ಮಂಡ್ಯ (ಆ.26): ಭಿಕ್ಷುಕಿಯೊಬ್ಬಳನ್ನು ಅತ್ಯಾಚಾರ ಮಾಡಿ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದ ಆರೋಪಿಯೊಬ್ಬ ಪೊಲೀಸರ ಕಣ್ತಪ್ಪಿಸಿ ಮಿಮ್ಸ್‌ ಆಸ್ಪತ್ರೆಯಿಂದ ಪರಾರಿಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ತಾಲೂಕಿನ ಕೀಲಾರ ಗ್ರಾಮದ ಕುಮಾರ ಪರಾರಿಯಾಗಿರುವ ಆರೋಪಿ. ಕೊರೋನಾ ಸೋಂಕಿಗೆ ತುತ್ತಾಗಿದ್ದ ಈತ ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಮಯದಲ್ಲಿ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದಾನೆ.

ಈತ ಜು.23ರಂದು ರಾತ್ರಿ ನಗರದ ಬಾಟಾ ಷೋರೂಂ ಬಳಿ ಮಲಗಿದ್ದ ಭಿಕ್ಷುಕಿಯೊಬ್ಬಳ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಆರೋಪಕ್ಕೊಳಗಾಗಿ ಜೈಲುಪಾಲಾಗಿದ್ದನು. ಕಾರಾಗೃಹದಲ್ಲಿ ಆರೋಪಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದ್ದರಿಂದ ಆತನನ್ನು ಚಿಕಿತ್ಸೆಗಾಗಿ ಮಿಮ್ಸ್‌ ಆಸ್ಪತ್ರೆಯಲ್ಲಿರುವ ಜೈಲ್‌ ವಾರ್ಡ್‌ಗೆ ದಾಖಲಿಸಲಾಗಿತ್ತು.

ಭಿಕ್ಷುಕಿ ಜೊತೆ ಅಫೇರ್ ಇಟ್ಟುಕೊಂಡ :ಅವಳನ್ನು ಕೊಂದು ಜೈಲು ಸೇರಿದ...

ಕೊರೋನಾ ಸೋಂಕಿನಿಂದ ಪೂರ್ಣ ಗುಣಮುಖನಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಮಯದಲ್ಲಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿದ್ದಾನೆ. ಮಂಡ್ಯ ಪೂರ್ವ ಠಾಣೆ ಪೊಲೀಸರು ಆರೋಪಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ.

ಪಿಶಾಚಿಯೂ ನಾಚುವಂಥ ಹೀನ ಕೃತ್ಯ! ಕೊಲೆ ಮಾಡಿ ರೇಪ್, ಸಿಸಿಟಿವಿಯಲ್ಲಿ ಸೆರೆ

"