Asianet Suvarna News Asianet Suvarna News

ಬಿಬಿಎಂಪಿ ಪೌರಕಾರ್ಮಿಕರ ಕಾಯಂಗೆ ವಾರದಲ್ಲಿ ಅಧಿಸೂಚನೆ?

ನೇರ ವೇತನ ಪಾವತಿಯಡಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಕಾಯಂಗೊಳಿಸುವ ಕುರಿತು ನಿಯಮ ಸಡಿಲಿಕೆಗೆ ಸಂಬಂಧಿಸಿದ ಅಂತಿಮ ಅಧಿಸೂಚನೆಗೆ ಮುಖ್ಯಮಂತ್ರಿಗಳ ಅನುಮೋದನೆ ಬಾಕಿ ಇದ್ದು, ಇನ್ನೊಂದು ವಾರದಲ್ಲಿ ಪ್ರಕಟಗೊಳ್ಳುವ ಸಾಧ್ಯತೆ ಇದೆ. 

BBMP civil servants permanent notification likely in a week gvd
Author
First Published Nov 12, 2022, 11:07 AM IST

ಬೆಂಗಳೂರು (ನ.12): ನೇರ ವೇತನ ಪಾವತಿಯಡಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಕಾಯಂಗೊಳಿಸುವ ಕುರಿತು ನಿಯಮ ಸಡಿಲಿಕೆಗೆ ಸಂಬಂಧಿಸಿದ ಅಂತಿಮ ಅಧಿಸೂಚನೆಗೆ ಮುಖ್ಯಮಂತ್ರಿಗಳ ಅನುಮೋದನೆ ಬಾಕಿ ಇದ್ದು, ಇನ್ನೊಂದು ವಾರದಲ್ಲಿ ಪ್ರಕಟಗೊಳ್ಳುವ ಸಾಧ್ಯತೆ ಇದೆ. ಬಿಬಿಎಂಪಿ ಸೇರಿದಂತೆ ರಾಜ್ಯದ 302 ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಹಾಗೂ ನೇರ ವೇತನ ಪಾವತಿಯಡಿ ಕಾರ್ಯನಿರ್ವಹಿಸುತ್ತಿದ್ದ 40 ಸಾವಿರಕ್ಕೂ ಅಧಿಕ ಪೌರಕಾರ್ಮಿಕರನ್ನು ಒಟ್ಟು ಮೂರು ಹಂತದಲ್ಲಿ ಕಾಯಂಗೊಳಿಸುವುದಕ್ಕೆ ಸರ್ಕಾರ ನಿರ್ಧರಿಸಿದ್ದು, ಮೊದಲ ಹಂತದಲ್ಲಿ 11,133 ಪೌರ ಕಾರ್ಮಿಕರನ್ನು ಕಾಯಂಗೊಳಿಸುವುದಕ್ಕೆ ಸರ್ಕಾರ ತೀರ್ಮಾನಿಸಿದೆ. 

ಆದರೆ, ಕಾಯಂಗೊಳಿಸುವುದಕ್ಕೆ ಸಂಬಂಧಿಸಿದಂತೆ ಅಡ್ಡಿಯಾಗಿದ್ದ ನೇಮಕಾತಿ ನಿಯಮ ಸಡಿಲಗೊಳಿಸಲು ಕರಡು ಅಧಿಸೂಚನೆಯನ್ನು ಈ ಹಿಂದೆ ಪ್ರಕಟಿಸಿ ಆಕ್ಷೇಪಣೆ ಆಹ್ವಾನಿಸಲಾಗಿತ್ತು. ಒಟ್ಟು 81 ಆಕ್ಷೇಪಣೆ ಸಲ್ಲಿಕೆ ಆಗಿದ್ದವು. ಈ ಪೈಕಿ ಬಹುತೇಕ ಆಕ್ಷೇಪಣೆಗಳು ಗುತ್ತಿಗೆಯಡಿ ಕಾರ್ಯನಿರ್ವಹಿಸುತ್ತಿರುವ ಕಸ ವಿಲೇವಾರಿ ಮಾಡುವ ಆಟೋ ಚಾಲಕರು, ಸಹಾಯಕರನ್ನು ಕಾಯಂಗೊಳಿಸಬೇಕು ಎಂಬುದಕ್ಕೆ ಸಂಬಂಧಿಸಿದ್ದಾಗಿದ್ದವು. ಹಾಗಾಗಿ, ಈ ಎಲ್ಲಾ ಆಕ್ಷೇಪಣೆಗಳನ್ನು ತಿರಸ್ಕರಿಸಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆಯ ಮೂಲಗಳು ತಿಳಿಸಿವೆ.

Bengaluru: ಮುಖ್ಯರಸ್ತೆಗಳಲ್ಲಿ ಬೀದಿ ವ್ಯಾಪಾರ ನಿಷೇಧಕ್ಕೆ ತೀರ್ಮಾನ: ತುಷಾರ್‌ ಗಿರಿನಾಥ್‌

ಸಿಎಂ ಅಂಕಿತ ಬಾಕಿ: ಕರಡು ಅಧಿಸೂಚನೆಯಲ್ಲಿ ಹೇಳಿದಂತೆ ಕನಿಷ್ಠ ಎರಡು ವರ್ಷ ಗುತ್ತಿಗೆ ಆಧಾರದಡಿ ಕಾರ್ಯ ನಿರ್ವಹಿಸಿದ ಪೌರಕಾರ್ಮಿಕರು ಕಾಯಂಗೊಳಿಸುವ ನೇಮಕಾತಿ ವೇಳೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. 55 ವರ್ಷಕ್ಕೆ ವಯೋಮಿತಿ ಸಡಿಲಗೊಳಿಸಲಾಗಿದೆ. ಕಾಯಂಗೊಳಿಸುವ ವೇಳೆ ಸಾಮಾನ್ಯ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳು ಲಭ್ಯರಿಲ್ಲದ ಪಕ್ಷದಲ್ಲಿ ಪರಿಶಿಷ್ಟಜಾತಿ ಹಾಗೂ ಪರಿಶಿಷ್ಟಪಂಗಡದ ಅಭ್ಯರ್ಥಿಗಳ ನೇಮಕಕ್ಕೆ ಒಂದು ಬಾರಿ ಅವಕಾಶ ನೀಡಲಾಗಿದೆ. ಈ ಕರಡು ನಿಯಮದಲ್ಲಿ ಯಾವುದೇ ಬದಲಾವಣೆ ಮಾಡದೇ ಅಂತಿಮಗೊಳಿಸಲಾಗಿದೆ.

ಅಂತಿಮ ಅಧಿಸೂಚನೆಗೆ ಮುಖ್ಯಮಂತ್ರಿಗಳ ಅಂಕಿತ ಹಾಕುವುದು ಬಾಕಿ ಇದೆ. ಇನ್ನೊಂದು ವಾರದಲ್ಲಿ ಅಂತಿಮ ಅಧಿಸೂಚನೆ ಪ್ರಕಟಿಸಿ ಪೌರಕಾರ್ಮಿಕರ ನೇಮಕಾತಿಗೆ ಅರ್ಜಿ ಆಹ್ವಾನಿಸುವ ಪ್ರಕ್ರಿಯೆ ಆರಂಭಿಸಲಾಗುತ್ತದೆ ಎಂದು ನಗರಾಭಿವೃದ್ಧಿ ಇಲಾಖೆಯ ಮೂಲಗಳು ಸ್ಪಷ್ಟಪಡಿಸಿವೆ.

Bengaluru: ವಸತಿ ಜಾಗದಲ್ಲಿ ಅನಧಿಕೃತ ಅಂಗಡಿಗಳಿದ್ದರೆ ಬಂದ್: ಬಿಬಿಎಂಪಿ

ಪೌರ ಕಾರ್ಮಿಕರ ನೇಮಕಾತಿ ಸಂಖ್ಯೆ
ಸ್ಥಳೀಯ ಸಂಸ್ಥೆ ಪೌರಕಾರ್ಮಿಕರ ಸಂಖ್ಯೆ

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ​ 5,533,
ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ 3,673
ರಾಜ್ಯದ ಇತರೆ 10 ಮಹಾನಗರ ಪಾಲಿಕೆ 1,927
ಒಟ್ಟು 11,133

Follow Us:
Download App:
  • android
  • ios