ಬೆಂಗಳೂರು ಮಳೆ ಅವಾಂತರ ತಡೆಯಲು ಸಿದ್ಧಗೊಂಡ ಬಿಬಿಂಎಪಿ

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮಳೆಗಾಲದ ವೇಳೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ವಲಯ ಅಧಿಕಾರಿಗಳಿಗೆ ಸೂಚನೆ ನೀಡಿದರು. 

BBMP prepared to prevent Bengaluru rain disaster says Tushar Giri Nath sat

ಬೆಂಗಳೂರು (ಮೇ 07): ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮಳೆಗಾಲದ ವೇಳೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ವಲಯ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಸಂಬಂಧ ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿ, ಆಯಾ ವಲಯ ವ್ಯಾಪ್ತಿಯ ಅಧಿಕಾರಿಗಳು ಮಳೆಗಾಲದ ವೇಳೆ ಎಲ್ಲಿಯೂ ಸಮಸ್ಯೆಯಾಗದಂತೆ ಕ್ರಮವಹಿಸಬೇಕು. ಮೆಟ್ರೋ ಕಾಮಗಾರಿ ನಡೆಯುವ ಸ್ಥಳಗಳಿಗೆ ಭೇಟಿ ನೀಡಿ ಮಳೆ ನೀರಿನ ಸರಾಗ ಹರಿವಿಗೆ ಸಮಸ್ಯೆ ಆಗಲಿದೆಯೇ ಎಂಬುದನ್ನು ಪರಿಶೀಲಿಸಬೇಕು. ಏನಾದರು ಸಮಸ್ಯೆ ಇದ್ದಲ್ಲಿ ಮೆಟ್ರೋ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಿ ಸಮಸ್ಯೆಯನ್ನು ಬಗೆಹರಿಸಬೇಕೆಂದು ತಿಳಿಸಿದರು. 

ರಾಜಕಾಲುವೆ ಹಾಗೂ ರಸ್ತೆ ಬದಿ ಚರಂಡಿಗಳಲ್ಲಿ ಹೂಳನ್ನು ತ್ವರಿತಗತಿಯಲ್ಲಿ ತೆರವುಗೊಳಿಸಬೇಕು. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮವಹಿಸಬೇಕು. ನಗರದಲ್ಲಿ ಜೋರು ಮಳೆಯಾಗುವ ಸಮಯದಲ್ಲಿ ರಸ್ತೆಗಳ ಮೇಲೆ ಹೆಚ್ಚು ನೀರು ನಿಂತು ವಾಹನಗಳ ಸಂಚಾರಕ್ಕೆ ಹೆಚ್ಚು ಸಮಸ್ಯೆಯಾಗುತ್ತದೆ. ಈ ನಿಟ್ಟಿನಲ್ಲಿ ರಸ್ತೆ ಮೇಲೆ ಬೀಳುವ ನೀರು ಚರಂಡಿಗಳಿಗೆ ಸರಾಗವಾಗಿ ಹರಿದು ಹೋಗುವ ನಿಟ್ಟಿನಲ್ಲಿ ಶೋಲ್ಡರ್ ಡ್ರೈನ್ ಗಳ ಬಳಿ ಸ್ವಚ್ಚತೆ ಕಾಪಾಡಲು ಸೂಚಿಸಿದರು. 

ರಾಜ್ಯದಲ್ಲಿ ಬಿಸಿಗಾಳಿ ಜೊತೆಗೆ ಆಲಿಕಲ್ಲು ಮಳೆಯಾಗುವ ಮುನ್ಸೂಚನೆ ಕೊಟ್ಟ ಹವಾಮಾನ ಇಲಾಖೆ!
 
ನಿಯಂತ್ರಣ ಕೊಠಡಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು:
ಪಾಲಿಕೆ 8 ವಲಯಗಳು ಹಾಗೂ ಕೇಂದ್ರ ಕಛೇರಿ ಸೇರಿದಂತೆ 9 ಶಾಶ್ವತ ನಿಯಂತ್ರಣ ಕೊಠಡಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಜೊತೆಗೆ ಮಳೆಗಾಲದ ವೇಳೆ ತಾತ್ಕಾಲಿಕವಾಗಿ 63 ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಿಕೊಂಡು, ಅಗತ್ಯವಿರುವ ಪಂಪ್‌ಸೆಟ್, ಸಲಕರಣೆಗಳು, ಗ್ಯಾಂಗ್ಸ್ ಗಳನ್ನು ಸನ್ನದ್ಧ್ದವಾಗಿಟ್ಟುಕೊಳ್ಳಬೇಕು. ನಗರದಲ್ಲಿ ಮಳೆಗಾಲದ ವೇಳೆ ನಾಗರೀಕರ ಸಮಸ್ಯೆಗೆ ಕೂಡಲೆ ಸ್ಪಂದಿಸುವ ನಿಟ್ಟಿನಲ್ಲಿ ಪಾಲಿಕೆ, ಬೆಸ್ಕಾಂ, ಜಲಮಂಡಳಿ ಸೇರಿದಂತೆ ಇನ್ನಿತರೆ ಇಲಾಖೆಗಳನ್ನು ಒಳಗೊಂಡಂತೆ ಆಯಾ ವಲಯದ ಉಪ ವಿಭಾಗವಾರು ವ್ಯಾಟ್ಸಪ್ ಗ್ರೂಪ್‌ಗಳನ್ನು ರಚಿಸಿಕೊಂಡು, ಅದರ ಮೂಲಕ ಬಂದಂತರ ದೂರು, ಸಮಸ್ಯೆಗಳನ್ನು ಕೂಡಲೆ ಇತ್ಯರ್ಥಪಡಿಸಬೇಕೆಂದು ಸೂಚನೆ ನೀಡಿದರು.

ಮರ ಕಟಾವು ತಂಡಗಳು ಸದಾ ಸನ್ನದ್ಧರಾಗಿರಬೇಕು:
ನಗರದಲ್ಲಿ ಮಳೆಗಾಲದ ವೇಳೆ ಬಿದ್ದಂತಹ ಮರಗಳು ಹಾಗೂ ರೆಂಬೆ/ಕೊಂಬೆಗಳನ್ನು ತ್ವರಿತಗತಿಯಲ್ಲಿ ತೆರವುಗೊಳಿಸುವ ಸಲುವಾಗಿ 28 ತಂಡಗನ್ನು ಕಾರ್ಯನಿರ್ವಹಿಸುತ್ತಿವೆ. ಅದರ ಜೊತೆಗೆ ಹೆಚ್ಚುವರಿಯಾಗಿ 6 ತಂಡಗಳನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ. ಅದಲ್ಲದೇ ರಸ್ತೆಗಳಲ್ಲಿ ಬಿದ್ದಂತಹ ಮರಗಳನ್ನು ಕೂಡಲೆ ತೆರವುಗೊಳಿಸಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ದೃಷ್ಠಿಯಿಂದ ವಲಯವಾರು 8 ದ್ವಿಚಕ್ರ ವಾಹನಗಳ ತಂಡಗಳನ್ನು ನಿಯೋಜನೆ ಮಾಡಿಕೊಳ್ಳಲಾಗುತ್ತದೆ. ಮರ, ರೆಂಬೆ/ಕೊಂಬೆ ತೆರವು ಕಾರ್ಯಾಚರಣೆಗಾಗಿ 8 ಟ್ರ್ಯಾಕ್ಟರ್, 2 ಜೆಸಿಬಿ, 2 ಕ್ರೇನ್, ಅವಶ್ಯಕ ಸಲಕರಣೆಗಳು ಹಾಗೂ ಅಗತ್ಯ ಸಿಬ್ಬಂದಿಯನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ. ಬಿದ್ದಂತಹ ಮರ, ರೆಂಬೆ-ಕೊಂಬೆಗಳ ವಿಲೇವಾರಿಗಾಗಿ ಆಯಾ ವಲಯಗಳಲ್ಲಿ ಡಂಪಿಂಗ್ ಯಾರ್ಡ್ಗಳ ವ್ಯವಸ್ಥೆ ಮಾಡಿಕೊಳ್ಳಲು ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ಸೂಚನೆ ನೀಡಿದರು.

ಬೆಂಗ್ಳೂರಲ್ಲಿ ಭಾರೀ ಗಾಳಿ ಸಹಿತ ಆಲಿಕಲ್ಲು ಮಳೆ: ಧರೆಗುರುಳಿದ ಮರಗಳು, ವಾಹನ ಸಂಚಾರ ಆಸ್ತವ್ಯಸ್ತ

ಅಗ್ನಿಶಾಮಕ/ಎಸ್.ಡಿ.ಆರ್.ಎಫ್ ಜೊತೆ ಸಂಪರ್ಕ: ಮಳೆಗಾಲದ ವೇಳೆ ಪಾಲಿಕೆಯ ಜೊತೆ ಅಗ್ನಿ ಶಾಮಕ ಠಾಣೆ ಹಾಗೂ ಎಸ್.ಡಿ.ಆರ್.ಎಫ್ ಇಲಾಖೆಗಳು ಕೈಜೋಡಿಸಲಿದ್ದಾರೆ. ಈ ಸಂಬಂಧ ಆಯಾ ವಲಯ ಆಯುಕ್ತರು ಅಗ್ನಿ ಶಾಮಕ ಠಾಣೆ ಸ್ಥಳಗಳಿಗೆ ಭೇಟಿ ನೀಡಿ ಸದರಿ ಇಲಾಖೆಗಳ ಜೊತೆ ನಿತ್ಯ ಸಂಪರ್ಕದಲ್ಲಿರಬೇಕು. ತುರ್ತು ಪರಿಸ್ಥಿತಿಯ ವೇಳೆ ಸದರಿ ಇಲಾಖೆಗಳ ಸಹಾಯ ಪಡೆದು ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕೆಂದು ತಿಳಿಸಿದರು.

Latest Videos
Follow Us:
Download App:
  • android
  • ios