Mekedatu Politics: 'ಪಾದಯಾತ್ರೆಗೂ ಮುನ್ನವೇ ಬೊಮ್ಮಾಯಿ ಸರ್ಕಾರಕ್ಕೆ ನಡುಕ'
* ಮೇಕೆದಾಟು ಯೋಜನೆ ಆರಂಭಿಸಲು ಅನಗತ್ಯವಾಗಿ ವಿಳಂಬ
* ತಮಿಳುನಾಡು ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರ
* ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಬೇಕು
ಯಾದಗಿರಿ(ಜ.05): ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಹಮ್ಮಿಕೊಂಡಿರುವ ಪಾದಯಾತ್ರೆ ಆರಂಭಕ್ಕೆ ಮುನ್ನವೇ ಬಿಜೆಪಿ ಸರ್ಕಾರಕ್ಕೆ(BJP Government) ನಡುಕ ಶುರುವಾಗಿದೆ ಎಂದು ಕಾಂಗ್ರೆಸ್ ಮುಖಂಡ ಡಾ. ಭೀಮಣ್ಣ ಮೇಟಿ(Dr Bheemanna Meti) ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸರ್ಕಾರದ ವಿಳಂಬ ಧೋರಣೆ ವಿರುದ್ಧ ಸಿಡಿದೆದ್ದಿದ್ದೇವೆ. ಜನರ ಅನುಕೂಲಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ(DK Shivakumar) ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಅವರು ಪಾದಯಾತ್ರೆ(Padayatra) ಹಮ್ಮಿಕೊಂಡಿದ್ದಾರೆ. ಇದನ್ನು ನೋಡಿ ಬಿಜೆಪಿ ಸರ್ಕಾರದಲ್ಲಿ ತಳಮಳ ಶುರುವಾಗಿದೆ. ಹೀಗಾಗಿಯೇ ಮನಸ್ಸಿಗೆ ಬಂದಂತೆ ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ಕಿಡಿಕಾರಿದರು.
Local Body Election: ಬಿಜೆಪಿ ಸೋಲಿಗೆ ನಾನೇ ಕಾರಣ: ಶಾಸಕ ರಾಜೂಗೌಡ
ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ. ಆದರೆ, ಮೇಕೆದಾಟು ಯೋಜನೆ(Mekedatu Project) ಆರಂಭಿಸಲು ಅನಗತ್ಯವಾಗಿ ವಿಳಂಬ ಮಾಡುತ್ತಿದೆ. ಇವರಿಗೆ ಇಚ್ಛಾಶಕ್ತಿ ಎಂಬುದೇ ಇಲ್ಲ. ಇದನ್ನು ಗಂಭೀರವಾಗಿ ಪರಿಗಣಿಸುವುದು ಅಗತ್ಯವಿದೆ. ಮೇಕದಾಟು ಯೋಜನೆ ಆರಂಭವಾದರೇ ಕುಡಿಯುವ ನೀರಿನ ಸಮಸ್ಯೆ ಸಾಕಷ್ಟು ಜಿಲ್ಲೆಗಳಲ್ಲಿ ಕಡಿಮೆ ಆಗಲಿದೆ. 12 ಜಿಲ್ಲೆಗಳ ಜನರಿಗೆ ಪ್ರಯೋಜನವಾಗಲಿದೆ. ಆದರೆ, ಬಿಜೆಪಿ ಸರ್ಕಾರ ಮಾತ್ರ ಇದಕ್ಕೂ ತನಗೂ ಕಿಂಚಿತ್ತು ಸಂಬಂಧವೇ ಇಲ್ಲ ಎಂಬಂತೆ ವರ್ತಿಸುತ್ತಿದೆ ಎಂದರು.
ರಾಜ್ಯದಲ್ಲಿ(Karnataka) 25 ಜನ ಬಿಜೆಪಿ ಸಂಸದರು ಇದ್ದಾರೆ. ಆದರೆ, ಇವರು ಕೇಂದ್ರದ ಮೇಲೆ ಒತ್ತಡ ಹೇರುವಂತಹ ಕೆಲಸ ಮಾಡುತ್ತಿಲ್ಲ. ತಮಿಳುನಾಡು(Tamil Nadu) ರಾಜ್ಯಕ್ಕೆ ಹೆದರಿಕೊಂಡು ಇವರು ಮೌನವಾಗಿದ್ದಾರೆ. ಅನಗತ್ಯವಾಗಿ ಈ ಯೋಜನೆಗೆ ಅಲ್ಲಿನ ಸರ್ಕಾರ ವಿರೋಧ ಮಾಡುತ್ತಿದೆ. ಆದರೆ, ಕೇಂದ್ರ ಮತ್ತು ರಾಜ್ಯ ಸರ್ಕಾರ ತಮಿಳುನಾಡು ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ಮೇಲೆ ಕಾಳಜಿ ಇದ್ದರೇ ಕೂಡಲೇ ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ(Central Government) ಅನುಮತಿ ನೀಡಬೇಕು. ಇಲ್ಲದಿದ್ದರೇ ಗಂಭೀರ ಪರಿಣಾಮ ಮುಂದಿನ ದಿನಗಳಲ್ಲಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಸಚಿವ ಕಾರಜೋಳ ‘ಬಾಂಬ್’: ಕಾಂಗ್ರೆಸ್ ವಿರುದ್ಧ ಶೀಘ್ರ ಸ್ಪೋಟಕ ಸುದ್ದಿ..!
ಮೇಕೆದಾಟು ಯೋಜನೆ ಕುರಿತು ಜ.3ರಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದ್ದು, ನೀರಾವರಿ ಯೋಜನೆಯಲ್ಲಿ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್‌ನವರ(Congress) ಹೊಣೆಗೇಡಿತನದ ಬಗ್ಗೆ ಜ.9ಕ್ಕೆ ಮುನ್ನ ದಾಖಲೆ ಬಿಡುಗಡೆ ಮಾಡುತ್ತೇವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ(Govind Karjol) ಹೇಳಿದ್ದರು.
BJP Government: ಶಾಸಕರೇ 8-10 ಪರ್ಸೆಂಟ್ ಮುಂಗಡ ನೀಡಿ ಕೆಲಸ ಮಾಡಿಕೊಳ್ಳುತ್ತಿದ್ದಾರೆ: ಕಂದಕೂರ
ಕಾಂಗ್ರೆಸ್‌ನವರು ಅಂದು ಕೃಷ್ಣೆಗೆ (ಕೂಡಲಸಂಗಮ) ಇಂದು ಕಾವೇರಿಗೆ (ಮೇಕೆದಾಟು) ಎಂದು ಪಾದಯಾತ್ರೆ ಕೈಗೊಂಡಿದ್ದಾರೆ. ಅರ್ಥಹೀನ ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ಮಿತ್ರರು ಅಧಿಕಾರದಲ್ಲಿದ್ದಾಗ ಮೇಕೆದಾಟು ರಿತು ಮಾಡಿರುವ ಹೊಣೆಗೇಡಿತನಕ್ಕೆ ನಮ್ಮಲ್ಲಿ ಸಾಕ್ಷ್ಯ ಇದೆ. ಕೆಲವೇ ದಿನಗಳಲ್ಲಿ ಸ್ಫೋಟಕ ಮಾಹಿತಿ ಹೊರಹಾಕುತ್ತೇವೆ ಎಂದು ತಿಳಿಸಿದ್ದರು.
2013ರ ಜ.7ರಂದು ಕಾಂಗ್ರೆಸ್ ನಡಿಗೆ ಕೃಷ್ಣಾ ಕಡೆಗೆ ಎಂದು ಪಾದಯಾತ್ರೆ ಕೈಗೊಂಡಿದ್ದರು. ಬಳಿಕ ಏಳು ವರ್ಷ ಅವರು ಅಧಿಕಾರದಲ್ಲಿದ್ದರು. ಆಗ ಕೃಷ್ಣಾ ಯೋಜನೆಗಾಗಿ(Krishna River) ಖರ್ಚು ಮಾಡಿದ್ದು 7,776 ಕೋಟಿ ರು ಮಾತ್ರ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಗೃಹ ಸಚಿವ ಡಾ.ಜಿ.ಪರಮೇಶ್ವರ್(Dr G Parameshwara) ಇಬ್ಬರ ಮಧ್ಯ ಪೈಪೋಟಿಗಾಗಿ ನಡೆದಿದ್ದ ಪಾದಯಾತ್ರೆ ಅದಾಗಿತ್ತು. ಈಗ ಮೇಕೆದಾಟು ಯೋಜನೆಗಾಗಿ ಹೋರಾಟ ಮಾಡುತ್ತಿದ್ದಾರೆ. ರಾಜ್ಯದ ಮತ್ತು ಜನತೆಯ ಹಿತದೃಷ್ಟಿಯಿಂದ ಸತ್ಯವನ್ನು ಗಮನಕ್ಕೆ ತರಬೇಕಾಗಿದೆ. ಕಾಂಗ್ರೆಸ್ ಗಿಮಿಕ್ ಮಾಡುತ್ತಿರುವುದು ಇದೇ ಮೊದಲಲ್ಲ ಎಂದರು.
ಅಧಿಕಾರದಲ್ಲಿದ್ದಾಗ ಆಲಸ್ಯತನ, ಕಡತ ಯಜ್ಞ ಮಾಡದೇ ಕಾಲಹರಣ ಮಾಡುವುದು, ಪ್ರತಿಪಕ್ಷ ಸ್ಥಾನದಲ್ಲಿದ್ದಾಗ ಅನಗತ್ಯ ಆಂದೋಲನ ಕೈಗೊಳ್ಳುವುದು ಕಾಂಗ್ರೆಸ್‌ನವರ ಜಾಯಮಾನ. ಅಧಿಕಾರದಲ್ಲಿದ್ದಾಗ ಕಾವೇರಿ(Kaveri River) ಕಣಿವೆಯ ರೈತರ(Farmers) ಮತ್ತು ಜನಹಿತದ ಕೆಲಸಗಳನ್ನು ವಿಳಂಬ ದ್ರೋಹದ ಮೂಲಕ ಮುಂದೂಡಿ ಈಗ ಪಾದಯಾತ್ರೆ ಮೂಲಕ ಗಿಮಿಕ್ ಮಾಡುವುದು ಜನರಿಗೆ ತಿಳಿಯುತ್ತದೆ. ಕಾಂಗ್ರೆಸ್ ಪಾದಯಾತ್ರೆ ಆರಂಭವಾಗುವ ಒಂದೆರಡು ದಿನಗಳ ಮುಂಚೆಯೇ ಮಾಹಿತಿಯನ್ನು ಬಹಿರಂಗಗೊಳಿಸಲಾಗುವುದು. ನೂರಾರು ಹೋರಾಟ ಮಾಡಿದರೂ ನಮಗೆ ಯಾವುದೇ ಆತಂಕ ಇಲ್ಲ. ಜನತೆ ಒಂದು ಸಲ ಮೋಸ ಹೋಗುತ್ತಾರೆ, ಎರಡನೇ ಸಲ ಮೋಸ ಹೋಗುವುದಿಲ್ಲ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು.