ಬಂಟ್ವಾಳ[ಜು.10]: ಪುತ್ತೂರು ಘಟನೆ ಮಾಡುವ ಮುನ್ನವೇ ದಕ್ಷಿಣ ಕನ್ನಡದಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ.

ಮಂಗಳೂರಿನ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಗ್ರಾಂ. ಪಂ. ಸಿಬ್ಬಂದಿ ಸೇರಿ ಐವರ ತಂಡ 17 ವರ್ಷದ ಅಪ್ರಾಪ್ತ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಬಾಲಕಿ ಸದ್ಯ ಆರು ತಿಂಗಳ ಗರ್ಭಿಣಿಯಾಗಿದ್ದಾಳೆ.

ವಿದ್ಯಾರ್ಥಿನಿಗೆ ಡ್ರಗ್ಸ್ ನೀಡಿ ಗ್ಯಾಂಗ್ ರೇಪ್: ಇಬ್ಬರು ಕ್ಲಾಸ್‌ಮೇಟ್ಸ್ ಅರೆಸ್ಟ್

ಗ್ರಾಮ ಪಂಚಾಯಿತಿ ಸಿಬ್ಬಂದಿ ಸೇರಿ ಐವರ ತಂಡದಿಂದ ಅತ್ಯಾಚಾರ ನಡೆಸಿದ್ದಾರೆನ್ನಲಾಗಿದೆ. ಆಶಾ ಕಾರ್ಯಕರ್ತೆ ಮನೆಗೆ ಬಂದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.

ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿ‌ಗಳ ಪತ್ತೆಗೆ ಪೊಲೀಸರು ಬೀಸಿದ್ದಾರೆ.