ಬೆಂಗಳೂರು ಉದ್ಯಮಿಗಳು ಬೆಚ್ಚಿ ಬೀಳುವ ಆದೇಶ ಹೊರಡಿಸಿದ ಬಿಬಿಎಂಪಿ ಮುಖ್ಯ ಆಯುಕ್ತರು!
ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚು ಬಾಕಿ ಆಸ್ತಿ ತೆರಿಗೆ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಲು ಪಾಲಿಕೆ ಮುಖ್ಯ ಆಯುಕ್ತರು ಸೂಚನೆ ನೀಡಿದ್ದಾರೆ. ಈ ಮೂಲಕ ಬೆಂಗಳೂರಿನಲ್ಲಿರುವ ಎಲ್ಲ ವಸತಿಯೇತರ ಮಳಿಗೆಯಲ್ಲಿ ವ್ಯವಹಾರ ಮಾಡುವ ಉದ್ಯಮಿಗಳಿಗೆ ದೊಡ್ಡ ಶಾಕ್ ನೀಡಿದ್ದಾರೆ.
ಬೆಂಗಳೂರು (ನ.11): ಸಿಲಿಕಾನ್ ಸಿಟಿ ಸ್ಥಳೀಯ ಆಡಳಿತ ಸಂಸ್ಥೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಹೆಚ್ಚು ಬಾಕಿ ಆಸ್ತಿ ತೆರಿಗೆ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಿ ಬಾಕಿ ವಸೂಲಿ ಮಾಡುವಂತೆ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಪಾಲಿಕೆ ಅಧಿಕಾರಿಗಳಿಗೆ ಖಡಕ್ ಸೂಚನೆಯನ್ನು ರವಾನಿಸಿದ್ದಾರೆ.
ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಇಂದು ಮಲ್ಲೇಶ್ವರಂ ಐಪಿಪಿ ಸಭಾಂಗಣ ಕೊಠಡಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹೆಚ್ಚು ಬಾಕಿ ಉಳಿಸಿಕೊಂಡಿರುವ ಸುಸ್ತಿದಾರರು ಹಾಗೂ ಪರಿಷ್ಕರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಆಯಾ ವಲಯ ವ್ಯಾಪ್ತಿಯಲ್ಲಿ ಸೂಕ್ತ ಕ್ರಮಗಳನ್ನು ಕೈಗೊಂಡು ಬಾಕಿ ಆಸ್ತಿ ತೆರಿಗೆಯನ್ನು ವಸೂಲಿ ಮಾಡಬೇಕು. ಆಯಾ ವಲಯಗಳ ಸಹಾಯಕ ಕಂದಾಯ ಅಧಿಕಾರಿ ವ್ಯಾಪ್ತಿವಾರು ಸಭೆ ನಡೆಸಿ, ಉಪ ವಿಭಾಗಗಳ ವ್ಯಾಪ್ತಿಯಲ್ಲಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಹಾಗೂ ಪರಿಷ್ಕರಣೆ ಪ್ರಕರಣಗಳ ಪಟ್ಟಿಯ ಅನುಸಾರ ಬಾಕಿ ಆಸ್ತಿ ತೆರಿಗೆ ವಸೂಲಿ ಮಾಡಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದರು.
ಇದನ್ನೂ ಓದಿ: ಕೇರಳ, ಗಾಂಧಿ ಕುಟುಂಬದ ಲಾಬಿಗೆ ಮಣಿದ ಡಿಕೆಶಿ; ಬಂಡಿಪುರ ನೈಟ್ ಟ್ರಾವೆಲ್ ಬ್ಯಾನ್ ವಾಪಾಸ್?
ಒಟಿಎಸ್ ಯೋಜನೆ ಬಗ್ಗೆ ಅರಿವು ಮೂಡಿಸಿ: ಬಿಬಿಎಂಪಿ ವ್ಯಾಪ್ತಿಯಲ್ಲಿ ಒಂದು ಬಾರಿ ಪರಿಹಾರ(OTS) ಯೋಜನೆಯಡಿ ಆಸ್ತಿ ತೆರಿಗೆಯ ಬಾಕಿದಾರರಿಗೆ ಬಡ್ಡಿ ಮತ್ತು ದಂಡ ಮನ್ನಾ ಮಾಡಲಾಗಿದ್ದು, ಈ ಯೋಜನೆಯು 30ನೇ ನವೆಂಬರ್ ವರೆಗೆ ಮಾತ್ರ ಜಾರಿಯಲ್ಲಿರಲಿದೆ. ಈ ಸಂಬಂಧ ಪ್ರತಿಯೊಬ್ಬರೂ ಬಾಕಿ ಆಸ್ತಿ ತೆರಿಗೆಯನ್ನು 30ನೇ ನವೆಂಬರ್ ಒಳಗಾಗಿ BBMPtax.karnataka.gov.in ಗೆ ಭೇಟಿ ನೀಡಿ ಪಾವತಿಸಬೇಕು. ಇಲ್ಲವಾದಲ್ಲಿ 1ನೇ ಡಿಸೆಂಬರ್ 2024 ರಿಂದ ಪಾವತಿಸಬೇಕಿರುವ ಬಾಕಿ ಆಸ್ತಿ ತೆರಿಗೆಯು ದುಪ್ಪಟ್ಟಾಗಲಿದೆ ಎಂಬುದರ ಬಗ್ಗೆ ನಾಗರೀಕರಿಲ್ಲಿ ಅರಿವು ಮೂಡಿಸಬೆಕೆಂದು ಸೂಚಿಸಿದರು.
ಬೆಂಗಳೂರು ಒನ್ ಕೇಂದ್ರಗಳಲ್ಲಿ ಇ-ಖಾತಾ ವ್ಯವಸ್ಥೆ: ನಗರದಲ್ಲಿ ಇ-ಖಾತಾ ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಖಾತಾ ನೀಡುವ ವ್ಯವಸ್ಥೆ ಮಾಡಲಾಗಿದ್ದು, ಅಗತ್ಯ ದಾಖಲೆಗಳನ್ನು ತೆಗದುಕೊಂಡು ಹೋಗಿ 45 ರೂ. ಪಾವತಿಸಿದರೆ ಇ-ಖಾತಾ ಸಿಗಲಿದೆ. ನಾಗರೀಕರು ಇ-ಖಾತಾ ಪಡೆಯಲು ಅರ್ಜಿ ಹಾಕುವ ಹಾಗೂ ದಾಖಲೆಗಳನ್ನು ಅಪ್ಲೋಡ್ ಮಾಡುವ ಸಲುವಾಗಿ ಪಾಲಿಕೆಯ ಯುಟ್ಯೂಬ್ ಲಿಂಕ್ https://youtube.com/@bbmpcares?si=YStwr7xLhX5aRxFT ನಲ್ಲಿ ಕನ್ನಡ ಹಾಗೂ ಇಂಗ್ಲೀಷ್ ಎರಡೂ ಭಾಷೆಯ ವೀಡಿಯೋ ಅಪ್ಲೊಡ್ ಮಾಡಲಾಗಿದೆ. ಈ ವೀಡಿಯೋ ನೋಡಿಕೊಂಡು ಸುಲಭವಾಗಿ ಇ-ಖಾತಾ ಪಡೆಯಬಹುದಾಗಿದೆ. ಇದೇ ರೀತಿ ಇನ್ನಿತರೆ ವೀಡಿಯೋಗಳನ್ನು ಕೂಡಾ ಅಪ್ಲೋಡ್ ಮಾಡಲಿದ್ದು, ಪಾಲಿಕೆಯ ಯೂಟ್ಯೂಬ್ ಚಾನಲ್ ಅನ್ನು Subscribe ಮಾಡಿಕೊಳ್ಳಲು ನಾಗರೀಕರಲ್ಲಿ ಕೋರಿದರು.
ವಲಯವಾರು ಇ-ಖಾತಾ ಸಹಾಯವಾಣಿ ಸಂಖ್ಯೆಯ ವಿವರಗಳು:
ಇ-ಖಾತಾ ಪಡೆಯಲು ತಾಂತ್ರಿಕ ಸಮಸ್ಯೆಯಿದ್ದರೆ ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ವಲಯವಾರು 13 ಸಹಾಯ ತಂಡಗಳನ್ನು ರಚಿಸಲಾಗಿದೆ. ಸದರಿ ಕೇಂದ್ರಗಳ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು. ಅನಗತ್ಯವಾಗಿ ಕರೆ ಮಾಡದಿರಲು ವಿನಂತಿಸಿದರು.
ಇದನ್ನೂ ಓದಿ: ಇಂದಿರಾ ಕ್ಯಾಂಟೀನ್ ಊಟ ಸೇವಿಸಿದ ಬಿಬಿಎಂಪಿ ಮುಖ್ಯ ಆಯುಕ್ತ; ಮುಖ ಹೆಂಗಾಯ್ತು ನೋಡಿ!
ವಲಯ – ಸಹಾಯವಾಣಿ ಸಂಖ್ಯೆ
1. ಬೊಮ್ಮನಹಳ್ಳಿ ವಲಯ: 9480683182 / 9480683712
2. ದಾಸರಹಾಳ್ಳಿ ವಲಯ: 9480683710
3. ಮಹಾದೇವಪುರ ವಲಯ: 9480683718 / 9480683720
4. ಪೂರ್ವ ವಲಯ: 9480683203
5. ಪಶ್ಚಿಮ ವಲಯ: 9480683653 / 9480683204
6. ದಕ್ಷಿಣ ವಲಯ: 9480683638 / 9480683179
7. ರಾಜರಾಜೇಶ್ವರಿ ನಗರ ವಲಯ: 9480683576
8. ಯಲಹಂಕ ವಲಯ: 9480683645 / 9480683516