ಬೆಂಗಳೂರು (ಮೇ.): ಅನಿವಾರ್ಯವಾದರೆ ಬೆಳಗಾವಿಯಲ್ಲಿರುವ ಸುವರ್ಣಸೌಧವನ್ನು ಕೋವಿಡ್‌ ಆರೈಕೆ ಕೇಂದ್ರವನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ. 

ಸದ್ಯ ಹೊಟೇಲ್‌ ಅಥವಾ ಇನ್ನಿತರ ಕಟ್ಟಡಗಳನ್ನು ಆರೈಕೆ ಕೇಂದ್ರವನ್ನಾಗಿ ಮಾಡುತ್ತಿದ್ದೇವೆ. ಸುವರ್ಣಸೌಧವನ್ನು ಕೋವಿಡ್‌ ಆರೈಕೆ ಕೇಂದ್ರವನ್ನಾಗಿ ಮಾಡುವ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. 

ಬೆಳಗಾವಿ: 'ಸುವರ್ಣ ಸೌಧದಲ್ಲಿ ಕೋವಿಡ್ ಕೇರ್ ಸೆಂಟರ್‌ ಓಪನ್‌ ಮಾಡಿ ಜನರ ಜೀವ ಉಳಿಸಿ' ..

ಮುಂದೆ ಅನಿವಾರ್ಯವಾದರೆ ಈ ಬಗ್ಗೆ ಚಿಂತನೆ ನಡೆಸಲಾಗುವುದು ಎಂದಿದ್ದಾರೆ. ಸುವರ್ಣ ಸೌಧದಲ್ಲಿ ಕಳೆದೆರಡು ವರ್ಷಗಳಿಂದ ಅಧಿವೇಶನವೂ ನಡೆದಿಲ್ಲ. 

ಅಲ್ಲಿ ಸಾಕಷ್ಟುಸ್ಥಳಾವಕಾಶ ಇರುವ ಹಿನ್ನೆಲೆಯಲ್ಲಿ ಕೋವಿಡ್‌ ಆರೈಕೆ ಕೇಂದ್ರವನ್ನಾಗಿ ಮಾಡಿದರೆ ಬೆಳಗಾವಿ ಭಾಗದ ಸಾವಿರಾರು ಸೋಂಕಿತರಿಗೆ ಅನುಕೂಲವಾಗಲಿದೆ ಎಂದು ಆ ಭಾಗದ ಜನಪ್ರತಿನಿಧಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಸಾಮಾಜಿಕ ಮಾಧ್ಯಮದಲ್ಲಿಯೂ ಚರ್ಚೆ ಕೇಳಿಬಂದಿತ್ತು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona