ಫೆಬ್ರವರಿ 1 ರಿಂದ 14 ರವರೆಗೆ ಯಲಹಂಕದಲ್ಲಿ ನಡೆಯಲಿರುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ಹಿನ್ನೆಲೆಯಲ್ಲಿ, 10 ಕಿ.ಮೀ. ವ್ಯಾಪ್ತಿಯಲ್ಲಿ ಕ್ರೇನ್ ಬಳಸಿ ಎತ್ತರದ ಕಟ್ಟಡಗಳ ನಿರ್ಮಾಣಕ್ಕೆ ಬಿಬಿಎಂಪಿ ನಿರ್ಬಂಧ ಹೇರಿದೆ. ವಿಮಾನ ಹಾರಾಟಕ್ಕೆ ಅಡ್ಡಿಯಾಗದಂತೆ ಈ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರು (ಜ.17): ಸಿಲಿಕಾನ್ ಸಿಟಿ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಫೆ.1ರಿಂದ ಫೆ.14ರವರೆಗೆ ಅಂತಾರಾಷ್ಟ್ರೀಯ ಮಟ್ಟದ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ನಡೆಯಲಿದೆ. ಈ ವೇಳೆ ವಿಮಾನ ಹಾರಾಟಕ್ಕೆ ಅಡ್ಡಿಯಾಗದ ರೀತಿಯಲ್ಲಿ ಯಲಹಂಕ ವಾಯುನೆಲೆಯ 10 ಕಿ.ಮೀ. ಸುತ್ತಲಿನ ವ್ಯಾಪ್ತಿಯಲ್ಲಿ ಕ್ರೇನ್ ಬಳಸಿ ಎತ್ತರದ ಕಟ್ಟಡಗಳನ್ನು ನಿರ್ಮಾಣ ಮಾಡದಂತೆ ಬಿಬಿಎಂಪಿ ಆದೇಶ ಹೊರಡಿಸಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಬಿಎಂಪಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಯಲಹಂಕ ವಲಯ ವ್ಯಾಪ್ತಿಯ ವಾಯುಸೇನಾ ನೆಲೆ(Air Force Station)ಯಲ್ಲಿ ಫೆ.1ರಿಂದ ಫೆ.14ವರೆಗೆ ಅಂತರಾಷ್ಟ್ರೀಯ ಮಟ್ಟದ ‘ಏರ್ ಇಂಡಿಯಾ-2025(AERO INDIA) ನಡೆಯಲಿದೆ. ಏರ್ ಶೋ-2025 ನಡೆಯುತ್ತಿರುವ ಪ್ರಯುಕ್ತ ಯಲಹಂಕ ವಾಯುಸೇನಾ ನೆಲೆಯಿಂದ 10.00 ಕಿ.ಮೀ ಅಂತರದಲ್ಲಿ ನಿರ್ಮಾಣ ಹಂತದಲ್ಲಿರುವ ಬೃಹತ್ ಕಟ್ಟಡಗಳಲ್ಲಿ ಉಪಯೋಗಿಸುವ ಕ್ರೇನ್‌ಗಳ ಎತ್ತರವನ್ನು ತಗ್ಗಿಸಲು ಹಾಗೂ ಕ್ರೇನ್ ಚಟುವಟಿಕೆಯನ್ನು ಸ್ಥಗಿತಗೊಳಿಸಲು ಬಹುಮಹಡಿ ಕಟ್ಟಡಗಳ ಸಂಸ್ಥೆಗಳು/ಅಭಿವೃದ್ಧಿದಾರರಿಗೆ ಈ ಮೂಲಕ ತಿಳಿಯಪಡಿಸಿದೆ.

ಮುಂದುವರಿದು, ವಾಯುಸೇನಾ ನೆಲೆಯಿಂದ 10.00 ಕಿ.ಮೀ ಅಂತರದಲ್ಲಿ ನಿರ್ಮಾಣ ಹಂತದಲ್ಲಿರುವ ಎಲ್ಲಾ ಬೃಹತ್ ಕಟ್ಟಡಗಳು, ಮೇಲಿನ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಬಿಬಿಎಂಪಿ ಕಾಯ್ದೆ 2020 ಮತ್ತು ಭಾರತೀಯ ಏರ್‌ಕ್ರಾಪ್ಟ್ 1937ರ ರೂಲ್ 91 ರೀತ್ಯಾ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ನಗರ ಯೋಜನೆ-ಉತ್ತರ ವಿಭಾಗದ ಜಂಟಿ ನಿರ್ದೇಶಕರು ತಿಳಿಸಿರುತ್ತಾರೆ.