Asianet Suvarna News Asianet Suvarna News

ಕೊರೋನಾ ಎಫೆಕ್ಟ್‌: ತಂಬಾಕು ಉತ್ಪನ್ನಗಳ ಮಾರಾಟ ನಿಷೇಧ

ಹೊಗೆರಹಿತ ತಂಬಾಕು ಉತ್ಪನ್ನಗಳ ಮಾರಾಟ, ಬಳಕೆ ಮತ್ತು ಉಗುಳುವುದು, ಜಿಗಿದು ಉಗುಳುವ ಉತ್ಪನ್ನ ನಿಷೇಧ|  ಕೊರೋನಾ ವೈರಸ್‌ ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕಾ ಕ್ರಮ| ಅಪರಾಧಕ್ಕೆ ಕ್ರಿಮಿನಲ್‌ ಮೊಕದ್ದಮೆ ದಾಖಲು|

Ban the sale of tobacco products in Koppal district due to Coronavirus
Author
Bengaluru, First Published Apr 25, 2020, 7:48 AM IST

ಕೊಪ್ಪಳ(ಏ.25): ಜಿಲ್ಲೆಯಲ್ಲಿ ಕೊರೋನಾ ವೈರಸ್‌ ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ  ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಜಿಲ್ಲೆಯ ಕನಕಗಿರಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಹೊಗೆರಹಿತ ತಂಬಾಕು ಉತ್ಪನ್ನಗಳ ಮಾರಾಟ, ಬಳಕೆ ಮತ್ತು ಉಗುಳುವುದು, ಜಿಗಿದು ಉಗುಳುವ ಉತ್ಪನ್ನಗಳನ್ನು ನಿಷೇಧಿಸಲಾಗಿದೆ ಎಂದು ಕನಕಗಿರಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ತಿಳಿಸಿದ್ದಾರೆ.

ಅಂಥಹ ಪ್ರಕರಣಗಳು ಕಂಡು ಬಂದಲ್ಲಿ ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ (ಜಾಹೀರಾತುಗಳ ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪನ್ನಗಳ ಪೂರೈಕೆ ಮತ್ತು ವಿತರಣೆಯ ನಿಯಂತ್ರಣ)ಕಾಯ್ದೆ, 2003 ರ ಕಲಂ (5)(6)(7) ರಂತೆ ಮೊದಲ ಅಪರಾಧಕ್ಕೆ 1000 ರು. ದಂಡ, ಪದೇ ಪದೇ ಅಪರಾಧಕ್ಕೆ 2000 ​ರು. ದಂಡ ಮತ್ತು ಮೂರನೇ ಅಪರಾಧಕ್ಕೆ ಕ್ರಿಮಿನಲ್‌ ಮೊಕದ್ದಮೆ ದಾಖಲು ಮಾಡಲಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೋವಿಡ್-19 ವಿರುದ್ಧ ಹೋರಾಟ: ಕೊರೋನಾ ತಡೆ​ಯಲು ಟ್ರಕ್‌ ಟರ್ಮಿ​ನ​ಲ್‌

ಹಾಲು ಉತ್ಪಾದಕರ ಸಂಘದಿಂದ ಸಿಎಂ ಪರಿಹಾರ ನಿಧಿಗೆ 1 ಲಕ್ಷ ದೇಣಿಗೆ

ಜಿಲ್ಲೆಯಲ್ಲಿ ಕೋವಿಡ್‌-19 ವೈರಾಣು ತಡೆಗಟ್ಟಲು, ಕೊಪ್ಪಳ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘದಿಂದ ಬಳ್ಳಾರಿ ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ವೆಂಕನಗೌಡ ಹಿರೇಗೌಡ್ರ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಒಂದು ಲಕ್ಷ ರುಪಾಯಿಗಳನ್ನು (ಕೆ.ಜಿ.ಬಿ. ಡಿಡಿ ನಂ.289543) ನೀಡಲಾಗಿದೆ ಎಂದು ಕೊಪ್ಪಳ ತಾಲೂಕು ಹಾಲು ಉತ್ಪಾದಕರ ಸಂಘದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

Follow Us:
Download App:
  • android
  • ios