ಕಾಂಗ್ರೆಸ್ ಪಕ್ಷ ಮಹಿಳಾ ವಂದನಾ (ಮಹಿಳಾ ಮೀಸಲಾತಿ) ಬಿಲ್ಲು ವಿರೋಧ ಮಾಡಿ ಸಮಗ್ರ ಭಾರತದ ಮಹಿಳಾ ಶಕ್ತಿಗೆ ಅಪಮಾನ ಮಾಡಿದೆ ಎಂದು ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.

ಬೆಂಗಳೂರು (ಏ.19): ಕಾಂಗ್ರೆಸ್ ಪಕ್ಷ ಮಹಿಳಾ ವಂದನಾ (ಮಹಿಳಾ ಮೀಸಲಾತಿ) ಬಿಲ್ಲು ವಿರೋಧ ಮಾಡಿ ಸಮಗ್ರ ಭಾರತದ ಮಹಿಳಾ ಶಕ್ತಿಗೆ ಅಪಮಾನ ಮಾಡಿದೆ ಎಂದು ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಯಾವತ್ತೂ ಮಹಿಳೆಯರಿಗೆ ಮೀಸಲಾತಿ ಕೊಡುವ ವಿಚಾರದಲ್ಲಿ ಕಾಂಗ್ರೆಸ್‌ ನಿಯತ್ತಾಗಿರಲಿಲ್ಲ. ಮೂವತ್ತು ವರ್ಷದಿಂದ ಮಾಡಿಕೊಂಡು ಬಂದಿರುವುದನ್ನು ಈಗ ಮತ್ತೆ ಮುಂದುವರೆಸಿದ್ದಾರೆ.

Add Asianetnews Kannada as a Preferred SourcegooglePreferred

ಇದರಿಂದ ಅವರಿಗೆ ಮಹಿಳೆಯರ ಶಾಪ ತಟ್ಟೇ ತಟ್ಟುತ್ತದೆ. ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರು ಪಾಲ್ಗೊಳ್ಳಬೇಕು ಎಂಬ ಅಭಿವೃದ್ಧಿ ಪರ ಚಿಂತನೆಗೆ ವಿರೋಧವಾಗಿ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ನಡೆದುಕೊಂಡಿವೆ. ಮಹಿಳಾ ಮೀಸಲಾತಿ ಬಿಲ್ ಪಾಸ್ ಆಗದಿರುವುದನ್ನು ಇಡೀ ಭಾರತ ದೇಶ ಗಮನಿಸುತ್ತಿದೆ. ಈಗ ಕಾಂಗ್ರೆಸ್ ಸುಳ್ಳು ಸಮರ್ಥನೆ ಮಾಡಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2029ಕ್ಕೆ ಮೀಸಲಾತಿಗೆ ನಿರ್ಧಾರ

ಜನಸಂಖ್ಯೆ ಆಧಾರದ ಮೇಲೆ 2023ರಲ್ಲಿ ಶೇ.50 ರಷ್ಟು ಕ್ಷೇತ್ರಗಳ ಹೆಚ್ಚಳ ಮಾಡಬೇಕು. 2034ಕ್ಕೆ ಜಾರಿಗೊಳಿಸುವ ತೀರ್ಮಾನ ಆಗಿತ್ತು. ಅದನ್ನು 2029ಕ್ಕೆ ಮಾಡಬೇಕು ಎನ್ನುವ ಕಾರಣದಿಂದ ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಶೇ.50ರಷ್ಟು ಸ್ಥಾನಗಳನ್ನು ಹೆಚ್ಚಳ ಮಾಡಿ, ಮಹಿಳೆಯರಿಗೆ ಶೇ.33ರಷ್ಟು ಸ್ಥಾನ‌ ಮೀಸಲಿಡುವ ಉದ್ದೇಶದಿಂದ ಈ ಬಿಲ್‌ ತಂದರೆ, ಅದರಲ್ಲಿ ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ದೂರಿದ್ದಾರೆ.

ಕಾಂಗ್ರೆಸ್‌ ಮಿತ್ರಪಕ್ಷಗಳು ದಕ್ಷಿಣ ಭಾರತಕ್ಕೆ ಅನ್ಯಾಯವಾಗುತ್ತಿದೆ ಎನ್ನುವ ವಾದವನ್ನು ಲೋಕಸಭೆಯಲ್ಲಿ ಮುಂದಿಟ್ಟಿವೆ. ಗೃಹ ಸಚಿವ ಅಮಿತ್ ಶಾ ಅವರು ಈಗಿರುವ ಲೋಕಸಭೆ, ವಿಧಾನಸಭೆ ಸ್ಥಾನಗಳನ್ನು ಶೇ.50ರಷ್ಟು ಹೆಚ್ಚಳ ಮಾಡುತ್ತೇವೆ. ಅದಕ್ಕೆ ಕಾನೂನಿನಲ್ಲಿ ತಿದ್ದುಪಡಿ ತಂದು ಕಾನೂನಿನ ಭಾಗವಾಗಿ ಮಾಡುವುದಾಗಿ ಹೇಳಿದರೂ ವಿಪಕ್ಷಗಳು ಒಪ್ಪಲಿಲ್ಲ. ಇದನ್ನು ನೋಡಿದಾಗ ಕಾಂಗ್ರೆಸ್ಸಿಗರಿಗೆ ಮಹಿಳಾ ಮೀಸಲಾತಿ ಬೇಕಾಗಿಲ್ಲ ಎನ್ನುವುದು ಬಹಳ ಸ್ಪಷ್ಟವಾಗುತ್ತದೆ ಎಂದು ಬಸವರಾಜ ಬೊಮ್ಮಾಯಿ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ತಿಳಿಸಿದ್ದಾರೆ.