ಈಶ್ವರಪ್ಪರನ್ನು ಡಿಸಿಎಂ ಮಾಡಲು ಮುಖ್ಯಮಂತ್ರಿಗೆ ಮನವಿ
* ಬಳ್ಳಾರಿ ಜಿಲ್ಲಾ ಕುರುಬರ ಸಂಘದ ಪದಾಧಿಕಾರಿಗಳ ಮನವಿ
* ಯಡಿಯೂರಪ್ಪ ಅವರಂತೆ ಬಿಜೆಪಿ ಪಕ್ಷ ಕಟ್ಟಿದ ಈಶ್ವರಪ್ಪ
* ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ದುಡಿದ ಈಶ್ವರಪ್ಪ
ಬಳ್ಳಾರಿ(ಜು.30): ಬಿಜೆಪಿಯ ಹಿರಿಯ ನಾಯಕ, ಕುರುಬ ಸಮುದಾಯದ ಮುಖಂಡ ಕೆ.ಎಸ್. ಈಶ್ವರಪ್ಪ ಅವರನ್ನು ಉಪಮುಖ್ಯಮಂತ್ರಿ ಮಾಡಬೇಕು ಎಂದು ಬಳ್ಳಾರಿ ಜಿಲ್ಲಾ ಕುರುಬರ ಸಂಘದ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಕೆ. ಎರ್ರಿಗೌಡ, ಪ್ರಧಾನ ಕಾರ್ಯದರ್ಶಿ ಎ. ಮಲ್ಲೇಶಪ್ಪ, ಸಂಘಟನಾ ಕಾರ್ಯದರ್ಶಿ ಕೆ. ಮಲ್ಲಿಕಾರ್ಜುನ, ಖಜಾಂಚಿ ಕೆ. ಮೋಹನ್ ಅವರು ಮಾತನಾಡಿ, ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ದುಡಿದ ಈಶ್ವರಪ್ಪ ಅವರನ್ನು ಉಪಮುಖ್ಯಮಂತ್ರಿ ಮಾಡುವ ಮೂಲಕ ಅವರ ಸೇವೆಯನ್ನು ಪರಿಗಣಿಸಬೇಕು ಎಂದು ಆಗ್ರಹಿಸಿದರು.
'ಡಿಸಿಎಂ, ಸಚಿವ ಸ್ಥಾನ ಕೊಡದಿದ್ರೆ ಶಾಸಕನಾಗೇ ಇರ್ತೀನಿ, ಲಾಬಿ ಕೂಡಾ ಮಾಡಲ್ಲ'
ಬಿ.ಎಸ್. ಯಡಿಯೂರಪ್ಪ ಅವರಂತೆ ಕೆ.ಎಸ್. ಈಶ್ವರಪ್ಪ ಅವರು ಸಹ ಪಕ್ಷವನ್ನು ಕಟ್ಟಿದ್ದಾರೆ. ಹಿಂದುಳಿದ ಕುರುಬ ಸಮುದಾಯವನ್ನು ಪ್ರತಿನಿಧಿಸುತ್ತಿರುವ ಅವರನ್ನು ಮುಖ್ಯಮಂತ್ರಿ ಮಾಡಬೇಕಿತ್ತು. ಆದರೆ, ಸಿಎಂ ಸ್ಥಾನ ಕೈ ತಪ್ಪಿದ್ದು, ಉಪಮುಖ್ಯಮಂತ್ರಿಯನ್ನಾಗಿಸುವ ನಿರ್ಧಾರವನ್ನು ಕೇಂದ್ರದ ನಾಯಕರು ತೆಗೆದುಕೊಳ್ಳಬೇಕು ಎಂದರು.
ಕುರುಬರ ಸಂಘದ ಮುಖಂಡರಾದ ಕೆ.ಆರ್. ಸುರೇಂದ್ರ, ಬಂಡಿಹಟ್ಟಿ ಹೊನ್ನೂರುಸ್ವಾಮಿ, ದಮ್ಮೂರು ಸೋಮಪ್ಪ, ನಾಗರಾಜ್, ಕೆ. ವೀರನಗೌಡ ಮತ್ತಿತರು ಸುದ್ದಿಗೋಷ್ಠಿಯಲ್ಲಿದ್ದರು.