BBMP Property Tax: ಆಸ್ತಿ ತೆರಿಗೆ ಹೆಚ್ಚಳ ನಿರ್ಧಾರ ಕೈಬಿಟ್ಟು ಬೆಂಗಳೂರು ಜನತೆಗೆ ಸಿಹಿ ಸುದ್ದಿ ಕೊಟ್ಟ ಬಿಬಿಎಂಪಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳದ ಕುರಿತು ಇತ್ತೀಚೆಗೆ ಕೆಲ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಆಸ್ತಿ ತೆರಿಗೆ ಹೆಚ್ಚಳದ ಸಂಬಂಧ ಯಾವುದೇ ಪ್ರಸ್ತಾವನೆಯಾಗಲಿ, ಚಿಂತನೆಯಾಗಲಿ ಇರುವುದಿಲ್ಲವೆಂದು ಸ್ಪಷ್ಟೀಕರಿಸಿದೆ.

BBMP has given good news to Bengaluru people will be no increase in property tax sat

ಬೆಂಗಳೂರು (ಜು.03): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳದ ಕುರಿತು ಇತ್ತೀಚೆಗೆ ಕೆಲ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಆಸ್ತಿ ತೆರಿಗೆ ಹೆಚ್ಚಳದ ಸಂಬಂಧ ಯಾವುದೇ ಪ್ರಸ್ತಾವನೆಯಾಗಲಿ, ಚಿಂತನೆಯಾಗಲಿ ಇರುವುದಿಲ್ಲವೆಂದು ಸ್ಪಷ್ಟೀಕರಿಸಿದೆ.

ಹೌದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳವಿಲ್ಲ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸದರಿ ವರ್ಷ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳವಾಗುತ್ತದೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಆದರೆ, ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಆಸ್ತಿಗಳಿಗೆ ತೆರಿಗೆ ಹೆಚ್ಚಳದ ಸಂಬಂಧ ಯಾವುದೇ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ ಮಾಡಿಲ್ಲ. ಜೊತೆಗೆ, ಆಸ್ತಿ ಹೆಚ್ಚಳ ಮಾಡಿವ ಯಾವುದೇ ಚಿಂತನೆಯನ್ನೂ ಮಾಡಿಲ್ಲವೆಂದು ಸ್ಪಷ್ಟೀಕರಣ ನೀಡಿದೆ.

ಪ್ಲಾಸ್ಟಿಕ್ ಚೀಲ ಮಾರಾಟ ಮಾಡಬೇಡಿ ಎನ್ನುತ್ತಲೇ ಬೀದಿಗೆ ಬಂದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳ ವಿಚಾರವಾಗಿ ಯಾವುದೇ ಪ್ರಸ್ತಾವನೆ ಇರುವುದಿಲ್ಲ. ಈ ರೀತಿಯ ಊಹಾ ಪೋಹಗಳಿಗೆ ಯಾರೂ ಕಿವಿಗೊಡಬಾರದೆಂದು ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ನಾಗರೀಕರಲ್ಲಿ ಮನವಿ ಮಾಡಿರುತ್ತಾರೆ.

ಮಾರ್ಚ್‌ ತಿಂಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಆಸ್ತಿ ತೆರಿಗೆ ಹೆಚ್ಚಳದ ವಿಡಿಯೋ ವೈರಲ್: ಬಿಬಿಎಂಪಿ ವತಿಯಿಂದ ಆಸ್ತಿ ತೆರಿಗೆ ಹೆಚ್ಚಳ ಮಾಡಲಾಗುತ್ತದೆ ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇನ್ಸ್‌ಸ್ಟಾಗ್ರಾಮ್‌ನ Index.daily ಎಂಬ ಪೇಜ್‌ನಲ್ಲಿ ಅನುರಾಗ್ ಸಿಂಗ್ ಎಂಬುವವರು 13ನೇ ಮಾರ್ಚ್ 2024ರಂದು ಕರ್ನಾಟಕದಲ್ಲಿ ಬಾರಿ ತೆರಿಗೆ ಹೆಚ್ಚಳವಾಗಲಿದೆ ಎಂಬ ವೀಡಿಯೋ ಒಂದನ್ನು ಹರಿದುಬಿಟ್ಟಿದ್ದಾರೆ. ಸದರಿ ವಿಡಿಯೋದಲ್ಲಿ ಬೆಂಗಳೂರು ಮಹಾನಗರ ಪಾಲಿಕೆಯು ಬಾಡಿಗೆ ಮನೆಗಳ ಮೇಲಿನ ಆಸ್ತಿ ತೆರಿಗೆಯನ್ನು 2 ಪಟ್ಟು ಮತ್ತು ವಾಣಿಜ್ಯ ಸಂಸ್ಥೆಗಳಿಗೆ 3-5 ಪಟ್ಟು ಹೆಚ್ಚಿಸುವುದು ಸೇರಿದಂತೆ ಇನ್ನಿತರೆ ವಿಷಗಳ ಕುರಿತು ಮಾತನಾಡಿದ್ದರು. ಬೆಲೆ ಏರಿಕೆ ಹಾಗೂ ಬರಗಾಲದಿಂದ ನೀರಿಗೆ ಆಹಾಕಾರ ಎದುರಿಸುತ್ತಿದ್ದ ಬೆಂಗಳೂರು ಜನತೆಗೆ ತಲೆ ಬಿಸಿ ಉಂಟಾಗಿತ್ತು. ಈ ವೇಳೆಯೂ ಬಿಬಿಎಂಪಿ ವತಿಯಿಂದ ಆಸ್ತಿ ತೆರಿಗೆ ಹೆಚ್ಚಳ ಮಾಡುವುದಿಲ್ಲ ಎಂದು ಸ್ಪಷ್ಟೀಕರಣ ನೀಡಲಾಗಿತ್ತು.

Latest Videos
Follow Us:
Download App:
  • android
  • ios