Bengaluru: ಮಾ.1ರಿಂದ ಬಿಬಿಎಂಪಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ: 7ನೇ ವೇತನ ಆಯೋಗದ ಶಿಫಾರಸು ಜಾರಿಗೆ ಆಗ್ರಹ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಾ.1ರಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ ಎಂದು ಬಿಬಿಎಂಪಿಯ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ತಿಳಿಸಿದೆ. 

BBMP Eployees on Indefinite Strike from March 1st to 7th Pay Commission gvd

ಬೆಂಗಳೂರು (ಫೆ.25): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಾ.1ರಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ ಎಂದು ಬಿಬಿಎಂಪಿಯ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ತಿಳಿಸಿದೆ. ಹೀಗಾಗಿ ಬಿಬಿಎಂಪಿಯಲ್ಲಿ ಏನಾದ್ರು ಕೆಲಸಗಳಿದ್ರೆ ಇನ್ನು 4 ದಿನಗಳಲ್ಲಿ ಮುಗಿಸಿಕೊಂಡುಬಿಡಿ. ಮಾರ್ಚ್ 1 ರಿಂದ ಬಿಬಿಎಂಪಿ ಕಚೇರಿಗಳಲ್ಲಿ ಯಾವುದೇ ಕೆಲಸ ಆಗಲ್ಲ. 

ಬಿಬಿಎಂಪಿ ನೌಕರರ  ಬೇಡಿಕೆಗಳೇನು
* ರಾಜ್ಯ ಸರ್ಕಾರಿ ನೌಕರರು ಸರ್ಕಾರದ ಅಧೀನಕ್ಕೊಳಪಡುವ ನೌಕರರಿಗೆ 6ನೇ ವೇತನ ಆಯೋಗದ ಮಾದರಿಯಂತೆ 7ನೇ ವೇತನ ಆಯೋಗದಿಂದ ಮಧ್ಯಂತರ ವರದಿಯನ್ನು ಆದಷ್ಟು ಬೇಗನೆ ಪಡೆಯಬೇಕು.

*  ಚುನಾವಣೆ ನೀತಿ ಸಂಹಿತೆಗಿಂತ ಮೊದಲು ಶೇ.40ರಷ್ಟು ಫಿಟ್‌ಮೆಂಟ್ ಸೌಲಭ್ಯವನ್ನು ಓದಗಿಸಬೇಕು.

* ಅದು ದಿ.01- 07-2022 ರಿಂದ ಜಾರಿಗೆ ಬರುವಂತೆ ಸರ್ಕಾರಿ ಆದೇಶ ಹೊರಡಿಸುವುದು.

* ಎನ್.ಪಿ.ಎಸ್ ನೌಕರರನ್ನು ಓ.ಪಿ.ಎಸ್ ವ್ಯಾಪ್ತಿಗೆ ತರುವುದು.

* ಈಗಾಗಲೇ ಪಂಜಾಬ್, ರಾಜಸ್ಥಾನ, ಛತ್ತೀಸ್‌ಗಡ, ಜಾರ್ಖಂಡ್, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣೆ ಯೋಜನೆಯನ್ನು ಜಾರಿಗೆ ಬಂದಿದ್ದು, ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಸಹ ಎನ್.ಪಿ.ಎಸ್ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು.

* ಅಧಿಕಾರಿ-ನೌಕರರು ಮತ್ತು ಕುಟುಂಬ ಸದಸ್ಯರಿಗೆ ಆರೋಗ್ಯ ಸೌಲಭ್ಯ, ಚಿಕಿತ್ಸೆ ಪಡೆಯಲು ನಗರದ ಪ್ರಮುಖ ಆಸ್ಪತ್ರೆಗಳಲ್ಲಿ ಅವಕಾಶ ಕಲ್ಪಿಸಬೇಕು

ಫೆ.27ರಂದು ಕುಂದಾನಗರಿಗೆ ಪ್ರಧಾನಿ ಮೋದಿ ಭೇಟಿ: ರೋಡ್ ಶೋಗೆ ಭರ್ಜರಿ ಸಿದ್ಧತೆ

ಇನ್ನು ಮಾರ್ಚ್ 1ರಿಂದ ಬಿಬಿಎಂಪಿ ಅಧಿಕಾರಿ-ನೌಕರರು ಕೆಲಸಕ್ಕೆ ಗೈರು ಹಾಜರಾಗುವ ಮೂಲಕ ಬಿಬಿಎಂಪಿಯ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಸಂಘದ ಅಧ್ಯಕ್ಷ ಅಧ್ಯಕ್ಷ ಎ.ಅಮೃತ್‌ ರಾಜ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೌರಕಾರ್ಮಿಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಬಿಬಿಎಂಪಿಯ 3,673 ಪೌರಕಾರ್ಮಿಕರ ಹುದ್ದೆ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಪಟ್ಟಿಯನ್ನು ಬಿಬಿಎಂಪಿ ಮಂಗಳವಾರ ಪ್ರಕಟಿಸಿ, ಆಕ್ಷೇಪಣೆ ಸಲ್ಲಿಕೆಗೆ ಏಳು ದಿನ ಅವಕಾಶ ನೀಡಲಾಗಿದೆ. ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರ ಪೈಕಿ 3673 ಪೌರಕಾರ್ಮಿಕರನ್ನು ಖಾಯಂಗೊಳಿಸುವುದಕ್ಕೆ ಅರ್ಜಿ ಆಹ್ವಾನಿಸಲಾಗಿತ್ತು. ಬಿಬಿಎಂಪಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಎಲ್ಲ 18 ಸಾವಿರ ಪೌರಕಾರ್ಮಿಕರಿಂದ ಅರ್ಜಿ ಪಡೆಯಲಾಗಿತ್ತು. ಈ ಪೈಕಿ ಅರ್ಹತೆ ಹೊಂದಿರುವ ಪೌರಕಾರ್ಮಿಕರ ತಾತ್ಕಾಲಿಕ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ಬಿಬಿಎಂಪಿ ವೆಬ್‌ ಸೈಟ್‌ ಹಾಗೂ ಕೇಂದ್ರ ಕಚೇರಿಯ ಆವರಣದಲ್ಲಿರುವ ಸಾರ್ವಜನಿಕ ಸಂಪರ್ಕ ವಿಭಾಗದ ಪ್ರಕಟಣೆ ಫಲಕದಲ್ಲಿ ಪ್ರಕಟಿಸಲಾಗಿದೆ.

ತುಮಕೂರಿನಲ್ಲಿ ಇಂಟರ್ ನ್ಯಾಶನಲ್ ತಿಮಿಂಗಿಲ ವಾಂತಿ ದಂಧೆ ಪತ್ತೆ: ಆರೋಪಿ ಅಂದರ್

ತಾತ್ಕಾಲಿಕ ಪಟ್ಟಿಯ ಬಗ್ಗೆ ಆಕ್ಷೇಪಣೆಗಳಿದ್ದರೆ, ಏಳು ದಿನಗಳ ಒಳಗಾಗಿ ಬಿಬಿಎಂಪಿ ಆಡಳಿತ ವಿಭಾಗದ ವಿಶೇಷ ಆಯುಕ್ತರು ಹಾಗೂ ಬಿಬಿಎಂಪಿಯ ಪೌರಕಾರ್ಮಿಕರ ವಿಶೇಷ ನೇಮಕಾತಿಯ ಸಮಿತಿಯ ಸದಸ್ಯ ಕಾರ್ಯದರ್ಶಿ ಆಗಿರುವ ಸಹಾಯಕ ಆಯುಕ್ತರು, 3ನೇ ಮಹಡಿ, ಅನೆಕ್ಸ್‌ ಕಟ್ಟಡ, ಎನ್‌ಆರ್‌ಚೌಕ, ಬೆಂಗಳೂರು ಅವರಿಗೆ ಸಲ್ಲಿಸಬಹುದಾಗಿದೆ. ನಿಗದಿತ ಅವಧಿಯಲ್ಲಿ ಬಂದ ಅಕ್ಷೇಪಣೆಗಳನ್ನು ಮಾತ್ರ ಪರಿಗಣಿಸಲಾಗುವುದು ಎಂದು ನೇಮಕಾತಿ ಮತ್ತು ವಿಚಾರಣೆ ವಿಭಾಗದ ಸಹಾಯಕ ಆಯುಕ್ತರು ತಿಳಿಸಿದ್ದಾರೆ.

Latest Videos
Follow Us:
Download App:
  • android
  • ios