Asianet Suvarna News Asianet Suvarna News

ಬೆಂಗಳೂರಲ್ಲಿ ನಿಮ್ಮ ವಾಣಿಜ್ಯ ಮಳಿಗೆಗೆ ಕನ್ನಡ ನಾಮಫಲಕ ಹಾಕಿಲ್ವಾ..? ಬಿಬಿಎಂಪಿಯವರು ನಾಳೆಯೇ ಅಂಗಡಿ ಮುಚ್ಚಿಸ್ತಾರೆ!

ಬೆಂಗಳೂರಿನಲ್ಲಿ ನಿಮ್ಮ ಅಂಗಡಿ, ಮುಂಗಟ್ಟು ಹಾಗೂ ವಾಣಿಜ್ಯ ಮಳಿಗೆಗಳಿಗೆ ಕನ್ನಡ ನಾಮಫಲಕ ಹಾಕಿಲ್ವಾ..? ಹಾಗಾದ್ರೆ ನಾಳೆಯೇ ಬಿಬಿಎಂಪಿಯವರು ಬಂದು ನಿಮ್ಮ ಅಂಗಡೀನ ಕ್ಲೋಸ್ ಮಾಡ್ತಾರೆ.

BBMP will seal down businesses that do not install Kannada name boards in Bengaluru sat
Author
First Published Feb 28, 2024, 6:32 PM IST

ಬೆಂಗಳೂರು (ಫೆ.28): ಸಿಲಿಕಾನ್‌ ಸಿಟಿ ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಎಲ್ಲ ಅಂಗಡಿ, ಮುಂಗಟ್ಟು, ವಾಣಿಜ್ಯ ಉದ್ಯಮಗಳು, ಟ್ರಸ್ಟ್‌ಗಳು, ಆಸ್ಪತ್ರೆಗಳು, ಹೋಟೆಲ್‌ಗಳು ಸೇರಿ ಎಲ್ಲ ಮಾದರಿಯ ವಾಣಿಜ್ಯಾತ್ಮಕ ಕಟ್ಟಡಗಳ ನಾಮಫಲಕಗಳಲ್ಲಿ ಶೇ.60ರಷ್ಟು ದೊಡ್ಡದಾಗಿ ಕನ್ನಡ ಭಾಷೆ ಪ್ರದರ್ಶಿಸದ ಫಲಕ ಅಳವಡಿಸಬೇಕು. ಇಲ್ಲದಿದ್ದರೆ ನಾಳೆಯಿಂದ (ಫೆ.29ರಿಂದ) ಕನ್ನಡ ನಾಮಫಲಕ (Kannada Name board) ಅಳವಡಿಸದ ಎಲ್ಲ ಮಳಿಗೆಗಳ ಪರವಾನಗಿಯನ್ನು ರದ್ದುಗೊಳಿಸುವ ಜೊತೆಗೆ, ಬೀಗ ಹಾಕಿ ಕ್ಲೋಸ್ ಮಾಡಲಾಗುತ್ತದೆ.

ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ವಾಣಿಜ್ಯ ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್‌ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್‌ಗಳು ಮುಂತಾದವುಗಳು ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ. 60 ರಷ್ಟು ಪ್ರದರ್ಶಿಸಲಾಗಿದೆ ಮತ್ತು ಕನ್ನಡ ಭಾಷೆಯು ನಾಮಫಲಕದ ಮೇಲ್ಬಾಗದಲ್ಲಿ ಪ್ರದರ್ಶಿತವಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಉಲ್ಲೇಖಿತ ವಿಶೇಷ ರಾಜ್ಯ ಪತ್ರಿಕೆ ಅಧಿಸೂಚನಾ ಪತ್ರದಲ್ಲಿ ಸೂಚಿಸಿರುತ್ತಾರೆ.

ಬೆಲೆ ಏರಿಕೆ ನಡುವೆ ವಿದ್ಯುತ್ ದರ ಇಳಿಕೆಯ ಖುಷಿ ನೀಡಿದ ಗ್ಯಾರಂಟಿ ಸರ್ಕಾರ; ಯೂನಿಟ್‌ಗೆ 1.10 ರೂ. ಇಳಿಕೆ

ಅದರಂತೆ, ಈ ಹಿಂದೆ ಬಿಬಿಎಂಪಿ ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ಫೆ.02 ಮತ್ತು ಫೆ.12ರಂದು ನಡೆದ ಸಭೆಯಲ್ಲಿ ಪಾಲಿಕೆಯ ವ್ಯಾಪ್ತಿಯಲ್ಲಿರುವ ಎಲ್ಲಾ ವಾಣಿಜ್ಯ ಉದ್ದಿಮೆಗಳು ಫೆ.28ರೊಳಗೆ ನಾಮಫಲಕಗಳಲ್ಲಿ ಕಡ್ಡಾಯವಾಗಿ ಶೇ.60ರಷ್ಟು ಕನ್ನಡ ಭಾಷೆಯನ್ನು ಪ್ರದರ್ಶಿಸುವಂತೆ ಎಲ್ಲಾ ವಾಣಿಜ್ಯದಾರರಿಗೆ ಸೂಚಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಫೆ.29ರಿಂದ ಅನ್ವಯವಾಗುವಂತೆ, ಪಾಲಿಕೆಯ ವ್ಯಾಪ್ತಿಯಲ್ಲಿರುವ ವಾಣಿಜ್ಯ ಉದ್ದಿಮೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆಯನ್ನು ಪ್ರದರ್ಶಿಸದೇ ಇರುವ ವಾಣಿಜ್ಯ ಉದ್ದಿಮೆಗಳನ್ನು ಇಲಾಖಾ ವತಿಯಿಂದ ನೀಡಿರುವ ಉದ್ದಿಮೆ ಪರವಾನಿಗೆಗಳನ್ನು(Trade License Cancel) ಅಮಾನತ್ತುಗೊಳಿಸಲು ಹಾಗೂ ಅಂತಹ ವಾಣಿಜ್ಯ ಉದ್ದಿಮೆಗಳನ್ನು ಬೀಗಮುದ್ರೆ (Seal down) ಮಾಡಲು ಆರೋಗ್ಯ ಇಲಾಖಾ ವತಿಯಿಂದ ಅಗತ್ಯ ಕ್ರಮ ಕೈಗೊಳ್ಳಲು ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರೋಳ್ಕರ್ ವಿಕಾಸ್ ಕಿಶೋರ್ ತಿಳಿಸಿರುತ್ತಾರೆ.

ಅವ್ನಲ್ಲಾ.. ಅವ್ನಲ್ಲಾ.. ಇಲ್ಲಿದ್ದಾನೆ ನೋಡಿ, ಪಾಕ್ ಪರ ಘೋಷಣೆ ಕೂಗಿದ ಆರೋಪಿ; ಬಿಜೆಪಿ ಆರೋಪ

ಮಾ.5ರಂದು ಬಿಬಿಎಂಪಿ ವಿರುದ್ಧ ಪ್ರತಿಭಟನೆ: 
ಬೆಂಗಳೂರಿನಲ್ಲಿ ಡಿ.27ರಂದು ಕನ್ನಡ ನಾಮಪಳಕ ಕಡ್ಡಾಯವಾಗಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯಿಂದ ಕನ್ನಡವಿಲ್ಲದ ಫಲಕಗಳನ್ನು ಕಿತ್ತು ಹೋರಾಟ ಮಾಡಲಾಗಿತ್ತು. ಆದರೆ, ಸರ್ಕಾರ ನನ್ನ ಮತ್ತು ನಮ್ಮ ಕಾರ್ಯಕರ್ತರನ್ನು ಜೈಲಿಗೆ ಹಾಕಿದ್ದರು. ನಂತರ ಸರ್ಕಾರದಿಂದ ಕನ್ನಡ ನಾಮಫಲಕ ಅಳವಡಿಕೆಗೆ ಫೆ.28ರವರೆಗೆ ಗಡುವು ನೀಡಲಾಗಿತ್ತು. ಇಂದಿಗೆ ಗಡುವು ಮುಗಿಯುತ್ತಿದ್ದು, ಇನ್ನೂ 3,500ಕ್ಕೂ ಅಧಿಕ ಮಳಿಗೆಗಳಲ್ಲಿ ಕನ್ನಡ ಫಲಕ ಅಳವಡಿಸಿಲ್ಲ. ಅಂಥವರ ಮೇಲೆ ಯಾವ ಕ್ರಮ ಕೈಗೊಳ್ಳಲಾಗುತ್ತದೆ ಕಾದು ನೋಡುತ್ತೇವೆ. ಒಂದು ವೇಳೆ ನಿರ್ಲಕ್ಷ್ಯ ಮಾಡಿದ್ದಲ್ಲಿ ಮಾ.5ರಂದು ಬಿಬಿಎಂಪಿ ವಿರುದ್ಧ ಪ್ರತಿಭಟನೆ ಮಾಡುತ್ತೇವೆ. ನಂತರ, ಮತ್ತೆ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡುತ್ತೇವೆ. ನಮ್ಮ ವಿರುದ್ಧ ಯಾವುದೇ ಕ್ರಮಕ್ಕೆ ನಾವು ಹೆದರೋದಿಲ್ಲ. ಮತ್ತೆ ಜೈಲಿಗೆ ಹಾಕಿದ್ರು ನಾವು ಹೋರಾಟದಿಂದ ಹಿಂದೆ ಸರಿಯಲ್ಲ.
- ನಾರಾಯಣಗೌಡ, ಅಧ್ಯಕ್ಷರು, ಕರ್ನಾಟಕ ರಕ್ಷಣಾ ವೇದಿಕೆ

Follow Us:
Download App:
  • android
  • ios