ಬಳ್ಳಾರಿ[ಜ.24]: ಎಂಬಿಬಿಎಸ್ ಶಿಕ್ಷಣ ಪೂರೈಸಿ ವೈದ್ಯೆಯಾಗಬೇಕಿದ್ದ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಕಡಿಮೆ ಅಂಕಗಳು ಸಿಕ್ಕಿವೆ ಎಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಬಳ್ಳಾರಿಯ  ಕೃಷ್ಣಾನಗರ ಕ್ಯಾಂಪ್ ನ ಎ.ವಿದ್ಯಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಎಂಬಿಬಿಎಸ್ 2 ನೇ ಸೆಮಿಸ್ಟರ್ ನಲ್ಲಿ ಓದುತ್ತಿದ್ದ  ಈಕೆಗೆ ಮೈಕ್ರೋ ಬಯಾಲಜಿ ವಿಷಯದಲ್ಲಿ ಕಡಿಮೆ ಅಂಕಗಳು ಬಂದಿದ್ದವು. ಇದರಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.

ಸದ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಮನೆ ನಡೆಸಿರುವ ಬಳ್ಳಾರಿ  ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.