ಹುಬ್ಬಳ್ಳಿ ಗಲಭೆ: ಜೈಲಲ್ಲಿದ್ದ 106 ಮಂದಿಗೆ ಜಾಮೀನು

ಇದೇ ಪ್ರಕರಣದಲ್ಲಿ ಆರೋಪಗಳಾಗಿದ್ದ ಇತರೆ 39 ಮಂದಿಗೆ ಸುಪ್ರೀಂಕೋರ್ಟ್ ಈಗಾಗಲೇ ಜಾಮೀನು ನೀಡಿತ್ತು ಎಂದು ಅರ್ಜಿದಾರರ ಪರ ವಕೀಲ ರಹಮತ್‌ವುಲ್ಲಾ ಕೊತ್ವಾಲ್​ ಮಂಡಿಸಿದ್ದ ವಾದ ಪರಿಗಣಿಸಿದ ನ್ಯಾಯಪೀಠ, ಎಲ್ಲ ಅರ್ಜಿದಾರರಿಗೆ ಜಾಮೀನು ನೀಡಿದೆ. ಜತೆಗೆ, ಎಲ್ಲ ಅರ್ಜಿದಾರರು 2 ಲಕ್ಷ ರು. ವೈಯಕ್ತಿಕ ಬಾಂಡ್‌, ಅಷ್ಟೇ ಮೊತ್ತಕ್ಕೆ ಒಬ್ಬರ ಭದ್ರತಾ ಖಾತರಿ ನೀಡಬೇಕು ಎಂಬುದು ಸೇರಿದಂತೆ ವಿವಿಧ ಷರತ್ತು ವಿಧಿಸಿದೆ.

Bail for 106 People who were in Jail of Hubballi Riot Case grg

ಬೆಂಗಳೂರು(ಫೆ.17):  ಮಸೀದಿಯ ಮೇಲೆ ಭಗವಾಧ್ವಜ ಇರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದನ್ನು ಖಂಡಿಸಿ 2022ರಲ್ಲಿ ಹುಬ್ಬಳ್ಳಿ ಪೊಲೀಸ್​ ಠಾಣೆ ಮುಂದೆ ಗಲಭೆ ನಡೆಸಿದ್ದ ಆರೋಪದ ಮೇಲೆ ಜೈಲು ಸೇರಿದ್ದ 106 ಮಂದಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಸಂಬಂಧ ನ್ಯಾಯಾಂಗ ಬಂಧನದಲ್ಲಿದ್ದ 106 ಮಂದಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಶ್ರೀನಿವಾಸ ಹರೀಶ್​ ಕುಮಾರ್​ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.

ಇದೇ ಪ್ರಕರಣದಲ್ಲಿ ಆರೋಪಗಳಾಗಿದ್ದ ಇತರೆ 39 ಮಂದಿಗೆ ಸುಪ್ರೀಂಕೋರ್ಟ್ ಈಗಾಗಲೇ ಜಾಮೀನು ನೀಡಿತ್ತು ಎಂದು ಅರ್ಜಿದಾರರ ಪರ ವಕೀಲ ರಹಮತ್‌ವುಲ್ಲಾ ಕೊತ್ವಾಲ್​ ಮಂಡಿಸಿದ್ದ ವಾದ ಪರಿಗಣಿಸಿದ ನ್ಯಾಯಪೀಠ, ಎಲ್ಲ ಅರ್ಜಿದಾರರಿಗೆ ಜಾಮೀನು ನೀಡಿದೆ. ಜತೆಗೆ, ಎಲ್ಲ ಅರ್ಜಿದಾರರು 2 ಲಕ್ಷ ರು. ವೈಯಕ್ತಿಕ ಬಾಂಡ್‌, ಅಷ್ಟೇ ಮೊತ್ತಕ್ಕೆ ಒಬ್ಬರ ಭದ್ರತಾ ಖಾತರಿ ನೀಡಬೇಕು ಎಂಬುದು ಸೇರಿದಂತೆ ವಿವಿಧ ಷರತ್ತು ವಿಧಿಸಿದೆ.

ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಠಾಣೆ ಎದುರು ಬಿಜೆಪಿ ಪ್ರತಿಭಟನೆ: 43 ಮಂದಿ ವಿರುದ್ಧ ಎಫ್ಐಆರ್, ಆರ್ ಅಶೋಕ್ ಎ1 ಆರೋಪಿ!

ಪ್ರಕರಣದ ಹಿನ್ನೆಲೆ:

ಮಸೀದಿ ಮೇಲೆ ಭಗವಾಧ್ವಜ ಇರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದನ್ನು ಖಂಡಿಸಿ ನೂರಾರು ಮುಸ್ಲಿಂ ಸಮುದಾಯದವರು 2022ರ ಏ.16ರಂದು ಹಳೇ ಹುಬ್ಬಳ್ಳಿ ಪೊಲೀಸ್‌ ಠಾಣೆ ಎದುರು ಗಲಭೆ ನಡೆದಿತ್ತು. ಈ ವೇಳೆ ಪೊಲೀಸ್ ಠಾಣೆ, ಆಸ್ಪತ್ರೆ, ದೇವಸ್ಥಾನ, ಮನೆಗಳ‌ ಮೇಲೆ ಕಲ್ಲು ತೂರಾಟ ಕೂಡ ನಡೆದಿತ್ತು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 12 ಎಫ್‌ಐಆರ್‌ ದಾಖಲಿಸಿ, ಅರ್ಜಿದಾರರು ಸೇರಿದಂತೆ 152 ಮಂದಿ ಆರೋಪಿಗಳನ್ನು ಬಂಧಿಸಿದ್ದರು.

ಗಲಾಟೆಯಲ್ಲಿ 10 ಕ್ಕೂ ಹೆಚ್ಚು ಪೊಲೀಸ್ ವಾಹನ ಜಖಂ ಆಗಿದ್ದವು. ಅಲ್ಲದೇ ಪೊಲೀಸ್ ಇನ್ಸಪೆಕ್ಟರ್ ಸೇರಿ ಏಳು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದ ಗಲಭೆಕೋರರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಹಿಂದೆ 152 ಜನರಲ್ಲಿ ಕೆಲ ಬಾಲಾಪರಾಧಿಗಳು ಸೇರಿ 7ಕ್ಕೂ ಹೆಚ್ಚು ಜನರಿಗೆ ಜಾಮೀನು ಮಂಜೂರ ಆಗಿತ್ತು.‌ ನಂತರ ಮತ್ತಷ್ಟು ಜನರಿಗೆ ಜಾಮೀನಾಗಿತ್ತು. ಒಟ್ಟು 39 ಜನರಿಗೆ ಜಾಮೀನಾಗಿತ್ತು. ಈಗ ಮೂವರನ್ನು ಹೊರತುಪಡಿಸಿ ಉಳಿದವರೆಲ್ಲರಿಗೂ ಜಾಮೀನು ಮಂಜೂರಾಗಿದೆ. ಎಲ್ಲರೂ ಒಂದೆರಡು ದಿನಗಳಲ್ಲಿ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಇದೇ 5 ರಂದು ಅಂಜುಮನ್ ಸಂಸ್ಥೆಯ ಚುನಾವಣೆ ನಾಮಪತ್ರ ಸಲ್ಲಿಸುವ ಸಮಯದಲ್ಲಿ ಮಕ್ಕಳಿಗಾಗಿ ಕುಟುಂಬಸ್ಥರು ಕಣ್ಣೀರು ಹಾಕಿದ್ದರು.

Latest Videos
Follow Us:
Download App:
  • android
  • ios