2 ಸಾವಿರ ನರ್ಸ್‌ಗಳ ನೇಮಕಕ್ಕೆ ಸರ್ಕಾರಕ್ಕೆ ಬಿಬಿಎಂಪಿ ಪ್ರಸ್ತಾವನೆ
ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ರಾಷ್ಟ್ರೀಯ ಆರೋಗ್ಯಯೋಜನೆಯಡಿ (ಎನ್‌ಎಚ್‌ಎಂ) ಪ್ರತಿ ಐದು ಸಾವಿರ ಜನರಿಗೆ ಒಬ್ಬರಂತೆ ಬಿಬಿಎಂಪಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸುಮಾರು ಎರಡು ಸಾವಿರ ನರ್ಸ್ ನೇಮಕಕ್ಕೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಪಾಲಿಕೆ ಮುಂದಾಗಿದೆ.
ಬೆಂಗಳೂರು(ಜು.31): ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ರಾಷ್ಟ್ರೀಯ ಆರೋಗ್ಯಯೋಜನೆಯಡಿ (ಎನ್‌ಎಚ್‌ಎಂ) ಪ್ರತಿ ಐದು ಸಾವಿರ ಜನರಿಗೆ ಒಬ್ಬರಂತೆ ಬಿಬಿಎಂಪಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸುಮಾರು ಎರಡು ಸಾವಿರ ನರ್ಸ್ ನೇಮಕಕ್ಕೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಪಾಲಿಕೆ ಮುಂದಾಗಿದೆ.
ಕೇಂದ್ರ ಸರ್ಕಾರದ ರಾಷ್ಟ್ರೀಯ ಆರೋಗ್ಯ ಯೋಜನೆಯಡಿಯಲ್ಲಿ ಪ್ರತಿ ಐದು ಸಾವಿರ ಜನರಿಗೆ ಬಿಎಸ್ಸಿ ನರ್ಸಿಂಗ್ ಮುಗಿಸಿರುವ ಸಮುದಾಯ ಆರೋಗ್ಯ ಕಾರ್ಯಕರ್ತರನ್ನು ನೇಮಿಸುವುದಕ್ಕೆ ಅವಕಾಶವಿದೆ. ಹೀಗಾಗಿ, ಬಿಬಿಎಂಪಿಯು ಸುಮಾರು ಎರಡು ಸಾವಿರ ನರ್ಸ್‌ಗಳನ್ನು ಕಾಯಂ ಆಗಿ ನೇಮಿಸಿಕೊಳ್ಳುವ ಕುರಿತು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಮುಂದಾಗಿದೆ.
ಮನೆಯಲ್ಲಿ ಹೀಗೆ ಮಾಡಿದ್ರೆ ದರಿದ್ರ ಲಕ್ಷ್ಮಿ ವಕ್ಕರಿಸುವುದು ಖಂಡಿತ!
ಇಂಡಿಯನ್ ನರ್ಸಿಂಗ್ ಕೌನ್ಸಿಲ್ ಮಾಹಿತಿ ಪ್ರಕಾರ ರಾಜ್ಯದಲ್ಲಿ ಬಿಎಸ್ಸಿ ನಂತರ ನರ್ಸಿಂಗ್ ಕೋರ್ಸ್ ಮುಗಿಸಿ ಪರವಾನಗಿ ಪಡೆದಿರುವ ಸುಮಾರು 11 ಸಾವಿರ ಯುವಕ- ಯುವತಿಯರು ಇದ್ದಾರೆ. ಈ ಪೈಕಿ ಸುಮಾರು ಐದು ಸಾವಿರ ಮಂದಿ ಬೆಂಗಳೂರಿನಲ್ಲಿದ್ದಾರೆ. ಕೊರೋನಾ ಸೋಂಕಿನ ತುರ್ತು ಪರಿಸ್ಥಿತಿಯ ಈ ಸಂದರ್ಭದಲ್ಲಿ ತ್ವರಿತವಾಗಿ ನೇಮಕ ಮಾಡಿಕೊಂಡರೆ ಅನುಕೂಲವಾಗಲಿದೆ ಎಂಬ ಕಾರಣಕ್ಕೆ ಬಿಬಿಎಂಪಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಕ್ಕೆ ಸಿದ್ಧತೆ ನಡೆಸಿದೆ.
ಬೆಂಗಳೂರು: ಕೊರೋನಾ ನಡುವೆ ವರಮಹಾಲಕ್ಷ್ಮಿ ಹಬ್ಬ ಸಡಗರ
ಈ ರೀತಿ ನೇಮಿಸಿಕೊಳ್ಳುವ ನರ್ಸ್‌ಗಳಿಗೆ ಕೇಂದ್ರ ಸರ್ಕಾರದ ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ತಿಂಗಳಿಗೆ 10 ಸಾವಿರ ಗೌರವ ಧನ ನೀಡಲಾಗುತ್ತಿದೆ. ಕೇವಲ ಹತ್ತು ಸಾವಿರ ಗೌರವ ಧನಕ್ಕೆ ನರ್ಸ್‌ಗಳು ಕೆಲಸಕ್ಕೆ ಬರುವ ಅನುಮಾನ ಇರುವುದರಿಂದ ಸರ್ಕಾರ ಮತ್ತು ಬಿಬಿಎಂಪಿ ಇನ್ನಷ್ಟುನೆರವು ನೀಡಿ ನೇಮಿಸಿಕೊಳ್ಳಬಹುದಾಗಿದೆ. ಈ ಕುರಿತು ವಿವರವಾದ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ ಪ್ರಸಾದ್ ‘ಕನ್ನಡಪ್ರಭ’ಕ್ಕೆ ಮಾಹಿತಿ ನೀಡಿದರು.