BBMP Election ಬೆನ್ನಲ್ಲೇ 10 ಕೋಟಿ ವೆಚ್ಚದಲ್ಲಿ ಹೊಸ ಕೌನ್ಸಿಲ್ ಸಭಾಂಗಣ

ಚುನಾವಣೆಗೂ ಮುನ್ನವೇ ಬಿಬಿಎಂಪಿ ಹೊಸ ಕೌನ್ಸಿಲ್ ಹೌಸ್ ನಿರ್ಮಾಣಕ್ಕೆ ಮುಂದಾಗಿದ್ದು, ಹೊಸ ಕಾಯ್ದೆ ಪ್ರಕಾರ 198 ರಿಂದ 243ಕ್ಕೆ ಏರಿದ ಕಾರ್ಪೋರೇಟರ್ಸ್ ಗಳಿಗೆ ತಕ್ಕಂತೆ ಹೊಸ ಕೌನ್ಸಿಲ್ ಹೌಸ್ ನಿರ್ಮಾಣ ಶುರುವಾಗಿದೆ.

bbmp construction of new council house gow

ವರದಿ: ರಕ್ಷಾ ಕಟ್ಟೆಬೆಳಗುಳಿ, ಏಷ್ಯಾನೆಟ್ ಸುವರ್ಣನ್ಯೂಸ್

ಬೆಂಗಳೂರು (ಮೇ.25) :  ಬಿಬಿಎಂಪಿ ಚುನಾವಣೆಗೆ (BBMP Election) ಸುಪ್ರಿಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿರುವ ಹಿನ್ನೆಲೆ ಬಿಬಿಎಂಪಿ (Bruhat Bengaluru Mahanagara Palike) ಕೇಂದ್ರ ಕಚೇರಿಯಲ್ಲಿ ವಾತಾವರಣ ಗರಿಗೆದರಿದೆ. ಹೊಸ ಕಾಯ್ದೆ ಪ್ರಕಾರ 198 ರಿಂದ 243ಕ್ಕೆ ಏರಿದ ಕಾರ್ಪೋರೇಟರ್ಸ್ ಗಳಿಗೆ ತಕ್ಕಂತೆ ಹೊಸ ಕೌನ್ಸಿಲ್ ಹೌಸ್ ನಿರ್ಮಾಣ ಶುರುವಾಗಿದೆ.

ಕೆಂಪೇಗೌಡ ಪೌರ ಸಭಾಂಗಣಕ್ಕೆ ಹೈಟೆಕ್ ಟಚ್ ಕೊಡಲು ಬಿಬಿಎಂಪಿ (BBMP) ಆರಂಭಿಸಿದೆ. ಕಳೆದ ಬಾರಿ 198 ವಾರ್ಡ್ ಇದ್ದ ಬಿಬಿಎಂಪಿ ,ಈ ಬಾರಿ 243 ವಾರ್ಡ್ ಆಗಿ ಹೆಚ್ಚಳವಾಗಿದೆ.  ಕೌನ್ಸಿಲ್ ಕಟ್ಟಡಕ್ಕೆ ಹೊಸ ಬ್ಲೂ ಪ್ರಿಂಟ್  ಸಿದ್ದಪಡಿಸಿರುವ ಪಾಲಿಕೆ, 10 ಕೋಟಿ ರೂ. ವೆಚ್ಚದಲ್ಲಿ ಪಾಲಿಕೆ ಕೌನ್ಸಿಲ್ ಕಟ್ಟಡ ಮರು ವಿನ್ಯಾಸ ಆಗುತ್ತಿದೆ‌.

ಇದುವರೆಗೂ ಪಾಲಿಕೆ ಸದಸ್ಯರು, ನಾಮ ನಿರ್ದೇಶಿತ ಸದಸ್ಯರು, ಶಾಸಕರು, ಸಂಸದರು ಪರಿಷತ್ ಸದಸ್ಯರನ್ನು ಸೇರಿ ಒಟ್ಟು 270 ಮಂದಿ ಕೂರಲು ಕೌನ್ಸಿಲ್ ಸಭಾಂಗಣದಲ್ಲಿ ಅವಕಾಶವಿತ್ತು. ಈಗ 364 ಕುರ್ಚಿಗಳಿಗೆ ಪಾಲಿಕೆ ನೂತನ ಕೌನ್ಸಿಲ್ ರೆಡಿಯಾಗುತ್ತಿದೆ.

ಪ್ರತಿ ಸದಸ್ಯರ ಆಸನದಲ್ಲಿ ಮೈಕ್ ಅಳವಡಿಕೆ ಜೊತೆಗೆ ಇಡೀ ಸಭಾಂಗಣಕ್ಕೆ ಸೌಂಡ್ ಪ್ರೂಫ್ ಅಕೌಸ್ಟಿಕ್ಸ್ ಅಳವಡಿಸಲಾಗುತ್ತಿದೆ. ಕೌನ್ಸಿಲ್ ಹೌಸ್ ನಲ್ಲಿ ಸಿಸಿ ಕ್ಯಾಮಾರ ಕೂಡ ಅಳವಡಿಕೆಯಾಗಲಿದೆ. ಕೌನ್ಸಿಲ್ ಸಭೆ ವೀಕ್ಷಿಸಲು ಸಾರ್ವಜನಿಕರಿಗೆ ಹಾಗೂ ಮಾಧ್ಯಮದವರಿಗೆ ಪ್ರತ್ಯೇಕ ಅಸನದ ವ್ಯವಸ್ಥೆ ಆಗುತ್ತಿದೆ.

ಭವ್ಯ ಕಟ್ಟಡಬೇಕಂತೆ: ಕೌನ್ಸಿಲ್ ಬಿಲ್ಡಿಂಗ್ ಅನ್ನು 243 ಕಾರ್ಪೋರೇಟರ್ಸ್ ಗೆ ತಕ್ಕಂತೆ ನವೀಕರಿಸುತ್ತಿದ್ದೇವೆ. ಇದಕ್ಕೆ ಕೆಲವರ ವಿರೋಧ ಇದೆ. ಅವ್ರು ಇನ್ನು ಭವ್ಯವಾಗಿ ಕಟ್ಟಬೇಕು ಅಂತಿದ್ದಾರೆ.  ಅವ್ರು ಕಟ್ಟಿಕೊಳ್ಳಲಿ, ಸಧ್ಯಕ್ಕೆ ನಾವು 243 ಜನಕ್ಕೆ ಬೇಕಾದ ವ್ಯವಸ್ಥೆ ಅಷ್ಟೇ ರಿನೋವೆಷನ್ ಮಾಡುತ್ತೇವೆ ಎಂದು ಬಿಬಿಎಂಪಿ‌ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

DHARWAD ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ವೇತನ ತಾರತಮ್ಯ

 2 ವರ್ಷಗಳ ಹಿಂದೆಯೇ ಅವಧಿ ಪೂರೈಸಿರುವ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) 8 ವಾರಗಳಲ್ಲಿ ವಾರ್ಡ್‌ ಮರುವಿಂಗಡಣೆ ಮತ್ತು ಇತರೆ ಹಿಂದುಳಿದ ವರ್ಗದ ಒಬಿಸಿ ನಿಗದಿಪಡಿಸಿ ಅಧಿಸೂಚನೆ ಹೊರಡಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಶುಕ್ರವಾರ ಸೂಚಿಸಿದೆ. ಜೊತೆಗೆ ಈ ಅಧಿಸೂಚನೆ ಹೊರಬಿದ್ದ 1 ವಾರದಲ್ಲಿ ಚುನಾವಣಾ ಪ್ರಕ್ರಿಯೆ ಆರಂಭಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸೂಚಿಸಿದೆ. 

ಇದರೊಂದಿಗೆ 2020ರಿಂದ ನೆನೆಗುದಿಗೆ ಬಿದ್ದಿದ್ದ ಚುನಾವಣೆಗೆ ಮುಹೂರ್ತ ಕೂಡಿಬಂದಂತೆ ಆಗಿದೆ. ಬಿಬಿಎಂಪಿ ಚುನಾವಣೆ ನಡೆಸಬೇಕು ಎಂದು ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ ಎ.ಎಂ.ಕಾನ್ವಿಲ್ಕರ್‌ ಮತ್ತು ನ್ಯಾ ಜೆ.ಬಿ.ಪರ್ಡಿವಾಲ ಅವರಿದ್ದ ಪೀಠ ‘ವಾರ್ಡ್‌ ಮರುವಿಂಗಡಣಾ ಪ್ರಕ್ರಿಯೆ ಬಹುತೇಕ ಅಂತಿಮ ಹಂತಕ್ಕೆ ತಲುಪಿದೆ. 8 ವಾರಗಳ ಒಳಗೆ ಈ ಕುರಿತು ಅಧಿಸೂಚನೆ ಹೊರಡಿಸಲಾಗುವುದು ಎಂದು ರಾಜ್ಯ ಸರ್ಕಾರ ದಾಖಲೆ ರೂಪದಲ್ಲಿ ಮಾಹಿತಿ ನೀಡಿದೆ. 

ಹೀಗಾಗಿ ವಾರ್ಡ್‌ಗಳ ಪುನರ್‌ ವಿಂಗಡಣೆಗೆ ಸಂಬಂಧಿಸಿದಂತೆ ಅಗತ್ಯ ಅಧಿಸೂಚನೆಗಳನ್ನು ಹೊರಡಿಸಲು ಮತ್ತು ಮೀಸಲಾತಿಯನ್ನು ನಿಗದಿ ಪಡಿಸಲು 8 ವಾರಗಳ ಕಾಲಾವಕಾಶ ನೀಡಲಾಗಿದೆ. ಅದರೊಳಗೆ ಪೂರ್ಣಗೊಳಿಸಬೇಕು’ ಎಂದು ಸೂಚಿಸಿತು. ಜೊತೆಗೆ ಈ ಎರಡೂ ವಿಷಯಗಳಿಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಬಿದ್ದ 1 ವಾರದಲ್ಲಿ ರಾಜ್ಯ ಚುನಾವಣಾ ಆಯೋಗ, ಚುನಾವಣಾ ಪ್ರಕ್ರಿಯೆ ಆರಂಭಿಸಿ, ಹೊಸದಾಗಿ ರಚನೆಯಾಗುವ ಮಹಾನಗರ ಪಾಲಿಕೆ ಕಾರ್ಯಾರಂಭಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಸೂಚಿಸಿ, ವಿಚಾರಣೆಯನ್ನು ಜು.22ಕ್ಕೆ ಮುಂದೂಡಿತು.

Chamarajanagara ಕೆರೆ ತುಂಬಿದ್ದಕ್ಕೆ ಕ್ರೆಡಿಟ್, ಕಾಂಗ್ರೆಸ್-ಬಿಜೆಪಿ ಕೆಸರೆರಚಾಟ

ಜುಲೈ 22ರೊಳಗೆ ಆಗಬೇಕು: ಎಂಟು ವಾರಗಳ ಗಡುವು ನೀಡಿ ಸುಪ್ರೀಂ ಕೋರ್ಟ್‌ ಜುಲೈ 22ಕ್ಕೆ ವಿಚಾರಣೆ ಮುಂದೂಡಿದೆ. ಎಂಟು ವಾರಗಳ ಗಡುವು ಜುಲೈ 3ನೇ ವಾರಕ್ಕೆ ಮುಕ್ತಾಯಗೊಳ್ಳಲಿದ್ದು, ಸರ್ಕಾರ ಮೀಸಲಾತಿ ನಿಗದಿ ಹಾಗೂ ವಾರ್ಡ್‌ ಪುನರ್‌ವಿಂಗಡಣೆ ಪ್ರಕ್ರಿಯೆ ಮುಗಿಸಬೇಕು. ಬಳಿಕ ಒಂದು ವಾರದಲ್ಲಿ ಚುನಾವಣಾ ಆಯೋಗವು ಚುನಾವಣಾ ಪ್ರಕ್ರಿಯೆ ಶುರು ಮಾಡಬೇಕು ಎಂದು ಆದೇಶದಲ್ಲಿ ತಿಳಿಸಿದೆ. ಹೀಗಾಗಿ ಸರ್ಕಾರ ಚುನಾವಣೆಗೆ ಬಾಕಿ ಇರುವ ಪ್ರಕ್ರಿಯೆ ಪೂರ್ಣಗೊಳಿಸಿ ಚುನಾವಣಾ ಆಯೋಗವು ಸಕಾಲಕ್ಕೆ ಚುನಾವಣಾ ಅಧಿಸೂಚನೆ ಹೊರಡಿಸಿದರೆ ಆಗಸ್ಟ್‌ ಅಥವಾ ಸೆಪ್ಟೆಂಬರ್‌ನಲ್ಲೇ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2 ವರ್ಷದ ಹಗ್ಗ ಜಗ್ಗಾಟ: 2015ರಲ್ಲಿ ಚುನಾಯಿತವಾಗಿದ್ದ ಬಿಬಿಎಂಪಿ ಆಡಳಿತದ ಅವಧಿಯು 2020ರ ಸೆಪ್ಟಂಬರ್‌ಗೆ ಮುಕ್ತಾಯಗೊಂಡಿತ್ತು. ಈ ವೇಳೆಗೆ ನಡೆಯಬೇಕಿದ್ದ ಬಿಬಿಎಂಪಿ ಚುನಾವಣೆಯನ್ನು ವಾರ್ಡ್‌ ಪುನರ್‌ವಿಂಗಡಣೆ, ವಾರ್ಡ್‌ ಸಂಖ್ಯೆ ಹೆಚ್ಚಳದ ಕಾರಣ ನೀಡಿ ಮುಂದೂಡಲಾಗಿತ್ತು. ಬಳಿಕ ಆಡಳಿತಾಧಿಕಾರಿ ಆಡಳಿತ ತರಲಾಗಿತ್ತು. ಸರ್ಕಾರದ ಈ ಕ್ರಮವನ್ನು ವಿರೋಧಿಸಿ ಬಿಬಿಎಂಪಿ ಮಾಜಿ ಸದಸ್ಯರಾದ ಎಂ.ಶಿವರಾಜು ಮತ್ತು ಅಬ್ದುಲ್‌ ವಾಜೀದ್‌ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ 2020ರ ಡಿ.4 ರಂದು ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿತ್ತು.

ನಂತರ ರಾಜ್ಯ ಸರ್ಕಾರ ಹೈಕೋರ್ಟ್‌ ಆದೇಶ ವಿರುದ್ಧ ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು. ಸುಪ್ರಿಂ ಕೋರ್ಟ್‌ ಸರ್ಕಾರದ ಅರ್ಜಿ ವಿಚಾರಣೆ ನಡೆಸಿ 2020 ಡಿ.18 ರಂದು ಮಧ್ಯಂತರ ತಡೆಯಾಜ್ಞೆ ನೀಡಿ ವಿಚಾರಣೆ ಮುಂದುವರೆಸಿತ್ತು. ಈ ನಡುವೆ ರಾಜ್ಯ ಸರ್ಕಾರವು ಸಿ.ವಿ.ರಾಮನ್‌ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌.ರಘು ನೇತೃತ್ವದಲ್ಲಿ ಜಂಟಿ ಸದನ ಸಮಿತಿ ರಚನೆ ಮಾಡಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ ನೂತನ ‘ಬಿಬಿಎಂಪಿ ಅಧಿನಿಯಮ-2020’ ಜಾರಿಗೊಳಿಸಿತ್ತು. ಅಲ್ಲದೇ ಪಾಲಿಕೆ ವಾರ್ಡ್‌ಗಳ ಸಂಖ್ಯೆಯನ್ನು 198 ರಿಂದ 243ಕ್ಕೆ ಏರಿಕೆ ಮಾಡಿ ಅಧಿಸೂಚನೆ ಹೊರಡಿಸಿತ್ತು.

Latest Videos
Follow Us:
Download App:
  • android
  • ios