ಗಣೇಶ ಹಬ್ಬದ ಅಂಗವಾಗಿ ಗಣೇಶ ಮೂರ್ತಿ ವಿಸರ್ಜನೆಗೆ ನಗರದ 41 ಕೆರೆಗಳ ಅಂಗಳದಲ್ಲಿ ತಾತ್ಕಾಲಿಕ ಕಲ್ಯಾಣಿ, 489 ಸಂಚಾರಿ ವಿಸರ್ಜನಾ ವಾಹನಗಳ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರು : ಗಣೇಶ ಹಬ್ಬದ ಅಂಗವಾಗಿ ಗಣೇಶ ಮೂರ್ತಿ ವಿಸರ್ಜನೆಗೆ ನಗರದ 41 ಕೆರೆಗಳ ಅಂಗಳದಲ್ಲಿ ತಾತ್ಕಾಲಿಕ ಕಲ್ಯಾಣಿ, 489 ಸಂಚಾರಿ ವಿಸರ್ಜನಾ ವಾಹನಗಳ ವ್ಯವಸ್ಥೆ ಮಾಡಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪ್ರತಿ ವರ್ಷದಿಂದ ಈ ಬಾರಿಯೂ ಬಿಬಿಎಂಪಿಯಿಂದ ಗಣೇಶ ಹಬ್ಬಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪಾಲಿಕೆಯ 75 ಉಪ ವಿಭಾಗದ ಮಟ್ಟದಲ್ಲಿ ಏಕಗವಾಕ್ಷಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕ ಗಣೇಶ ಪ್ರತಿಷ್ಠಾಪಿಸುವವರಿಗೆ ಬಿಬಿಎಂಪಿ, ಬೆಸ್ಕಾಂ, ಪೊಲೀಸ್‌ ಹಾಗೂ ಅಗ್ನಿ ಶಾಮಕ ದಳದಿಂದ ಅನುಮತಿ ಪತ್ರ ನೀಡುವ ವ್ಯವಸ್ಥೆ ಮಾಡಲಾಗಿದೆ. ಅನುಮತಿ ಪತ್ರ ನೀಡುವುದಕ್ಕೆ ಆಯಾ ಇಲಾಖೆಗಳಿಂದ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ.

ಇನ್ನೂ ಗಣೇಶ ಮೂರ್ತಿಗಳ ವಿಸರ್ಜನೆಗೆ ಕೆರೆಗಳ ಅಂಗಳದಲ್ಲಿ ತಾತ್ಕಾಲಿಕ ಕಲ್ಯಾಣಿ, ಸಂಚಾರಿ ವಿಸರ್ಜನಾ ವಾಹನ ವ್ಯವಸ್ಥೆ ಮಾಡಲಾಗಿದೆ. ಗಣೇಶ ವಿಸರ್ಜನೆಗೆ ಸಂಬಂಧಿಸಿದಂತೆ ಮೇಲ್ವಿಚಾರಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಈಗಾಗಲೇ ನೋಡಲ್ ಅಧಿಕಾರಿಗಳನ್ನು ಸಹ ನಿಯೋಜಿಸಲಾಗಿದೆ. ಅದರ ಸಂಪೂರ್ಣ ವಿವರಗಳಿಗಾಗಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಅಥವಾ ಬಿಬಿಎಂಪಿ ವೆಬ್ ಸೈಟ್ ಲಿಂಕ್ https://apps.bbmpgov.in/ganesh2025/ ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಬಿಬಿಎಂಪಿ ತಿಳಿಸಿದೆ.

ಈ ಸಲ ಹೇರೋಹಳ್ಳಿ ಕೆರೆಯಲ್ಲಿ ವಿಸರ್ಜನೆ ಇಲ್ಲ

ರಾಜರಾಜೇಶ್ವರಿ ನಗರದ ಹೇರೋಹಳ್ಳಿ ಕೆರೆಯ ಕಲ್ಯಾಣಿಯಲ್ಲಿ ಪ್ರತಿ ವರ್ಷವೂ ಗಣೇಶ ಮೂರ್ತಿಗಳ ವಿಸರ್ಜನೆಗೆ ವ್ಯವಸ್ಥೆ ಕಲ್ಪಿಸಲಾಗುತ್ತಿತ್ತು. ಈ ಬಾರಿ ತಾಂತ್ರಿಕ ಕಾರಣಗಳಿಂದ ಗಣೇಶ ವಿಸರ್ಜಿಸುವುದನ್ನು ಸ್ಥಗಿತಗೊಳಿಸಲಾಗಿದೆ.

ಯಡಿಯೂರು ಕೆರೆಯಲ್ಲಿ ವಿಸರ್ಜನೆಗೆ ವ್ಯವಸ್ಥೆ

ಯಡಿಯೂರು ಕೆರೆಯಲ್ಲಿ ಗಣೇಶ ವಿಸರ್ಜನೆಗಾಗಿ ಪ್ರತಿ ವರ್ಷದಂತೆ ಈ ವರ್ಷವೂ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆ.27 ರಿಂದ ಸೆ.17ರ ವರೆಗೆ ಸಾರ್ವಜನಿಕರು ಪರಿಸರ ಸ್ನೇಹಿ ಅಥವಾ ಮಣ್ಣಿನಿಂದ ಮಾಡಿರುವ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲು ಅವಕಾಶ ಕಲ್ಪಿಸಲಾಗಿದೆ.