ಬಿಬಿಎಂಪಿ ವ್ಯಾಪ್ತಿಯಲ್ಲಿನ 141 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಟಿವಿಗಳಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಾಲ್ಕು ವರ್ಷಗಳ ಹಿಂದಿನ ಜಾಹೀರಾತು ಪ್ರದರ್ಶನ ಮಾಡಲಾಗುತ್ತಿದೆ. 

ಬೆಂಗಳೂರು (ಜು.10): ಬಿಬಿಎಂಪಿ ವ್ಯಾಪ್ತಿಯಲ್ಲಿನ 141 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಟಿವಿಗಳಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಾಲ್ಕು ವರ್ಷಗಳ ಹಿಂದಿನ ಜಾಹೀರಾತು ಪ್ರದರ್ಶನ ಮಾಡಲಾಗುತ್ತಿದೆ. ಅದರಲ್ಲಿ ಪಾಲಿಕೆ ಮೇಯರ್‌ ಗಂಗಾಂಬಿಕೆ ಮತ್ತು ಆಯುಕ್ತ ಎನ್‌.ಮಂಜುನಾಥ್‌ ಪ್ರಸಾದ್‌ ಎಂದು ಪ್ರಸಾರ ಮಾಡುವ ಮೂಲಕ ಜನರಿಗೆ ತಪ್ಪು ಮಾಹಿತಿ ನೀಡಲಾಗುತ್ತಿದೆ.

ಆಸ್ಪತ್ರೆಗಳಲ್ಲಿ ಕುಟುಂಬ ಕಲ್ಯಾಣ ಯೋಜನೆ, ಜನನ ನಿಯಂತ್ರಣ, ವಿಷ ಜಂತುಗಳ ಕಡಿತ, ಏಡ್‌್ಸ, ಮಲೇರಿಯಾ ಮತ್ತು ಡೆಂಘಿ ಸೇರಿ ವಿವಿಧ ರೋಗಗಳ ಬಗ್ಗೆ ಜಾಗೃತಿಗಾಗಿ ವಿಡಿಯೋ ಪ್ರಸಾರ ಮಾಡಲಾಗುತ್ತಿದೆ. ಆದರೆ, ಕಳೆದ ಮೂರ್ನಾಲ್ಕು ವರ್ಷದಿಂದ ಕುಟುಂಬ ಕಲ್ಯಾಣ ಯೋಜನೆಯ ಯಾವುದೇ ಹೊಸ ವಿಡಿಯೋಗಳನ್ನು ಸಿದ್ಧಪಡಿಸಿಲ್ಲ. ಕಳೆದ 4 ವರ್ಷಗಳಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಮೇಯರ್‌ ಆಡಳಿತ ಪೂರ್ಣಗೊಂಡು ಆಡಳಿತಾಧಿಕಾರಿ ಆಡಳಿತ ಜಾರಿಯಲ್ಲಿದೆ. ಮತ್ತೊಂದೆಡೆ ಪಾಲಿಕೆಯ ಆಯುಕ್ತರು ಬದಲಾಗಿದ್ದಾರೆ. ಈ ಯಾವುದನ್ನೂ ಬದಲಾವಣೆ ಮಾಡದೇ ಹಳೇ ವಿಡಿಯೋ ಸಂದೇಶವನ್ನು ಇಂದಿಗೂ ಪ್ರಸಾರ ಮಾಡಲಾಗುತ್ತಿದೆ.

ಬೆಂಗಳೂರು: ಆನ್‌ಲೈನ್‌ ಫುಡ್‌ ಆರ್ಡರ್‌ ಮಾಡೋರಿಗೆ ಗುಡ್‌ ನ್ಯೂಸ್‌

ಹೊಸ ವಿಡಿಯೋ ಪ್ರಸಾರ: ಈ ಕುರಿತು ಪ್ರತಿಕ್ರಿಯೆ ನೀಡಿದ ಬಿಬಿಎಂಪಿ ಆರೋಗ್ಯಾಧಿಕಾರಿಗಳು, ‘ಹಲವು ವರ್ಷಗಳಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದ ಯಾವುದೇ ಯೋಜನೆಗಳು ಬದಲಾವಣೆ ಆಗದಿರುವ ಹಿನ್ನೆಲೆಯಲ್ಲಿ ವಿಡಿಯೋ ಬದಲಾವಣೆ ಮಾಡಿರಲಿಲ್ಲ. ಮುಂದಿನ ದಿನಗಳಲ್ಲಿ ಹೊಸ ವಿಡಿಯೋ ಪ್ರಸಾರ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ತಿಳಿಸಿದ್ದಾರೆ.

ಬೀದಿ ವ್ಯಾಪಾರಿಗಳಿಗೆ ಪಿಎಂ- ಸ್ವನಿಧಿ ಯೋಜನೆಯಡಿ ಕಿರುಸಾಲ: ಕೆ.ಆರ್‌.ಮಾರುಕಟ್ಟೆಹಾಗೂ ಸುತ್ತಲಿನ ಪ್ರದೇಶದಲ್ಲಿನ 300 ಬೀದಿ ಬದಿ ವ್ಯಾಪಾರಿಗಳಿಗೆ ಜು.13ರಂದು ಪಿಎಂ-ಸ್ವನಿಧಿ ಯೋಜನೆಯಡಿ ಕಿರುಸಾಲ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಕಲ್ಯಾಣ ವಿಭಾಗದ ವಿಶೇಷ ಆಯುಕ್ತ ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಸ್ವನಿಧಿ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಿ ಅವರಿಗೆ ಗುರುತಿನ ಚೀಟಿ ವಿತರಣೆ, ವ್ಯಾಪಾರ ವಲಯ ಗುರುತಿಸುವುದು, ಕಿರುಸಾಲ ವಿತರಣೆ ಕಾರ್ಯಗಳನ್ನು ಸ್ಥಳೀಯ ಆಡಳಿತ ಸಂಸ್ಥೆಗಳು ನಿರ್ವಹಿಸಬೇಕು ಎಂದು ಸೂಚಿಸಿದೆ. 

ಸಬ್ಸಿಡಿ ಸ್ಥಗಿತ: ಘಟಕದಲ್ಲೇ ಉಳಿದ 4 ಸಾವಿರ ಟನ್‌ ಗೊಬ್ಬರ

ಈ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿನ ಬೀದಿ ಬದಿ ವ್ಯಾಪಾರಿಗಳಿಗೆ ಬ್ಯಾಂಕ್‌ನಿಂದ ಕಿರುಸಾಲ ನೀಡುವ ಕಾರ್ಯಕ್ರಮಗಳನ್ನು ವಲಯವಾರು ಆಯೋಜಿಸಲಾಗುತ್ತಿದೆ. ಹೀಗಾಗಿ, ಜು.13ರಂದು ಕೆ.ಆರ್‌.ಮಾರುಕಟ್ಟೆಯ 300 ಬೀದಿ ಬದಿ ವ್ಯಾಪಾರಿಗಳಿಗೆ ಯೂನಿಯನ್‌ ಬ್ಯಾಂಕ್‌, ಕೆನರಾ ಬ್ಯಾಂಕ್‌ ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್‌ಗಳಿಂದ ಕಿರುಸಾಲ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಕಳೆದ ಸೋಮವಾರ ಗಾಂಧಿನಗರದಲ್ಲಿ 100 ಮಂದಿ ಬೀದಿ ಬದಿ ವ್ಯಾಪಾರಿಗಳಿಗೆ ತಲಾ .10 ಸಾವಿರಗಳಂತೆ ಎಚ್‌ಡಿಎಫ್‌ಸಿ ಬ್ಯಾಂಕ್‌ ವತಿಯಿಂದ ಕಿರುಸಾಲ ವಿತರಣೆ ಮಾಡಲಾಗಿದೆ. ಪ್ರಸ್ತುತ ಪಾಲಿಕೆ ವ್ಯಾಪ್ತಿಯಲ್ಲಿನ ಕೇವಲ 26 ವ್ಯಾಪಾರಿಗಳಿಗೆ ಸಾಲ ವಿತರಿಸಲಾಗಿದೆ. 2022-23ನೇ ಸಾಲಿನ ಅಂತ್ಯಕ್ಕೆ 2 ಲಕ್ಷ ಮಂದಿಗೆ ಕಿರುಸಾಲ ನೀಡುವ ಗುರಿಯನ್ನು ಹೊಂದಲಾಗಿದೆ ಎಂದು ತಿಳಿಸಿದರು.