Assembly Session: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಘೋಷಿಸುತ್ತಾರಾ ಸಿಎಂ?

ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಹತ್ತು ದಿನಗಳ ಕಾಲ ನಡೆಯಲಿರುವ ಈ ಅಧಿವೇಶನದಲ್ಲಿ ಹಲವು ದಿಟ್ಟ ನಿರ್ಧಾರ ಕೈಗೊಳ್ಳಲು ಬಿಜೆಪಿ ಸರ್ಕಾರ ಸಿದ್ಧಗೊಂಡಿದೆ. ಇದೇ ವೇಳೆ ಹಲವು ಸಮಸ್ಯೆಗಳನ್ನಿಟ್ಟುಕೊಂಡು ಸರ್ಕಾರದ ಮೇಲೆ ಮುಗಿಬೀಳಲು ಪ್ರತಿಪಕ್ಷ ತಯಾರಿ ನಡೆಸಿದೆ.

belagavi assembly winter session Will CM announce 2A reservation for Panchmasali community

ಬೆಳಗಾವಿ (ಡಿ.19): ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಹತ್ತು ದಿನಗಳ ಕಾಲ ನಡೆಯಲಿರುವ ಈ ಅಧಿವೇಶನದಲ್ಲಿ ಹಲವು ದಿಟ್ಟ ನಿರ್ಧಾರ ಕೈಗೊಳ್ಳಲು ಬಿಜೆಪಿ ಸರ್ಕಾರ ಸಿದ್ಧಗೊಂಡಿದೆ. ಇನ್ನೊಂದೆಡೆ ಹಲವು ಸಮಸ್ಯೆಗಳನ್ನಿಟ್ಟುಕೊಂಡು ಸರ್ಕಾರದ ಮೇಲೆ ಮುಗಿಬೀಳಲು ಪ್ರತಿಪಕ್ಷ ಕಾಂಗ್ರೆಸ್, ಜೆಡಿಎಸ್ ತಯಾರಿ ನಡೆಸಿದೆ.

ವಿಧಾನಸಭೆ ಚುನಾವಣೆ ಸಮೀಪಿಸಿರುವ ಹಿನ್ನೆಲೆ ಈ ಅಧಿವೇಶನ ಮಹತ್ವ ಪಡೆದುಕೊಂಡಿದೆ. ಈ ಅಧಿವೇಶನದಲ್ಲಿ ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2ಎ ಸಿಎಂ ಬಸವರಾಜ ಬೊಮ್ಮಾಯಿ ಮೀಸಲಾತಿ ಘೋಷಿಸುತ್ತಾರಾ?  ಈ ಬಗ್ಗೆ ತೀವ್ರ ಕುತೂಹಲ ಕೆರಳಿಸಿದೆ. 

ಬೆಳಗಾವಿ ಅಧಿವೇಶನ ಆರಂಭ ದಿನವೇ ಕ್ಯಾತೆ ತಗೆಯಲು ಮುಂದಾದ ಎಂಇಎಸ್!

ಈಗಾಗಲೇ ಪಂಚಮಸಾಲಿ ಸಮಾಜದಿಂದ 2A ಮೀಸಲಾತಿ ನೀಡಲು ಒತ್ತಾಯಿಸಿ ಹೋರಾಟ ನಡೆಸಲು ಸಜ್ಜಾಗಿದ್ದು, ಸವದತ್ತಿ ಪಟ್ಟಣದಲ್ಲಿ ಇಂದು ಸಂಜೆ ಲಿಂಗಾಯತ ಪಂಚಮಸಾಲಿ ಸಮಾವೇಶ ನಡೆಸಲು ನಿರ್ಧರಿಸಿದೆ. ಕೂಡಲ ಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಸಂಜೆ 4 ಗಂಟೆಗೆ ಸವದತ್ತಿ ತಾಲೂಕು ಕ್ರೀಡಾಂಗಣದಲ್ಲಿ ಪಂಚಮಸಾಲಿ ಲಿಂಗಾಯತ ಸಮಾವೇಶ ನಡೆಯಲಿದೆ. ಈ ಸಭೆಯಲ್ಲಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್,‌ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವರಾದ ವಿನಯ್ ಕುಲಕರ್ಣಿ, ವಿಜಯಾನಂದ ಕಾಶಪ್ಪನವರ್ ಸೇರಿ ಹಲವರು ಭಾಗಿಯಾಗಲಿದ್ದಾರೆ.

ಮೀಸಲಾತಿಗೆ ಅಂತಿಮ ಗಡುವು:  ಇಂದಿನ ಅಧಿವೇಶನದಲ್ಲಿ ಸಿಎಂ ಮೀಸಲಾತಿ ಘೋಷಿಸದೇ ಇದ್ದಲ್ಲಿ, ಪಾದಯಾತ್ರೆ ಮೂಲಕ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಲಿಂಗಾಯತ ಪಂಚಮಸಾಲಿ ಸಮುದಾಯ ಮುಖಂಡರು ನಿರ್ಧರಿಸಿದ್ದಾರೆ. 

ಇಂದು ಸವದತ್ತಿಯಲ್ಲಿ ನಡೆಯಲಿರುವ ಪಂಚಮಸಾಲಿ ಲಿಂಗಾಯತರ ಸಭೆಯಲ್ಲೇ ಸರ್ಕಾರಕ್ಕೆ ಮೀಸಲಾತಿ ನೀಡಲು ಅಂತಿಮ ಗಡವು ನೀಡುವ ಸಾಧ್ಯತೆಯಿದೆ. ಹೀಗಾಗಿ ಅಧಿವೇಶನದಲ್ಲಿ ಮೀಸಲಾತಿ ಘೋಷಣೆ ಆಗದಿದ್ದಲ್ಲಿ ಪಾದಯಾತ್ರೆ ಆರಂಭಿಸಲಿರುವ ಸಮುದಾಯ. ಸವದತ್ತಿ, ಬೆಳವಡಿ, ಕಿತ್ತೂರು  ಮಾರ್ಗವಾಗಿ ಸುವರ್ಣಸೌಧಕ್ಕೆ ಪಾದಯಾತ್ರೆ ತಲುಪಲಿದೆ. ಡಿಸೆಂಬರ್22 ರಂದು ಸುವರ್ಣ ಸೌಧದ ಮುತ್ತಿಗೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. 

Winter Session: ಇಂದಿನಿಂದ ಉತ್ತರಾಧಿವೇಶನ: ಸರ್ಕಾರ V/s ಕಾಂಗ್ರೆಸ್‌ ಕದನ!

'ಮಾಡು ಇಲ್ಲ ಮಡಿ' ಹೋರಾಟ: ಪಂಚಮಸಾಲಿಗೆ ಮೀಸಲಾತಿ ನೀಡುವಂತೆ ನಡೆಸುತ್ತಿರುವ ಹೋರಾಟ ಇದೀಗ ಮಾಡು ಇಲ್ಲವೇ ಮಡಿ ಹಂತದ ಹೋರಾಟಕ್ಕೆ ಸಿದ್ಧವಾಗಿದ್ದು, ಬೆಳಗಾವಿ ಅಧಿವೇಶನದಲ್ಲಿ ಮೀಸಲಾತಿ ಘೋಷಣೆಯಾಗದಿದ್ದಲ್ಲಿ ತೀವ್ರ ಹೋರಾಟ ನಡೆಸಲು ಸಮುದಾಯ ಮುಂದಾಗಿದೆ. ಈಗಾಗಲೇ ಸುವರ್ಣಸೌಧ ಬಳಿ ರಾಘವೇಂದ್ರ ಲೇಔಟ್‌ನಲ್ಲಿ ಬೃಹತ್ ಸಮಾವೇಶಕ್ಕೆ ಸಜ್ಜು. ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ನೀಡಿದ್ರೆ ಡಿ.22ರಂದು ಸಿಎಂಗೆ ಸನ್ಮಾನ. ಇಲ್ಲದಿದ್ರೆ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. 

ಅಧಿವೇಶನ ಆರಂಭದಲ್ಲೇ ಪ್ರತಿಭಟನೆ ಬಿಸಿ: ದಿನವೇ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ ತಟ್ಟಲಿದೆ. ಪ್ರತಿಭಟನೆ ಬಿಸಿ ಅಧಿವೇಶನದ ಮೊದಲ ದಿನವೇ ಮೂರು ಸಂಘಟನೆಗಳಿಂದ ಪ್ರತಿಭಟನೆ ಬಸ್ತವಾಡ ಗ್ರಾಮದ ಬಳಿ ನಿರ್ಮಿಸಿರುವ ನಿಯೋಜಿತ ಟೆಂಟ್‌ನಲ್ಲಿಸಂಘಟನೆಗಳು ಪ್ರತಿಭಟನೆ ನಡೆಸಲು ನಿರ್ಧರಿಸಿವೆ.  ಕಬ್ಬಿಗೆ ಬೆಂಬಲ‌ ಬೆಲೆ ನಿಗದಿ, ಕೃಷಿ ಕಾಯ್ದೆ ವಾಪಸ್ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎರಡು ರೈತ ಸಂಘಟನೆಗಳಿಂದ ಪ್ರತ್ಯೇಕ ಹೋರಾಟ ನಡೆಯಲಿದೆ. ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಒಂದು ಹಾಗೂ ವಾಸುದೇವ ಮೇಟಿ ನೇತೃತ್ವದಲ್ಲಿ ಪ್ರತ್ಯೇಕ ಪ್ರತಿಭಟನೆ ನಡೆಯಲಿದ್ದು,  ಸರ್ಕಾರ ರೈತರ ಬೇಡಿಕೆಗೆ ಸ್ಪಂದಿಸದಿದ್ದರೇ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗಿದೆ. ಮತ್ತೊಂದೆಡೆ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ನೌಕರರ ಶ್ರೇಯೋಭಿವೃದ್ದಿ ಸಂಘದಿಂದ ಬೃಹತ್ ಹೋರಾಟ ನಡೆಸಲು ನಿರ್ಧರಿಸಲಾಗಿದೆ.

ಒಟ್ಟಿನಲ್ಲಿ ಬೆಳಗಾವಿ ಚಳಿಗಾಲದ ಅಧಿವೇಶನ ಆರಂಭದಲ್ಲೇ ಹೊರಗಡೆ ಪ್ರತಿಭಟನೆ ಬಿಸಿ, ಒಳಗಡೆ ಆಡಳಿತ ಸರ್ಕಾರದ ಮೇಲೆ ಮುಗಿಬಿಳಲು ನಿರ್ಧರಿಸಲಾಗಿದ್ದು, ಅಧಿವೇಶನ ಆರಂಭಕ್ಕೆ ಮುನ್ನ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿರುವುದಂತೂ ಸುಳ್ಳಲ್ಲ.

Latest Videos
Follow Us:
Download App:
  • android
  • ios