ ಜನ ಸಿದ್ದರಾಮಯ್ಯ ಹೆಲಿಕಾಪ್ಟರ್‌ ನೀಡುತ್ತಿದ್ದಾರೆ : ಜಮೀರ್

60 ವರ್ಷದಲ್ಲಿ ಆಗದಷ್ಟುಅಭಿವೃದ್ಧಿ ಕೆಲಸ ಕಳೆದ ಐದು ವರ್ಷದಲ್ಲಿ ಆಗಿರುವುದರಿಂದ ಬಾದಾಮಿ ಕ್ಷೇತ್ರದ ಜನತೆ ಸಿದ್ದರಾಮಯ್ಯ ಅವರ ಸ್ಪರ್ಧೆ ಮತ್ತೆ ಬಯಸಿ, ಹೆಲಿಕಾಪ್ಟರ್‌ ಕೊಡಿಸಲು ತೀರ್ಮಾನಿಸಿದ್ದಾರೆ ಎಂದು ಶಾಸಕ ಜಮೀರ್‌ ಅಹಮದ್‌ ಖಾನ್‌ ಹೇಳಿದರು.

Badami people are giving Siddaramaiah a helicopter  Zameer snr
Author
First Published Dec 19, 2022, 5:39 AM IST

  ಮೈಸೂರು (ಡಿ.19): 60 ವರ್ಷದಲ್ಲಿ ಆಗದಷ್ಟುಅಭಿವೃದ್ಧಿ ಕೆಲಸ ಕಳೆದ ಐದು ವರ್ಷದಲ್ಲಿ ಆಗಿರುವುದರಿಂದ ಬಾದಾಮಿ ಕ್ಷೇತ್ರದ ಜನತೆ ಸಿದ್ದರಾಮಯ್ಯ ಅವರ ಸ್ಪರ್ಧೆ ಮತ್ತೆ ಬಯಸಿ, ಹೆಲಿಕಾಪ್ಟರ್‌ ಕೊಡಿಸಲು ತೀರ್ಮಾನಿಸಿದ್ದಾರೆ ಎಂದು ಶಾಸಕ ಜಮೀರ್‌ ಅಹಮದ್‌ ಖಾನ್‌ ಹೇಳಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕನಾದವನು (MLA)  15 ದಿನಕ್ಕೆ ಒಮ್ಮೆಯಾದರೂ ಕ್ಷೇತ್ರಕ್ಕೆ ಬರಬೇಕು. ನನಗೆ ಬರೋಕೆ ಆಗಲ್ಲ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ಇದರಿಂದಾಗಿ ಜನ ಹೆಲಿಕಾಪ್ಟರ್‌ ಕೊಡಿಸೋಕೆ ತೀರ್ಮಾನಿಸಿದ್ದಾರೆ. . 25 ಕೋಟಿ ಆಗಲಿ ಜನರೇ ದುಡ್ಡು ಹಾಕಿ ಹೆಲಿಕಾಪ್ಟರ್‌ ಕೊಡಿಸಬೇಕು ಅಂದುಕೊಂಡಿದ್ದಾರೆ. ಇದಕ್ಕಾಗಿ ಬಾದಾಮಿ ತಾಲೂಕಿನ ಜನ ಚಂದ ವಸೂಲಿ ಮಾಡುತ್ತಿದ್ದಾರೆ ಎಂದರು.

ಎಲ್ಲೆಡೆಯೂ ಒತ್ತಡ ಇದೆ:

ರಾಜ್ಯದ 224 ಕ್ಷೇತ್ರದಿಂದಲೂ ಸಿದ್ದರಾಮಯ್ಯ (Siddaramaiah)  ಸ್ಪರ್ಧೆಗೆ ಒತ್ತಡವಿದೆ. ನಾನು ಕೂಡ ಚಾಮರಾಜಪೇಟೆಗೆ ಬನ್ನಿ ಅಂತ ಹೇಳುತ್ತಿದ್ದೇನೆ. ಅವರು ಇನ್ನೂ ಎಲ್ಲಿ ಸ್ಪರ್ಧಿಸಬೇಕು ಎಂಬುದನ್ನು ತೀರ್ಮಾನಿಸಿಲ್ಲ. ಬಾದಾಮಿಯಲ್ಲಿ ಪ್ರವಾಸ ಮಾಡಿ ಜನರ ಜತೆ ಮಾತನಾಡಿದ್ದೇನೆ. ಅಲ್ಲಿ ದಾರಿ ಉದ್ದಕ್ಕೂ ಜನರು ಸಿದ್ದರಾಮಯ್ಯ ಅವರೇ ಬರಬೇಕು ಅನ್ನುತ್ತಿದ್ದಾರೆ. ನಮ್ಮ ಕ್ಷೇತ್ರ ನಾಲ್ಕು ವರ್ಷದಲ್ಲಿ ಸಾಕಷ್ಟುಅಭಿವೃದ್ಧಿ ಆಗಿದೆ. ಇಷ್ಟುವರ್ಷದಲ್ಲಿ ಆಗದ ಅಭಿವೃದ್ಧಿ ನಾಲ್ಕು ವರ್ಷದಲ್ಲಿ ಆಗಿದೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಮುಸ್ಲಿಂ ಮಹಿಳಾ ಕಾಲೇಜುಗಳನ್ನು ತೆರೆಯಲು ಅವಕಾಶ ಇಲ್ಲ: ಕೆ.ಎಸ್.ಈಶ್ವರಪ್ಪ

24 ಬೆಂಬಲಿಗರಿಗೆ ಟಿಕೆಟ್‌ ಕೇಳಿರುವೆ

ನನ್ನ ಸುಮಾರು 24 ಮಂದಿ ಬೆಂಬಲಿಗರಿಗೆ ಟಿಕೆಟ್‌ ನೀಡುವಂತೆ ಹೈಕಮಾಂಡ್‌ಗೆ ಮನವಿ ಮಾಡಿದ್ದೇನೆ. ನಾನು ಕೂಡ ಕಾಂಗ್ರೆಸ್‌ನಲ್ಲಿ ಪ್ರಬಲ ನಾಯಕ. ನನಗೂ ಆಪ್ತರು ಟಿಕೆಟ್‌ ಕೊಡಿಸುವಂತೆ ಮನವಿ ಮಾಡುತ್ತಿದ್ದಾರೆ. ಈ ವಿಚಾರವನ್ನು ನಾನು ಕೂಡ ಹೈಕಮಾಂಡ್‌ಗೆ ತಿಳಿಸಿದ್ದೇನೆ. ಹೈಕಮಾಂಡ್‌ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಅವರು ಹೇಳಿದರು.

ಹೈಕಮಾಂಡ್‌ ಹೇಳಿದರೆ ನರಸಿಂಹರಾಜದಿಂದ ಸ್ಪರ್ಧೆ

ಹೈಕಮಾಂಡ್‌ ಹೇಳಿದರೆ ನಾನು ಮೈಸೂರಿನ ನರಸಿಂಹರಾಜ ಕ್ಷೇತ್ರದಲ್ಲಿ ಸ್ಪರ್ಧಿಸಲೇ ಬೇಕು. ನಾನು ಈಗ ಚಾಮರಾಜಪೇಟೆ ಶಾಸಕ. ಮುಂದಿನ ಚುನಾವಣೆಯಲ್ಲಿ ಹೈಕಮಾಂಡ್‌ ಇಲ್ಲಿ ಸ್ಪರ್ಧೆ ಬೇಡ ಅಂದ್ರೆ ನಾನು ಏನು ಮಾಡೋದಕ್ಕೆ ಆಗಲ್ಲ. ಒಂದು ವೇಳೆ ಮೈಸೂರಿನ ಎನ್‌.ಆರ್‌. ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿ ಅಂದರೆ ನಾನು ಸ್ಪರ್ಧೆ ಮಾಡಲೇಬೇಕು ಎಂದರು.

ಜೆಡಿಎಸ್‌ಗೆ 18 ರಿಂದ 23 ಸ್ಥಾನ

ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಮುಸ್ಲಿಂ ಮುಖ್ಯಮಂತ್ರಿ ಕುರಿತು ಹೇಳಿಕೆ ನೀಡಿದ್ದಾರೆ. ಅವರು ಮುಸಲ್ಮಾನರನ್ನೇ ಸಿಎಂ ಮಾಡುತ್ತೇವೆ ಎಂದು ಘೋಷಿಸಬೇಕು. ಅವರಿಗೆ ಮುಸ್ಲಿಂ ಮೇಲೆ ಪ್ರೀತಿ ಇದ್ದರೆ ಸಿ.ಎಂ. ಇಬ್ರಾಹಿಂ ಅವರನ್ನೇ ಸಿಎಂ ಅಭ್ಯರ್ಥಿ ಅಂತ ಘೋಷಿಸಲಿ. ಮುಸ್ಲಿಂ ಮತ ಸೆಳೆಯಲು ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಅವರಿಗೆ ನೂರು ಸೀಟ್‌ ಬರೋದಕ್ಕೆ ಆಗಲ್ಲ. 18 ರಿಂದ 23 ಸ್ಥಾನ ಬರುತ್ತದೆ. ಇದು ಎಲ್ಲರಿಗೂ ಗೊತ್ತಿರುವ ವಿಷಯ ಎಂದು ಅವರು ಹೇಳಿದರು.

ಎಚ್‌ಡಿಕೆ ಮುಸ್ಲಿಂ ಸಿಎಂ ಮಾಡ್ತಾರ

ಬೆಂಗಳೂರು (ಡಿ.06): ವಿಧಾನಸಭೆ ಚುನಾವಣೆಯ ಫಲಿತಾಂಶದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾದರೂ ಮುಸ್ಲಿಮರನ್ನು ಮುಖ್ಯಮಂತ್ರಿಯನ್ನಾಗಿ ಮಾಡುತ್ತೇವೆ ಎಂಬುದಾಗಿ ಘೋಷಿಸಲಿ ಎಂದು ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌ಖಾನ್‌ ಅವರು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಗೆ ಬಹಿರಂಗ ಸವಾಲು ಹಾಕಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಚುನಾವಣೆಯಲ್ಲಿ 113 ಸ್ಥಾನ ಬಂದರೆ ಮುಸ್ಲಿಮರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದಾಗಿ ಹೇಳಿದ್ದಾರೆ. ಜೆಡಿಎಸ್‌ 100 ಸ್ಥಾನ ದಾಟಲ್ಲ. ಎಲ್ಲಿಂದ ಮುಸ್ಲಿಂರನ್ನು ಮುಖ್ಯಮಂತ್ರಿಯನ್ನಾಗಿ ಮಾಡುತ್ತಾರೆ. 

ಸಮ್ಮಿಶ್ರ ಸರ್ಕಾರ ರಚನೆಯಾದರೂ ಮುಸ್ಲಿಮರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದಾಗಿ ಘೋಷಣೆ ಮಾಡಲಿ. ಇದು ನನ್ನ ಬಹಿರಂಗ ಸವಾಲು. ಜೆಡಿಎಸ್‌ಗೆ 113 ಸ್ಥಾನ ಬರಲು ಸಾಧ್ಯನಾ? ಎಂದು ತಿರುಗೇಟು ನೀಡಿದರು. ಎಲ್ಲರೂ ರಾತ್ರಿ ಕನಸು ಕಾಣಿದರೆ, ಕುಮಾರಸ್ವಾಮಿ ಹಗಲು ಕನಸು ಕಾಣುತ್ತಿದ್ದಾರೆ. ಯಾವುದೇ ಯಾತ್ರೆ, ವ್ರತ ಮಾಡಿದರೂ ಅದು ಸಾಧ್ಯವಿಲ್ಲ. ಚಾಮರಾಜಪೇಟೆ ಕ್ಷೇತ್ರದಲ್ಲಿ ನನ್ನ ವಿರುದ್ಧ 2018ರಲ್ಲಿ ಎಲ್ಲಾ ಶಕ್ತಿಗಳು ಒಂದಾಗಿದ್ದವು. ಆಗ ಏನಾಯಿತು? ಜಮೀರ್‌ಗೆ ಕಷ್ಟಎಂದಿದ್ದರು. ಆದರೆ, ಫಲಿತಾಂಶ ಏನಾಯಿತು? ಅಧಿಕ ಲೀಡ್‌ನಲ್ಲಿ ಗೆಲುವು ಸಾಧಿಸಿದೆ. 

ಜನವರಿ ತಿಂಗಳಾಂತ್ಯಕ್ಕೆ 3 ದಿನಗಳ ಕಾಲ ಹಂಪಿ ಉತ್ಸವ: ಸಚಿವೆ ಶಶಿಕಲಾ ಜೊಲ್ಲೆ

ನನ್ನ ವಿರುದ್ಧ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮುಂದಾಗಿದ್ದರು. ಆದರೂ ಸೋಲಿಸಲು ಸಾಧ್ಯವಾಗಲಿಲ್ಲ. ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್‌ ಅಬ್ದುಲ್ಲಾ ಅವರನ್ನು ಕಣಕ್ಕಿಳಿಸುವಂತೆ ಸವಾಲು ಹಾಕಿದ್ದೆ. ಅವರು ಇಲ್ಲದಿದ್ದರೆ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅಥವಾ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ನಿಲ್ಲಿಸುವಂತೆ ತಿಳಿಸಿದ್ದೆ. ಒಂದು ವೇಳೆ ನಾನು ಸೋಲನುಭವಿಸಿದರೆ ನನ್ನ ತಲೆ ಕತ್ತರಿಸಿ ತಂದು ಕೊಡುತ್ತೇನೆ ಎಂದಿದ್ದೆ. ಆದರೆ ಫಲಿತಾಂಶ ಏನಾಯಿತು? ಅಧಿಕ ಲೀಡ್‌ನಲ್ಲಿ ಗೆಲುವು ಸಾಧಿಸಿದೆ ಎಂದು ಹೇಳಿದರು.

ಜೆಡಿಎಸ್‌ ಮೊದಲು ಬಹುಮತ ಪಡೆಯಲಿ: ಜೆಡಿಎಸ್‌ ಪಕ್ಷ ಮೊದಲು ಬಹುಮತ ಪಡೆದು ಸರ್ಕಾರ ರಚಿಸಿದ ಬಳಿಕ ಮುಸ್ಲಿಂ ಸಿಎಂ ಮಾಡುವುದು ಅಥವಾ ಮಹಿಳೆಯನ್ನು ಉಪ ಮುಖ್ಯಮಂತ್ರಿ ಮಾಡುವ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಯೋಚನೆ ಮಾತನಾಡಲಿ ಎಂದು ಸಂಸದೆ ಸುಮಲತಾ ಅಂಬರೀಶ್‌ ಗುರುವಾರ ವ್ಯಂಗ್ಯವಾಡಿದರು. ಹಿರಿಯ ನಟ ದಿ.ಡಾ.ಅಂಬರೀಶ್‌ ಹುಟ್ಟೂರಾದ ದೊಡ್ಡರಸಿನಕೆರೆಗೆ ತೆರಳುವ ಮಾರ್ಗ ಮಧ್ಯೆ ಅನಿಕೇತನ ವಿದ್ಯಾ ಸಂಸ್ಥೆಯಲ್ಲಿ ಅಂಬರೀಶ್‌ ಮತ್ತು ಸಹೋದರರಾದ ಎಂ.ಎಚ್‌.ಆನಂದ ಹಾಗೂ ಹರೀಶ್‌ ಅವರುಗಳ ಪುಣ್ಯ ಸ್ಮರಣೆಯಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

Follow Us:
Download App:
  • android
  • ios