ವಿಜಯಪುರ (ಮೇ.19): ಕೊರೋನಾ ಏರಿಕೆಯಾಗುತ್ತಲೇ ಇದ್ದು ಇದೀಗ ಮತ್ತೆ ಬಸವನಗೌಡ ಪಾಟೀಲ್ ಯತ್ನಾಳ್ ತಮ್ಮ ವಾಕ್‌ ಪ್ರಹಾರ ಮುಂದುವರಿಸಿದ್ದಾರೆ. 

ವಿಜಯಪುರದಲ್ಲಿಂದು ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಎಂ ಯಡಿಯೂರಪ್ಪ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಕೊರೋನಾ ಎರಡನೇ ಅಲೆ ಭಯಾನಕವಾಗಿದೆ. ಮನೆಯಲ್ಲಿ ಕೂರದೆ ಕೆಲಸ ಮಾಡಿ. ಇಲ್ಲದಿದ್ದರೆ ರಾಜೀನಾಮೆ ನೀಡಿ ಮನೆಗೆ ಹೋಗಿ ಎಂದು ಅಕ್ರೋಶ ಹೊರಹಾಕಿದ್ದಾರೆ.

ಜಿಂದಾಲ್ ಕಂಪನಿಗೆ ಜಮೀನು ಕೊಡುವುದಕ್ಕಾಗಿ ಸಿಎಂ ಕುರ್ಚಿ ಮೇಲೆ ಕೂರಬೇಡಿ. ಲಾಕ್ ಡೌನ್ ಮಾಡುವುದಕ್ಕಿಂತ ಮುನ್ನವೇ ಪ್ಯಾಕೇಜ್ ಘೋಷಣೆ ಮಾಡಬೇಕಿತ್ತು.ಈಗ ಜನರ ಜೀವನ ಅತ್ಯಂತ ಭಯಾನಕವಾಗಿದೆ. ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆಂದು ಹೇಳಿದರು.

'ಯಡಿಯೂರಪ್ಪ ಸಿಎಂ ಸ್ಥಾನ ಬಿಟ್ಟರೆ, ನಾನು ಮುಖ್ಯಮಂತ್ರಿ ಆಗ್ತೇನೆ' ..

ಲಸಿಕೆ ಬಗ್ಗೆ ಕಾಂಗ್ರೆಸ್ ಅಂದು ಮಾಡಿದ ಅಪಪ್ರಚಾರದಿಂದ ಜನರು ಲಸಿಕೆ ಪಡೆಯಲು ಹಿಂದೇಟು ಹಾಕಿದರು. ಈಗ ಜನರಲ್ಲಿ ಜಾಗೃತಿ ಮೂಡುತ್ತಿದೆ. ವಿಜಯಪುರದಲ್ಲಿ ಲಸಿಕೆ ಹಾಕುವ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಸಾಧನೆ ಮಾಡಲಾಗುವುದು ಎಂದು ಯತ್ನಾಳ್ ಹೇಳಿದರು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona