Asianet Suvarna News Asianet Suvarna News

ಬೆಂಗಳೂರಲ್ಲಿ ರಾಜಕಾಲುವೆ ಒತ್ತುವರಿ ಮಾಡಿದವರಿಗೆ ಬಿಗ್ ಶಾಕ್ !

ಬೆಂಗಳೂರಲ್ಲಿ ರಾಜಕಾಲುವೆ ಒತ್ತುವರಿದಾರರ ವಿರುದ್ದ ಬಿಬಿಎಂಪಿ ಅಧಿಕಾರಿಗಳು ಸಮರ ಸಾರಿದ್ದು, ರಾಜಕಾಲುವೆ ಒತ್ತುವರಿ ಮಾಡಿ ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್ ಮನೆ ನಿರ್ಮಾಣ ಮಾಡಿದವರಿಗೆ ಪಾಲಿಕೆ ಶಾಕ್ ಕೊಟ್ಟಿದೆ.

BBMP Starts Demolition Who encroachment of rajakaluve in Bengaluru rbj
Author
First Published Sep 3, 2022, 2:56 PM IST

ಬೆಂಗಳೂರು, (ಸೆಪ್ಟೆಂಬರ್.03):  ಮಳೆಯಿಂದ ಉಂಟಾದ ಪ್ರವಾಹದಿಂದ ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ(BBMP) ಕೊನೆಗೂ ಎಚ್ಚೆತ್ತುಕೊಂಡಿದೆ. ಕಳೆದ ನಾಲ್ಕೈದು ವರ್ಷದಿಂದ ಸ್ಥಗಿತಗೊಂಡಿದ್ದ ರಾಜಕಾಲುವೆ ತೆರವು ಕಾರ್ಯ ಮತ್ತೆ ಆರಂಭವಾಗಿದೆ. ಇಂದಿನಿಂದ ಬೆಂಗಳೂರಿನಲ್ಲಿ  ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ.

ರಾಜಕಾಲುವೆ ಒತ್ತುವರಿಯಿಂದಾಗಿ ನಗರದೆಲ್ಲೆಡೆ ಜಲಪ್ರಳಯವಾಗಿತ್ತು. ಹೀಗಾಗಿ ಬಿಬಿಎಂಪಿ 714 ಕಟ್ಟಡಗಳ ತೆರವು ಕಾರ್ಯಚರಣೆಗಿಳಿದಿದೆ. ವರ್ತೂರು ಕೋಡಿ ಹಾಗೂ ದೊಡ್ಡಬೊಮ್ಮಸಂದ್ರದ ಬಳಿ ಜೆಸಿಬಿಗಳ ಘರ್ಜಿಸುತ್ತಿವೆ.

ಮೊನ್ನೆ ಸಿಟಿ ರೌಂಡ್ಸ್ ವೇಳೆ ರಾಜಕಾಲುವೆ ಒತ್ತುವರಿ ತೆರವು ಕಾರ್ಯ ಮಾಡದ ಅಧಿಕಾರಿಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತರಾಟೆಗೆ ತೆಗೆದುಕೊಂಡಿದ್ದರು. ಇದರ ಬೆನ್ನಲ್ಲೆ ಒತ್ತುವರಿದಾರರ ವಿರುದ್ದ ಬಿಬಿಎಂಪಿ ಅಧಿಕಾರಿಗಳು ಸಮರ ಸಾರಿದ್ದು, ರಾಜಕಾಲುವೆ ಒತ್ತುವರಿ ಮಾಡಿ ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್ ಮನೆ ನಿರ್ಮಾಣ ಮಾಡಿದವರಿಗೆ ಪಾಲಿಕೆ ಶಾಕ್ ಕೊಟ್ಟಿದೆ.

ಬೆಂಗಳೂರು ರಾಜಕಾಲುವೆ ನಿರ್ಮಾಣಕ್ಕೆ 1500 ಕೋಟಿ ಬಿಡುಗಡೆ: ಸಿಎಂ ಬೊಮ್ಮಾಯಿ

ಪಾಲಿಕೆ ವ್ಯಾಪ್ತಿಯಲ್ಲಿ 840 ಕಿ.ಮೀ ಉದ್ದದ ರಾಜಕಾಲುವೆಗಳಿಗೆ. ಆ ಪೈಕಿ ಸುಮಾರು 400 ಕಿ.ಮೀ ಉದ್ದದ ರಾಜಕಾಲುವೆ ದುರಸ್ತಿಯಾಗಿದ್ದು ಅಭಿವೃದ್ಧಿ ಕಾಮಗಾರಿಯೂ ಪೂರ್ಣಗೊಂಡಿದೆ. ಇದೀಗ ಎರಡು ಹಂತದಲ್ಲಿ 171.50 ಕಿ.ಮೀ ಉದ್ದದ ರಾಜಕಾಲುವೆ ಅಭಿವೃದ್ಧಿ ಕೈಗೆತ್ತಿಕೊಳ್ಳಲಾಗುತ್ತಿದೆ. ಪ್ರಾಥಮಿಕ ಹಂತದಲ್ಲಿ 481.88 ಕೋಟಿ ರು.ಗಳ ವೆಚ್ಚದಲ್ಲಿ 47.49 ಕಿ.ಮೀ ಮತ್ತು ದ್ವಿತೀಯ ಹಂತದಲ್ಲಿ 1,005.12 ಕೋಟಿ ರು.ವೆಚ್ಚದಲ್ಲಿ 123.5 ಕಿ.ಮೀ ಉದ್ದದ ರಾಜಕಾಲುವೆಯನ್ನು ಅಭಿವೃದ್ಧಿಪಡಿಸಲು ಕ್ರಿಯಾ ಯೋಜನೆ ರೂಪಿಸಲಾಗಿದೆ. ಈಗಾಗಲೇ ಕ್ರಿಯಾ ಯೋಜನೆಗೆ ತಾಂತ್ರಿಕ ಸಲಹಾ ಸಮಿತಿಯಿಂದ ಅನುಮತಿ ಪಡೆಯಲಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ 696 ಕಡೆಗಳಲ್ಲಿ ರಾಜಕಾಲುವೆ ಒತ್ತುವರಿ ಬಾಕಿ ಇದೆ. ನಗರದಲ್ಲಿ ಉಂಟಾಗುವ ಪ್ರವಾಹ ನಿಯಂತ್ರಣ ಮಾಡುವ ಉದ್ದೇಶದಿಂದ 2016ರಲ್ಲಿ ಕಂದಾಯ ಇಲಾಖೆಯಿಂದ ಸಮೀಕ್ಷೆ ಮಾಡಿ 2,626 ಕಡೆ ರಾಜಕಾಲುವೆ ಒತ್ತುವರಿ ಪ್ರಕರಣವನ್ನು ಪತ್ತೆ ಮಾಡಲಾಗಿತ್ತು. ಈ ಪೈಕಿ 2016-17ನೇ ಸಾಲಿನಲ್ಲಿ 428, 2018-19ನೇ ಸಾಲಿನಲ್ಲಿ 1502 ಹಾಗೂ 2020ರಲ್ಲಿ 714 ಒತ್ತುವರಿ ಪ್ರಕರಣ ತೆರವು ಮಾಡಲಾಗಿದೆ. ಪ್ರಸ್ತುತ 696 ಒತ್ತುವರಿಗಳು ತೆರವಿಗೆ ಬಾಕಿ ಇವೆ.

ಈ ಪೈಕಿ ಪೂರ್ವ 110, ಪಶ್ಚಿಮ 59, ದಕ್ಷಿಣ 20, ಕೋರಮಂಗಲ ಕಣಿವೆ 3, ಯಲಹಂಕ 96, ಮಹದೇವಪುರ 136, ಮಹದೇವಪುರ(ಹೊಸ) 45, ಬೊಮ್ಮನಹಳ್ಳಿ 26, ಬೊಮ್ಮನಹಳ್ಳಿ(ಹೊಸ) 66, ಆರ್‌.ಆರ್‌.ನಗರ 9, ದಾಸರಹಳ್ಳಿ 126 ಸೇರಿದಂತೆ ಹೀಗೆ ಒಟ್ಟು 696 ಒತ್ತುವರಿಗಳು ತೆರವಿಗೆ ಬಾಕಿ ಇದೆ. ರೈನ್‌ಬೊ ಬಡಾವಣೆಯಲ್ಲಿ ಕೆಲವರು ನಕ್ಷೆ ಉಲ್ಲಂಘಿಸಿ ರಾಜಕಾಲುವೆ ಮೇಲೆಯೇ ಮನೆ ಕಟ್ಟಿದ್ದಾರೆ. ಅದರಲ್ಲಿ 32 ಮನೆಗಳು ರಾಜಕಾಲುವೆ ಮೇಲೆ ಇವೆ. ಅವುಗಳನ್ನು ಕೂಡ ತೆರವುಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ತಿಳಿಸಿದೆ.

Follow Us:
Download App:
  • android
  • ios