Asianet Suvarna News Asianet Suvarna News

ಬೆಂಗಳೂರಲ್ಲಿ ನಡೆಯುತ್ತೆ ನಿತ್ಯ 30,000 ಮಂದಿ ಕೊರೋನಾ ಪರೀಕ್ಷೆ

ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ಇನ್ಮುಂದೆ ಹೆಚ್ಚಿನ ಸಂಖ್ಯೆಯ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.

BBMP To conduct 30 thousand Test for Covid suspects per day
Author
Bengaluru, First Published Aug 15, 2020, 7:01 AM IST

ಬೆಂಗಳೂರು (ಆ.15) : ಪ್ರಸ್ತುತ ನಗರದಲ್ಲಿ ನಿತ್ಯ 20,000 ಮಂದಿಗೆ ಕೊರೋನಾ ಪರೀಕ್ಷೆ ನಡೆಸಲಾಗುತ್ತಿದ್ದು, ಶೀಘ್ರದಲ್ಲೇ ಪರೀಕ್ಷೆ ಪ್ರಮಾಣವನ್ನು 30,000 ಹೆಚ್ಚಿಸಲು ನಿರ್ಧರಿಸಲಾಗಿದೆ. ಇದರಿಂದ ಕೊರೋನಾ ಸೋಂಕು ಹರಡುವಿಕೆ ನಿಯಂತ್ರಿಸುವ ಜೊತೆಗೆ ಸೋಂಕಿತರನ್ನು ಶೀಘ್ರ ಪತ್ತೆ ಮಾಡಿ ಚಿಕಿತ್ಸೆ ನೀಡಬಹುದಾಗಿದೆ ಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ತಿಳಿಸಿದರು.

ಶುಕ್ರವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸ್ವಯಂ ಸೇವಕರ ನೋಂದಣಿಗೆ  (ಬಿಎಲ್‌- ಕೇರ್ಸ್‌) ವೆಬ್‌ಸೈಟ್‌ ಲೋಕಾರ್ಪಣೆಗೊಳಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಕೋವಿಡ್‌ ಸೋಂಕು ನಿಯಂತ್ರಣ ಕಾರ್ಯಗಳಿಗೆ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರ ಪಡೆಯಲಾಗಿದೆ. ಇದೀಗ ಸ್ಥಳೀಯವಾಗಿ ಲಭ್ಯವಿರುವ ಅಧಿಕಾರಿಗಳು ಹಾಗೂ ಸ್ವಯಂ ಸೇವಕರನ್ನು ಬಳಸಿ ಸಮೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಕೊರೋನಾ ವಿರುದ್ಧ ಹೊರಾಟ: ಟಾಸ್ಕ್ ಫೋರ್ಸ್ ಸಭೆಯಲ್ಲಿ ತೆಗೆದುಕೊಂಡ ಮಹತ್ವದ ನಿರ್ಧಾರಗಳು...

ನಗರದಲ್ಲಿ ಬೂತ್‌ ಮಟ್ಟದಲ್ಲಿ ಕೊರೋನಾ ಸೋಂಕು ಪರಿಣಾಮಕಾರಿಯಾಗಿ ನಿಯಂತ್ರಿಸಲು ಸ್ವಯಂ ಸೇವಕರಾಗಿ ಮನೆಗಳಿಗೆ ತೆರಳಿ ಆರೋಗ್ಯ ಸಮೀಕ್ಷೆ ಮಾಡಲು ಇಚ್ಛಿಸುವ ಯುವಕರು ನೋಂದಣಿ ಮಾಡಿಕೊಳ್ಳುವಂತೆ ಕೋರಿದರು.

ಶುಕ್ರವಾರ ಕರ್ನಾಟಕದಲ್ಲಿ ದಾಖಲೆ ಪ್ರಮಾಣದಲ್ಲಿ ಕೊರೋನಾ ಪ್ರಕರಣಗಳು ಪತ್ತೆ..!..

ಬೂತ್‌ ಮಟ್ಟದ ತಂಡದಲ್ಲಿ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಬಯಸುವವರು http#b kares.in ವೆಬ್‌ಸೈಟ್‌ಗೆ ಭೇಟಿ ಅರ್ಜಿ ಸಲ್ಲಿಸಬಹುದು ಅಥವಾ ನೋಂದಣಿ ಅರ್ಜಿ ಡೌನ್ಲೋಡ್‌ ಮಾಡಿಕೊಂಡು ಭರ್ತಿ ಮಾಡಿ ಸ್ಥಳೀಯ ಪಾಲಿಕೆ ಕಚೇರಿಗೆ ಸಲ್ಲಿಸಿ ಸ್ವಯಂ ಸೇವಕರಾಗಬಹುದು.

ವಲಯಗಳಲ್ಲಿ ಸಮೀಕ್ಷೆ ಚುರುಕು

ಬಿಬಿಎಂಪಿಯ ಪೂರ್ವ ವಲಯದಲ್ಲಿ ಇರುವ 1,438 ಬೂತ್‌ಗಳ ಪೈಕಿ 1,156 ಬೂತ್‌ಗಳಲ್ಲಿ ಸಮೀಕ್ಷೆ ನಡೆಯುತ್ತಿದೆ. ಶೇ.80ರಷ್ಟುಸಮೀಕ್ಷೆ ಕಾರ್ಯ ಪೂರ್ಣಗೊಂಡಿದೆ. ಮುಂದಿನ ದಿನಗಳಲ್ಲಿ ಉಳಿದ ವಲಯಗಳಲ್ಲಿ ಕಾರ್ಯ ಚುರುಕುಗೊಳಿಸಲು ನಿರ್ಧರಿಸಲಾಗಿದೆ. ಪ್ರಮುಖ ಅಪಾರ್ಟ್‌ಮೆಂಟ್‌ಗಳಲ್ಲಿ ಅಲ್ಲಿನ ನಿವಾಸಿಗಳೇ ಸ್ವಯಂ ಸೇವಕರಾಗಿ ಸಮೀಕ್ಷೆ ನಡೆಸಿ ಮಾಹಿತಿ ನೀಡುವ ಭರವಸೆ ನೀಡಿದ್ದಾರೆ ಎಂದು ಆಯುಕ್ತ ಮುಂಜುನಾಥ ಪ್ರಸಾದ್‌ ಹೇಳಿದರು.

Follow Us:
Download App:
  • android
  • ios