ದೇಶದಲ್ಲೇ ಮೊದಲ ಬಾರಿ ಆನ್‌ಲೈನ್‌ನಲ್ಲಿ BBMP ಬಜೆಟ್
ದೇಶದಲ್ಲಿಯೇ ಮೊಟ್ಟಮೊದಲ ಬಾರಿಗೆ ಸ್ಥಳೀಯ ಸಂಸ್ಥೆಯೊಂದು ತನ್ನ ಆಯವ್ಯಯವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಮಂಡನೆ ಮಾಡಿರುವ ಹೆಗ್ಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪಾತ್ರವಾಗುತ್ತಿದೆ.
ಬೆಂಗಳೂರು(ಏ.17): ದೇಶದಲ್ಲಿಯೇ ಮೊಟ್ಟಮೊದಲ ಬಾರಿಗೆ ಸ್ಥಳೀಯ ಸಂಸ್ಥೆಯೊಂದು ತನ್ನ ಆಯವ್ಯಯವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಮಂಡನೆ ಮಾಡಿರುವ ಹೆಗ್ಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪಾತ್ರವಾಗುತ್ತಿದೆ.
2020-21ನೇ ಸಾಲಿನ ಬಿಬಿಎಂಪಿ ಆಯವ್ಯಯ ಮಂಡನೆ ಬೇಕಾದ ಎಲ್ಲ ಸಿದ್ಧತೆ ಪಾಲಿಕೆಯ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಮಾಡಿಕೊಂಡರಾದರೂ ಕೊರೋನಾ ಭೀತಿಯಿಂದ ಮಾಚ್‌ರ್ ಅಂತ್ಯದೊಳಗೆ 2020-21ನೇ ಸಾಲಿನ ಆಯವ್ಯಯ ಮಂಡಿಸುವುದಕ್ಕೆ ಸಾಧ್ಯವಾಗಿರಲಿಲ್ಲ. ಹೀಗಾಗಿ, ಬಿಬಿಎಂಪಿ ಮೇಯರ್ ಹಾಗೂ ಆಯುಕ್ತರು ಬಜೆಟ್ ಮಂಡನೆ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದ ಸಲಹೆ ಕೋರಿ ಪತ್ರ ಬರೆದಿದ್ದರು. ಸರ್ಕಾರ ಸಹ ಇದೀಗ ಬಜೆಟ್ ಮಂಡನೆಗೆ ಷರತ್ತು ಬದ್ಧ ಒಪ್ಪಿಗೆ ಸೂಚಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಬಜೆಟ್ ಮಂಡನೆಗೆ ಅವಕಾಶ ನೀಡಿದೆ.
ಇಂದು ನಿಖಿಲ್ - ರೇವತಿ ಸರಳ ವಿವಾಹ: ಮುಖ್ಯದ್ವಾರದಲ್ಲೇ ಥರ್ಮಲ್ ಸ್ಕ್ರೀನಿಂಗ್
ಇದೇ ಏ.20ರಂದು ಬೆಳಗ್ಗೆ 11ಕ್ಕೆ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಲ್.ಶ್ರೀನಿವಾಸ್ ಅವರು ಬಿಬಿಎಂಪಿ ಕೇಂದ್ರ ಕಚೇರಿಯ ಕೆಂಪೇಗೌಡ ಪೌರಸಭಾಂಗಣದಲ್ಲಿ ಬಜೆಟ್ ಮಂಡನೆ ಮಾಡಲಿದ್ದಾರೆ. ಅದನ್ನು ವೆಬ್ ಕಾಸ್ಟಿಂಗ್ ಮಾಡಲಾಗುತ್ತದೆ. ಎಂಟು ವಲಯದಲ್ಲಿ ಆಯಾ ವಲಯದ ವಾಪ್ತಿಗೆ ಬರುವ ವಾರ್ಡ್ ಸದಸ್ಯರು, ಅಧಿಕಾರಿಗಳು ಕುಳಿತುಕೊಂಡು ಬಜೆಟ್ ಮಂಡನೆ ವೀಕ್ಷಿಸಬಹುದಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಬಿಬಿಎಂಪಿ ಆಯುಕ್ತ ಬಿ.ಎಚ್.ಅನಿಲ್‌ಕುಮಾರ್, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಉದ್ದೇಶದಿಂದ ವಲಯ ಕಚೇರಿಯಲ್ಲಿ ಬಜೆಟ್ ಮಂಡನೆ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಕೇಂದ್ರ ಕಚೇರಿಯ ಕೌನ್ಸಿಲ್ ಸಭಾಂಗಣದಲ್ಲಿ ಮೇಯರ್, ಉಪ ಮೇಯರ್, ಸಚಿವರು, ಶಾಸಕರು, ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಸದಸ್ಯರು ಸೇರಿದಂತೆ ಪ್ರಮುಖ ನಾಯಕರು ಮಾತ್ರ ಹಾಜರಿರುತ್ತಾರೆ ಎಂದು ತಿಳಿಸಿದರು.
ಬೈಕಲ್ಲಿ 430 ಕಿ.ಮೀ. ಹೋಗಿ ಕ್ಯಾನ್ಸರ್ ಔಷಧ ಕೊಟ್ಟು ಮಾನವೀಯತೆ ಮೆರೆದ ಪೊಲೀಸ್..
ಇನ್ನು ದೇಶದಲ್ಲಿ ಈ ಹಿಂದೆ ವಿಡಿಯೋ ಕಾನ್ಫರೆನ್ಸ್ ಮೂಲಕ ಆಯವ್ಯಯ ಮಂಡನೆ ಮಾಡುತ್ತಿರುವುದು ಗಮನಕ್ಕೆ ಬಂದಿಲ್ಲ. ಬಿಬಿಎಂಪಿಯು ವಿಡಿಯೋ ಕಾನ್ಫರೆನ್ಸ್ ಮೂಲಕ ಬಜೆಟ್ ಮಂಡನೆ ಮಾಡಿದ ಹೆಗ್ಗಳಿಕೆಗೆ ಪಾತ್ರವಾಗಲಿದೆ ಎಂದು ತಿಳಿಸಿದರು.
ಚರ್ಚೆಗೆ ಅವಕಾಶವಿಲ್ಲ
ಲಾಕ್‌ಡೌನ್ ಇರುವುದರಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಏ.20ರ ಸೋಮವಾರ ಮಂಡನೆಯಾಗುತ್ತಿರುವ ಬಿಬಿಎಂಪಿ ಬಜೆಟನ್ನು ಈ ಬಾರಿ ಚರ್ಚೆಗೆ ಅವಕಾಶ ನೀಡದೇ ಕೌನ್ಸಿಲ್ ಅನುಮೋದನೆ ಪಡೆದು ಸರ್ಕಾರ ಒಪ್ಪಿಗೆ ಕಳಿಸುವುದಕ್ಕೆ ಆಡಳಿತರೂಢ ಬಿಜೆಪಿ ಪಕ್ಷ ತೀರ್ಮಾನಿಸಿದೆ.
ಲಾಕ್‌ಡೌನ್: ಬದುಕು ಕಲಿಸಿದ ಹಸಿವು, ಪೇದೆಯಿಂದ ನಿರ್ಗತಿಕರಿಗೆ ಅನ್ನದಾನ..!
ವಿಡಿಯೋ ಕಾನ್ಫರೆನ್ಸ್ ಮೂಲಕ ಬಜೆಟ್ ಮಂಡಿಸಿದ ಮೊದಲಿಗ ಆಗುತ್ತಿರುವುದಕ್ಕೆ ಸಂತೋಷವಿದೆ. ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಅನುಮತಿ ಪಡೆದುಕೊಂಡು ಬರುತ್ತೇನೆ. ಜನಸ್ನೇಹಿ ಬಜೆಟ್ ಮಂಡನೆ ಮಾಡುತ್ತೇನೆ ಎಂದು ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಲ್.ಶ್ರೀನಿವಾಸ್ ತಿಳಿಸಿದ್ದಾರೆ.