ಮತಪಟ್ಟಿಯಿಂದ ಹೆಸರು ಕೈಬಿಡುವಾಗ ಎಚ್ಚರ ವಹಿಸಿ

ಮತದಾರರ ಪಟ್ಟಿಯಿಂದ ಹೆಸರನ್ನು ಕೈಬಿಡುವಾಗ ಸೂಕ್ತ ದಾಖಲೆಗಳನ್ನು ಪಡೆದು ನಿಯಮಾನುಸಾರ ಅಗತ್ಯ ಕ್ರಮಗಳನ್ನು ಕೈಗೊಂಡು ಪಟ್ಟಿಯಿಂದ ಹೆಸರನ್ನು ತೆಗೆದುಹಾಕಬೇಕು ಎಂದು ಮತದಾರರ ಪಟ್ಟಿವೀಕ್ಷಕರಾದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಏಕ್‌ ರೂಪ್‌ ಕೌರ್‌, ಜಿಲ್ಲಾ ಮತ್ತು ತಾಲೂಕು ಮಟ್ಟದ ಚುನಾವಣಾಧಿಕಾರಿಗಳಿಗೆ ಸೂಚಿಸಿದರು.

Be careful while dropping names from the ballot

 ಚಿಕ್ಕಬಳ್ಳಾಪುರ (ಡಿ. 09):  ಮತದಾರರ ಪಟ್ಟಿಯಿಂದ ಹೆಸರನ್ನು ಕೈಬಿಡುವಾಗ ಸೂಕ್ತ ದಾಖಲೆಗಳನ್ನು ಪಡೆದು ನಿಯಮಾನುಸಾರ ಅಗತ್ಯ ಕ್ರಮಗಳನ್ನು ಕೈಗೊಂಡು ಪಟ್ಟಿಯಿಂದ ಹೆಸರನ್ನು ತೆಗೆದುಹಾಕಬೇಕು ಎಂದು ಮತದಾರರ ಪಟ್ಟಿವೀಕ್ಷಕರಾದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಏಕ್‌ ರೂಪ್‌ ಕೌರ್‌, ಜಿಲ್ಲಾ ಮತ್ತು ತಾಲೂಕು ಮಟ್ಟದ ಚುನಾವಣಾಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ನಡೆದ ಮತದಾರರ ಪಟ್ಟಿಪರಿಷ್ಕರಣೆಯ ಪ್ರಗತಿ ಪರಿಶೀಲನಾ ಸಭೆ ಹಾಗೂ ವಿವಿಧ ರಾಜಕೀಯ (Politics)  ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಾಡಿ 2023ರ ಜನವರಿ 5ರಂದು ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಲು ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಪಟ್ಟಅಧಿಕಾರಿಗಳಿಗೆ ಆದೇಶಿಸಿದರು.

ನಿಯಮಗಳ ಪಾಲನೆ ಕಡ್ಡಾಯ

ಮತದಾರರ (Voters)  ಪಟ್ಟಿಯಿಂದ ಹೆಸರು ತೆಗೆಯುವಾಗ ನಿಯಮಾನುಸಾರ ಎಲ್ಲ ಕ್ರಮಗಳನ್ನು ಅನುಸರಿಸಲಾಗಿದೆಯೇ ಎಂಬುದನ್ನು ಖಾತರಿ ಪಡಿಸಿಕೊಳ್ಳಬೇಕು. ಆ ನಂತರವೇ ಹೆಸರು ಕೈಬಿಡುವ ಪ್ರಕ್ರಿಯೆಯನ್ನು ಅನುಸರಿಸಬೇಕು. ಹೆಸರನ್ನು ಕೈಬಿಡುವ ಕಾರ್ಯಕದ ಜೊತೆ-ಜೊತೆಗೆ ನವ ಮತದಾರರನ್ನು ಪಟ್ಟಿಗೆ ಸೇರ್ಪಡೆ ಮಾಡುವ ಕಾರ್ಯವನ್ನು ಲೋಪದೋಷವಿಲ್ಲದೆ ನಿರ್ವಹಿಸಬೇಕು. ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿದು ಚುನಾವಣಾ ಪ್ರಕ್ರಿಯೆಯಿಂದ, ಮತದಾನದಿಂದ ವಂಚಿತರಾಗಬಾರದು. ಆ ನಿಟ್ಟಿನಲ್ಲಿ ಹೆಚ್ಚು ಜಾಗೃತಿ ವಹಿಸಿ ಪರಿಷ್ಕರಣೆ ಕಾರ್ಯಗಳನ್ನು ನಿರ್ವಹಿಸುವ ಮೂಲಕ ಡಿ.26 ರೊಳಗೆ ಆಕ್ಷೇಪಣೆಗಳನ್ನು ವಿಲೇವಾರಿ ಮಾಡುವಂತೆ ಹೇಳಿದರು.

ಜಿಲ್ಲಾಧಿಕಾರಿ ಎನ್‌.ಎಂ.ನಾಗರಾಜ್‌ ಮಾತನಾಡಿ, ಮತದಾರರ ಪಟ್ಟಿಪರಿಷ್ಕರಣೆ ಸಂಬಂಧ ಜಿಲ್ಲೆಯಲ್ಲಿ ನ.9 ರಿಂದ ಡಿಸೆಂಬರ್‌ 7 ರವರೆಗೆ ಜಿಲ್ಲೆಯಲ್ಲಿ ಕೈಗೊಂಡಿರುವ ಮನೆ ಮನೆ ಸಮೀಕ್ಷೆಕಾರ್ಯ ಯಶಸ್ವಿಯಾಗಿ ನಡೆಸಲಾಗಿದೆ. ಕರಡು ಮತದಾರರ ಪಟ್ಟಿಅನ್ವಯ ಡಿಸೆಂಬರ್‌ 7 ರವರೆಗೆ ಜಿಲ್ಲೆಯಲ್ಲಿ ಸುಮಾರು 14,01,492 ಜನಸಂಖ್ಯೆ ಇದ್ದು, 10,13,760 ಮತದಾರರಿದ್ದಾರೆ. ಈ ಪೈಕಿ 5,03,326 ಪುರುಷರು, 5,10,437 ಮಹಿಳಾ ಮತದಾರರು ಇದ್ದಾರೆ ಎಂದರು.

ಶೇ.82ರಷ್ಟುಮತದಾರರ ಆಧಾರ್‌ ಜೋಡಣೆ

ಡಿಸೆಂಬರ್‌ 7 ರವರೆಗೆ ನಮೂನೆ-6 ರಡಿ 18,903 ಅರ್ಜಿಗಳು, ನಮೂನೆ-7 ರಡಿ 8,614 ಅರ್ಜಿಗಳು, ನಮೂನೆ-8 ರಡಿ 17,462 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದ್ದು, ವಿಲೇವಾರಿ ಕಾರ್ಯ ಪ್ರಗತಿಯಲ್ಲಿದೆ. ಜಿಲ್ಲೆಯ ಶೇ.82.32 ಮತದಾರರ ವಿವರವನ್ನು ಆಧಾರ್‌ ಸಂಖ್ಯೆಯೊಂದಿಗೆ ಜೋಡಣೆ ಮಾಡಲಾಗಿದ್ದು, ಬಾಕಿ ಮತದಾರರ ವಿವರವನ್ನು ಆಧಾರ್‌ ಸಂಖ್ಯೆಯೊಂದಿಗೆ ಜೋಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ವೀಕ್ಷಕರ ಗಮನಕ್ಕೆ ತಂದರು.

ಸಭೆಯಲ್ಲಿ ಜೆ.ಡಿ.ಎಸ್‌ ಪಕ್ಷದ ಪ್ರತಿನಿಧಿ ಮುನೇಗೌಡ, ಸಿ.ಪಿ.ಎಂ ಪಕ್ಷದ ಪ್ರತಿನಿಧಿ ಬಿ.ಎನ್‌.ಮುನಿಕೃಷ್ಣಪ್ಪ, ಜಿಲ್ಲಾಧಿಕಾರಿ ಎನ….ಎಂ.ನಾಗರಾಜ…, ಅಪರ ಜಿಲ್ಲಾಧಿಕಾರಿ ಡಾ.ಎನ….ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಡಾ.ಜಿ.ಸಂತೋಷ್‌ ಕುಮಾರ್‌, ಚುನಾವಣಾ ಶಾಖೆಯ ತಹಸೀಲ್ದಾರ್‌ ಮೈಕಲ…, ತಹಸೀಲ್ದಾರ್‌ ಶ್ರೀನಿವಾಸ್‌, ಗಣಪತಿಶಾಸ್ತ್ರಿ, ವೈ.ವಿ.ರವಿ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

ಜನಪ್ರತಿನಿಧಿಗಳೊಂದಿಗೆ ಸಂವಾದ

ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಪರಿಷ್ಕರಣೆಯ ಪ್ರಗತಿ ಪರಿಶೀಲನೆಯ ಸಭೆಯ ನಂತರ ಅಧಿಕಾರಿಗಳ ಸಮ್ಮುಖದಲ್ಲೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳನ್ನು ಸಭೆಗೆ ಆಹ್ವಾನಿಸಿ ಜಿಲ್ಲೆಯಲ್ಲಿ ಮತದಾರರ ಪಟ್ಟಿಪರಿಷ್ಕರಣೆ ಸಂಬಂಧ ತಮ್ಮ ಆಕ್ಷೇಪಣೆಗಳು, ಅಹವಾಲುಗಳು ಹಾಗೂ ಸಮಸ್ಯೆಗಳು ಏನಾದರೂ ಇದ್ದಲ್ಲಿ ಮುಕ್ತವಾಗಿ ಸಭೆಯ ಗಮನಕ್ಕೆ ತರಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಏಕ್‌ರೂಪ ಕೌರ್‌ ಅವಕಾಶ ನೀಡಿದರು. ಜೊತೆಗೆ ಮುಂದಿನ ದಿನಗಳಲ್ಲೂ ಆಕ್ಷೇಪಣೆಗಳನ್ನು ನಮ್ಮ ಗಮನಕ್ಕೆ ನೇರವಾಗಿ ಸಲ್ಲಿಸಬಹುದು ಎಂದರು.

ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಮತದಾರರ ಪಟ್ಟಿಪರಿಷ್ಕರಣೆ ಪ್ರಗತಿ ಪರಿಶೀಲನೆಯನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಏಕ್‌ರೂಪ್‌ ಕೌರ್‌ ನಡೆಸಿದ ವೇಳೆ. ಡೀಸಿ ಎನ್‌.ಎಂ.ನಾಗರಾಜ್‌ ಇದ್ದರು.

Latest Videos
Follow Us:
Download App:
  • android
  • ios