Asianet Suvarna News Asianet Suvarna News

ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಅವಕಾಶ ದೊರೆತಿರುವುದು ಪುಣ್ಯದ ಫಲ: ಮಧು ಬಂಗಾರಪ್ಪ

ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಅವಕಾಶ ದೊರೆತಿರುವುದು ಪುಣ್ಯದ ಫಲ. ಈ ಅವಕಾಶವನ್ನು ಯಶಸ್ವಿಯಾಗಿ ನಿಭಾಯಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. 

Being given the opportunity to serve in the field of education is a blessing Says Madhu Bangarappa gvd
Author
First Published Feb 1, 2024, 12:38 PM IST

ಭದ್ರಾವತಿ (ಫೆ.01): ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಅವಕಾಶ ದೊರೆತಿರುವುದು ಪುಣ್ಯದ ಫಲ. ಈ ಅವಕಾಶವನ್ನು ಯಶಸ್ವಿಯಾಗಿ ನಿಭಾಯಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಯದ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಏರ್ಪಡಿಸಿದ್ದ ಸಾಂಸ್ಕೃತಿಕ ಮತ್ತು ಕ್ರೀಡಾ ದಿನಾಚರಣೆ ಹಾಗೂ ₹2.30 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಸಭಾಂಗಣ ಮತ್ತು ನೂತನ ಆಡಳಿತ ಮಂಡಳಿ ಕಚೇರಿ ಕಟ್ಟಡಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಣ ಕ್ಷೇತ್ರದ ಅನುಭವವಿಲ್ಲದ ನನಗೆ ಮುಖ್ಯಮಂತ್ರಿ ಅವರು ನೀಡಿದ ಶಿಕ್ಷಣ ಸಚಿವ ಸ್ಥಾನವನ್ನು ದೇವರ ಕೆಲಸ ಎಂದು ಅರಿತು ರಾಜ್ಯದ 76 ಸಾವಿರ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿ ಮತ್ತು 1.20 ಕೋಟಿ ವಿದ್ಯಾರ್ಥಿಗಳ ಸೇವೆ ಮಾಡಲು ಅವಕಾಶ ಸಿಕ್ಕಿದೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಮಕ್ಕಳ ಭವಿಷ್ಯಕ್ಕಾಗಿ ಯಾವುದೇ ರಾಜಕೀಯ ಪಕ್ಷದ ಪರ ಅಥವಾ ವಿರುದ್ಧ ಇಲ್ಲದಂತೆ ನ್ಯಾಯಸಮ್ಮತ ಪಠ್ಯ ಪರಿಷ್ಕರಣೆ ಮಾಡಿದ್ದೇವೆ ಎಂದರು. ಶಿಕ್ಷಣ ಇಲಾಖೆಯಲ್ಲೂ ನ್ಯೂನತೆ ಮತ್ತು ಕೊರತೆಗಳಿವೆ. ಅವುಗಳನ್ನು ಸರಿಪಡಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇವೆ. 

ಏಜೆಂಟರ್‌ ಹಾವಳಿ ತಪ್ಪಿಸಲು ತಹಸೀಲ್ದಾರ್‌ ಕಚೇರಿಗಳಲ್ಲಿ ಡಿಜಿಟಲೀಕರಣ: ಸಚಿವ ಕೃಷ್ಣ ಭೈರೇಗೌಡ

43 ಸಾವಿರ ಶಿಕ್ಷಕರ ಕೊರತೆ ಇರುವುದನ್ನು ಗಮನಿಸಿ 12 ಸಾವಿರ ಶಿಕ್ಷಕರನ್ನು ನೇಮಕ ಮಾಡಲಾಗಿದೆ. 32 ಸಾವಿರ ಶಿಕ್ಷಕರ ವರ್ಗಾವಣೆ ಮಾಡಿ ಯಶಸ್ಸು ಕಂಡಿದ್ದೇವೆ. ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ಕೊರತೆಗಳನ್ನು ನೀಗಿಸಲು ಹೆಚ್ಚುವರಿಯಾಗಿ ಶಿಕ್ಷಕರ ನೇಮಕ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಖಾಸಗಿ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ತುಂಬಲು ಸಿಎಂ ಬಳಿ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದರು. ವಿಧಾನ ಪರಿಷತ್ತು ಸದಸ್ಯ ಭೋಜೇಗೌಡ, ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ, ತಾಲೂಕು ನೌಕರರ ಸಂಘದ ಅಧ್ಯಕ್ಷ ಸಿದ್ದಬಸಪ್ಪ, ಮಾಜಿ ಸಂಸದ ಆಯನೂರು ಮಂಜುನಾಥ್, ನಗರಸಭಾ ಸದಸ್ಯ ಬಿ.ಕೆ.ಮೋಹನ್ ಮತ್ತಿತರರಿದ್ದರು.

Follow Us:
Download App:
  • android
  • ios