Asianet Suvarna News Asianet Suvarna News

ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಪ್ರಾರಂಭದಲ್ಲೇ ಐದು ಪೀಠಗಳ ಮಾಡುವ ಚಿಂತನೆ: ಬಿ.ಸಿ.ಉಮಾಪತಿ

ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ವೀರಶೈವ ಲಿಂಗಾಯತ ಸಮಾಜದ ಇನ್ನೂ ಎರಡು ಪೀಠಗಳು ಪ್ರಾರಂಭ ಆಗಬಹುದು ಎಂದು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಪ್ರಧಾನ ಧರ್ಮದರ್ಶಿ ಬಿ.ಸಿ. ಉಮಾಪತಿ ತಿಳಿಸಿದರು. 

bc umapathy talks about veerashaiva lingayat panchamasali peetha at davanagere gvd
Author
Bangalore, First Published Aug 11, 2022, 10:47 PM IST

ವರದಿ: ವರದರಾಜ್, ದಾವಣಗೆರೆ 

ದಾವಣಗೆರೆ (ಆ.11): ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ವೀರಶೈವ ಲಿಂಗಾಯತ ಸಮಾಜದ ಇನ್ನೂ ಎರಡು ಪೀಠಗಳು ಪ್ರಾರಂಭ ಆಗಬಹುದು ಎಂದು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಪ್ರಧಾನ ಧರ್ಮದರ್ಶಿ ಬಿ.ಸಿ. ಉಮಾಪತಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಬುರಗಿ ಕಡೆ ಪೀಠ ಪ್ರಾರಂಭ ಮಾಡುತ್ತೇವೆ ಎನ್ನುತ್ತಿದ್ದಾರೆ. ಮೈಸೂರು ಭಾಗದಲ್ಲೂ ಪೀಠ ಸ್ಥಾಪನೆಗೆ ಮುಂದಾದರೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು. ಉತ್ತರ ಕರ್ನಾಟಕದ ಭಾಗದಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜ ಬಾಂಧವರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. 

ಪ್ರತಿ ಗ್ರಾಮಕ್ಕೂ ತೆರಳಿ ಸಮಾಜದ ಸೇವೆ ಮಾಡಲಿಕ್ಕೆ ಆಗುತ್ತಿಲ್ಲ.‌ ಸಮಾಜದ ಸೇವೆಗಾಗಿ ಇನ್ನೂ ಎರಡು ಮಠಗಳಾದರೂ ಆಗಬಹುದು. ‌ಬಬಲೇಶ್ವರದಲ್ಲಿನ ಮೂರನೇ ಪೀಠಕ್ಕೆ ನಮ್ಮ ಮಠದ ಸಹಕಾರ ಇದೆ ಎಂದು ತಿಳಿಸಿದರು. ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಪ್ರಾರಂಭದಲ್ಲೇ ಐದು ಪೀಠಗಳ ಮಾಡುವ ಚಿಂತನೆ ಇತ್ತು. ಮೂರು ಆಗಿವೆ. ಶಾಖಾಮಠಗಳ ಮಾಡುವ ಚಿಂತನೆ ಇದೆ.‌ ಸಾಕಷ್ಟು ಅಧ್ಯಯನ ಮಾಡಿದವರು, ಧಾರ್ಮಿಕ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಮತ್ತು ಮುಖ್ಯವಾಗಿ ನಮ್ಮ ಸಮಾಜದವರೇ ಇದ್ದರೆ ಶಾಖಾಮಠ ಮಾಡಲಿಕ್ಕೆ ಆಗುತ್ತದೆ ಎಂದು ತಿಳಿಸಿದರು.

Davanagere ದೊಡ್ಡ ಖೋಟಾ ನೋಟು ಜಾಲವನ್ನು ಭೇದಿಸಿದ ಪೊಲೀಸ್ರು

ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜವನ್ನು ಪ್ರವರ್ಗ 2 ಎಗೆ ಸೇರಿಸುವ ನಿಟ್ಟಿನಲ್ಲಿ ಸರ್ಕಾರಕ್ಕೆ ಎಂಟು ನೂರು ಪುಟಗಳ ದಾಖಲೆ ಸಹಿತ ಮನವಿ ಸಲ್ಲಿಸ ಲಾಗಿದೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರನ್ನು ಮೂರು ಬಾರಿ ಭೇಟಿ ಮಾಡಿ,‌ ಚರ್ಚಿಸಲಾಗಿದೆ. ಎಲ್ಲ ಜಿಲ್ಲೆಯಲ್ಲಿ ಅಧ್ಯಯನ ನಡೆಸಿದ ನಂತರ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿ ದ್ದಾರೆ. ಸರ್ಕಾರಕ್ಕೆ ವರದಿ ಸಲ್ಲಿಸಿದ ನಂತರ ನಮ್ಮ ಬೇಡಿಕೆ ಈಡೇರಬಹುದು ಎಂದು ತಿಳಿಸಿದರು. ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರ್ಪಡೆಗೆ ಒತ್ತಾಯಿಸಿ ಅಟಲ್ ಬಿಹಾರಿ ವಾಜಪೇಯಿ ಅವರ ಅವಧಿಯಲ್ಲಿ ಮನವಿ ಸಲ್ಲಿಸಲಾಗಿತ್ತು.‌ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸಮಾಜದ ಹೆಸರು ಇಲ್ಲ ಎಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ವಾಪಸು ಕಳಿಸಿತ್ತು.ಮತ್ತೇ ಹಿಂದುಳಿದ ವರ್ಗಗಳ ಬಗ್ಗೆ ಅಧ್ಯಯನದ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದು ಆಶಾವಾದಿಗಳಾಗಿದ್ದೇವೆ ಎಂದರು.

ಪಂಚಮಸಾಲಿ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳು, ಸಾಧಕರಿಗೆ ಸನ್ಮಾನ: ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ಜಿಲ್ಲಾ ಘಟಕ ಮತ್ತು ಸರ್ ಸೇವಾ ಸಂಸ್ಥೆ ಹಾಗೂ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಸಹಯೋಗದಲ್ಲಿ ಪಂಚಮಸಾಲಿಯ ಸಮಾಜದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆ. 13ರ ಶನಿವಾರ ಬೆಳಿಗ್ಗೆ 10.30 ಕ್ಕೆ ದೇವರಾಜ್ ಅರಸು ಬಡಾವಣೆಯಲ್ಲಿರುವ  ಶಿವ ಪಾರ್ವತಿ ಕಲ್ಯಾಣ ಮಂಟಪದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಾಜದ ಜಿಲ್ಲಾಧ್ಯಕ್ಷ ಬಿ.ಸಿ. ಉಮಾಪತಿ ತಿಳಿಸಿದರು. 

ಪ್ರತಿಭಾ ಪುರಸ್ಕಾರಕ್ಕೆ ಎಸ್ಸೆಸ್ಸೆಲ್ಸಿಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳನ್ನು ಪಡೆದ 76 ವಿದ್ಯಾರ್ಥಿಗಳು ಹಾಗೂ, ಪಿಯುಸಿಯ 35 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಎಸ್ಸೆಸ್ಸೆಲ್ಸಿಯಲ್ಲಿ ಶೇ 95 ಕ್ಕೂ ಹೆಚ್ಚು ಅಂಕಗಳನ್ನು ಪಡೆದ 30 ಹಾಗೂ ಪಿಯುಸಿಯ 16 ವಿದ್ಯಾರ್ಥಿಗಳಿಗೆ ಬೆಳ್ಳಿ ಚೌಕ ನೀಡಲಾಗುವುದು. ಉಳಿದ ವಿದ್ಯಾರ್ಥಿಗಳಿಗೆ ದೇವರ ಬೆಳ್ಳಿ ಫೋಟೋ ನೀಡಲಾಗುವುದು. ಎಲ್ಲರಿಗೂ ಬಂಗಾರದ ಪದಕ, ಸರ್ಟಿಫಿಕೇಟ್ ನೀಡಲಾಗುವುದು ಎಂದು ಹೇಳಿದರು. ಸಮಾರಂಭದ ಸಾನ್ನಿಧ್ಯವನ್ನು ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮಿಗಳು ವಹಿಸಿ, ಉದ್ಘಾಟನೆ ನೆರವೇರಿಸಲಿದ್ದಾರೆ. 

ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರ ಕಾಟಾಚಾರದ ಮಳೆ ಹಾನಿ ವಿಸಿಟ್!

ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ದೂಡಾ ಕೆ.ಎಂ. ಸುರೇಶ್, ದಾವಣಗೆರೆ ವಿವಿ ಪರೀಕ್ಷಾಂಗ ಕುಲಸಚಿವ ಡಾ. ಕೆ. ಶಿವಶಂಕರ್ ಆಗಮಿಸಲಿದ್ದು, ಅತಿಥಿಗಳಾಗಿ ಎಂ.ದೊಡ್ಡಣ್ಣ, ಶ್ರೀಧರ್, ಸುಷ್ಮಾ ಪಾಟೀಲ್ ಸೇರಿದಂತೆ ಸಮಾಜದ ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿರುವರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಡಾ. ಬಿ.ಹೆಚ್. ವೀರಪ್ಪ, ಪತ್ರಕರ್ತ ನಾಗರಾಜ್ ಬಡದಾಳ್, ಸರಸ್ವತಿ ವೀರಪ್ಪ, ಬಿ.ಟಿ. ಪ್ರಕಾಶ್, ಮಾಲಾ ಮುರುಗೇಶ್,ಡಾ. ಚಿಕ್ಕಗೌಡ್ರು ಕೊಟ್ರೇಶ್. ಪ್ರಸಾದ್, ಬಾದಾಮಿ ಜಯಣ್ಣ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು. ಇದೇ ವೇಳೆ ಮಠದ ದಾಸೋಹ ನಿಧಿ ದಾನಿಗಳಿಗೆ  ಗೌರವಿಸಲಾಗುವುದು ಎಂದು ಮಾಹಿತಿ ನೀಡಿದರು.

Follow Us:
Download App:
  • android
  • ios