Asianet Suvarna News Asianet Suvarna News

ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತು ಅಧಿವೇಶನದಲ್ಲಿ ಚರ್ಚಿಸ್ತೇನೆ: ಹೊರಟ್ಟಿ

ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳು, ನನೆಗುದಿಗೆ ಬಿದ್ದಿರುವ ಯೋಜನೆಗಳ ಜಾರಿಗೆ ಧ್ವನಿ ಎತ್ತಲಾಗುವುದು| ಬೆಳಗಾವಿ ಸುವರ್ಣ ಸೌಧಕ್ಕೆ ರಾಜ್ಯಮಟ್ಟದ ಕೆಲ ಕಚೇರಿಗಳನ್ನು ಸ್ಥಳಾಂತರಿಸಬೇಕಿತ್ತು. ಆದರೆ ಸರ್ಕಾರ ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿಲ್ಲ. ಇಲ್ಲಿನ ಕಚೇರಿಗಳನ್ನು ಸ್ಥಳಾಂತರಿಸಲು ಮುಂದಾಗಿದೆ. ಈ ಬಗ್ಗೆ ಚರ್ಚಿಸಲಾಗುವುದು| 

Basavaraj Horatti Says Discussion at the Session on Development of North Karnataka
Author
Bengaluru, First Published Sep 20, 2020, 2:46 PM IST

ಹುಬ್ಬಳ್ಳಿ(ಸೆ.20): ಮುಂಗಾರು ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತಂತೆ ಚರ್ಚಿಸುತ್ತೇನೆ. ಸುವರ್ಣ ವಿಧಾನಸೌಧಕ್ಕೆ ಕಚೇರಿಗಳ ಸ್ಥಳಾಂತರ ಕುರಿತು ಪ್ರಸ್ತಾಪಿಸಲಾಗುವುದು ಎಂದು ವಿಧಾನ ಪರಿಷತ್‌ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ. 

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳು, ನನೆಗುದಿಗೆ ಬಿದ್ದಿರುವ ಯೋಜನೆಗಳ ಜಾರಿಗೆ ಧ್ವನಿ ಎತ್ತಲಾಗುವುದು. ಬೆಳಗಾವಿ ಸುವರ್ಣ ಸೌಧಕ್ಕೆ ರಾಜ್ಯಮಟ್ಟದ ಕೆಲ ಕಚೇರಿಗಳನ್ನು ಸ್ಥಳಾಂತರಿಸಬೇಕಿತ್ತು. ಆದರೆ ಸರ್ಕಾರ ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿಲ್ಲ. ಇಲ್ಲಿನ ಕಚೇರಿಗಳನ್ನು ಸ್ಥಳಾಂತರಿಸಲು ಮುಂದಾಗಿದೆ. ಈ ಬಗ್ಗೆ ಚರ್ಚಿಸಲಾಗುವುದು. ಈ ಕುರಿತಂತೆ ಈಗಾಗಲೇ ತಮ್ಮ ನಾಯಕರ ಜತೆಗೆ ಚರ್ಚೆ ಮಾಡಿದ್ದು, ಸದನದಲ್ಲಿ ಒಗ್ಗಟ್ಟು ಪ್ರದರ್ಶಿಸಲಾಗುವುದು ಎಂದರು.

ಅನುದಾನಿತ ಶಾಲೆಗಳಲ್ಲಿ ಸಾವಿರಾರು ಶಿಕ್ಷಕರ ಹುದ್ದೆಗಳು ಖಾಲಿ!

ಇನ್ನೂ ಶಿಕ್ಷಕರಿಗೆ ಮಾರಕವಾಗಿರುವ ವಿದ್ಯಾಗಮ ಯೋಜನೆಯ ಸಾಧಕ-ಬಾಧಕ, ಅನುದಾನಿತ ಖಾಸಗಿ ಶಾಲಾ ಶಿಕ್ಷಕರ ಬೇಡಿಕೆ ಸೇರಿದಂಥೆ ಮತ್ತಿತರರ ವಿಷಯಗಳ ಕುರಿತು ಸೆ. 21ರಿಂದ ನಡೆಯಲಿರುವ ಅಧಿವೇಶನದಲ್ಲಿ ಸುದೀರ್ಘ ಚರ್ಚೆಗೆ ಒತ್ತಾಯಿಸುತ್ತೇನೆ ಎಂದು ನುಡಿದರು.
 

Follow Us:
Download App:
  • android
  • ios